16 C
Bangalore
Thursday, December 12, 2019

ಮೇಜರ್ ಕ್ಲಾಸ್​ನಲ್ಲಿ ಮಾಸ್ತರ ಫೇಲ್

Latest News

ಕಿರುತೆರೆಯ ಪಾರು ಜತೆ ನಾರಾಯಣ್

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಬಹಳಷ್ಟು ಆಸಕ್ತಿಕರವಾಗಿ ನೋಡಿಸಿಕೊಂಡು ಹೋಗುತ್ತಿರುವ ಧಾರಾವಾಹಿ ‘ಪಾರು’ ಈಗ ಮತ್ತಷ್ಟು ಕುತೂಹಲ ಮೂಡಿಸಿದೆ. ಅದಕ್ಕೆ ಕಾರಣ, ಬೆಳ್ಳಿತೆರೆಯ ಹಿರಿಯ...

ಸಡಗರದ ಹುತ್ತರಿ ಹಬ್ಬ ಕೊಡವನಾಡಿನ ಸುಗ್ಗಿ

ಹುತ್ತರಿ ಹಬ್ಬ ಕೊಡವ ಜನರ ದೊಡ್ಡ ಹಬ್ಬ. ಗದ್ದೆಯಲ್ಲಿ ಹುಲುಸಾಗಿ ಬೆಳೆದ ಬತ್ತದ ಪೈರನ್ನು ಆರಾಧಿಸಿ, ಕುಯ್ಲು ಮಾಡಿ ವಿಧ್ಯುಕ್ತವಾಗಿ ಮನೆತುಂಬಿಕೊಳ್ಳುವ ಸುಮುಹೂರ್ತವೇ...

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಧಾರವಾಡ: ಮೂಲಭೂತ ಹಕ್ಕುಗಳೆಷ್ಟು? ಅವು ಯಾವುವು? ಗಾಂಧೀಜಿ ಜನಿಸಿದ್ದು, ನಿಧನರಾಗಿದ್ದು ಯಾವಾಗ? ಸಂಧಿ ಎಂದರೇನು? ಪ್ರಕಾರಗಳೆಷ್ಟು? ಮುಂಗೈ, ಹೆಬ್ಬುಲಿ ಇವು ಯಾವ ಸಮಾಸಕ್ಕೆ ಉದಾಹರಣೆಗಳು?

ಹೀಗೆ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಕ್ಲಾಸ್ ತೆಗೆದುಕೊಂಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು, ಬೆವರಿಳಿಸಿ ಕಳುಹಿಸಿದ್ದಾರೆ.

ಅಂದಹಾಗೆ ಹುಬ್ಬಳ್ಳಿ ಗ್ರಾಮೀಣ ವಲಯದ 7-8 ಶಿಕ್ಷಕರು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರ ಭೇಟಿಗೆ ತೆರಳಿದ್ದರು. ಇಲಾಖೆಯ ಅಧಿಕಾರಿಗಳ ವಿರುದ್ಧ ದೂರು ನೀಡಲು ತೆರಳಿದ್ದ ಅವರು, ‘ಮೇಜರ್’ ಪಾಠದಲ್ಲಿ ಫೇಲ್ ಆಗಿ ಫಜೀತಿ ಅನುಭವಿಸುವಂತಾಗಿದೆ.

ಜು. 22ರಂದು ಧಾರವಾಡ ಕಚೇರಿಗೆ ತೆರಳಿದ್ದ ಶಿಕ್ಷಕರನ್ನು ‘ಶಾಲಾ ಅವಧಿಯಲ್ಲಿ ಏಕೆ ಬಂದಿದ್ದೀರಿ?’ ಎಂದು ಆಯುಕ್ತರು ವಿಚಾರಿಸಿದ್ದಾರೆ. ‘ರಜೆ ಹಾಕಿ ತಮ್ಮ ಭೇಟಿಗೆ ಬಂದಿದ್ದೇವೆ’ ಎಂದು ಶಿಕ್ಷಕರು ತಿಳಿಸಿದ್ದಾರೆ. ಆ ದಿನ ರಜೆಯ ಹಾಜರಾತಿ ಪರಿಶೀಲಿಸಿ ವರದಿ ನೀಡುವಂತೆ ಆಯುಕ್ತ ಹಿರೇಮಠ ಹುಬ್ಬಳ್ಳಿ ಗ್ರಾಮೀಣ ಬಿಇಒಗೆ ಸೂಚಿಸಿದ್ದಾರೆ.

ಶಿಕ್ಷಕರನ್ನು ಹಾಗೇ ಕಳುಹಿಸದ ಆಯುಕ್ತರು, ತಮ್ಮ ಕಚೇರಿಯಲ್ಲಿ ಕೂಡಿಸಿ ಪಾಠ ಮಾಡಿದ್ದಾರೆ. ಪ್ರಾಥಮಿಕ, ಪ್ರೌಢಶಾಲಾ ಹಂತದ ಪಠ್ಯಕ್ರಮಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಅದೇ ವಿಷಯಗಳನ್ನು ಬೋಧಿಸುವ ಶಿಕ್ಷಕರಿಗೆ ಕೇಳಿದಾಗ, ತಪ್ಪು ಉತ್ತರ ಕೊಟ್ಟು ಶಿಕ್ಷಕರು ಪೇಚಿಗೆ ಸಿಲುಕಿದ್ದಾರೆ.

ಹುಬ್ಬಳ್ಳಿ ಗ್ರಾಮೀಣ ವಲಯದ ಕುಸುಗಲ್ಲ ಸರ್ಕಾರಿ ಪ್ರಾಥಮಿಕ ಶಾಲೆಯ ವಿ.ಎಫ್. ಚುಳಕಿ ಹಾಗೂ ಬೆಂಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಆರ್.ಎಸ್. ಹೂಲಿ ಎಂಬುವರು ‘ಮೇಜರ್’ ಪ್ರಶ್ನೆಗಳಿಗೆ ಉತ್ತರಿಸಲು ವಿಫಲರಾಗಿದ್ದಾರೆ. ಶಿಕ್ಷಕ ವಿ.ಎಫ್. ಚುಳಕಿ 5, 6, 7ನೇ ತರಗತಿಗೆ ಸಮಾಜವಿಜ್ಞಾನ ಬೋಧಿಸುವುದಾಗಿ ತಿಳಿಸಿದ್ದಾರೆ. ಅವರ ಪಾಂಡಿತ್ಯ ಪರಿಶೀಲಿಸಲು ಮುಂದಾದ ಆಯುಕ್ತರು, ಮೂಲಭೂತ ಹಕ್ಕುಗಳೆಷ್ಟು, ಯಾವುವು? ಇತಿಹಾಸ, ಪೌರನೀತಿ, ಭೂಗೋಳದಲ್ಲಿರುವ ಪಾಠಗಳು ಯಾವುವು? ಆಸ್ಟ್ರೇಲಿಯಾ ಖಂಡದ ಪಾಠ ಯಾವ ತರಗತಿಯಲ್ಲಿದೆ ಎಂದಾಗ ಶಿಕ್ಷಕರಿಗೆ ಪರಿಚಯವೇ ಇರಲಿಲ್ಲ. ಪ್ರಾಚೀನ ನಾಗರಿಕತೆಗಳ ಬಗ್ಗೆ ಕೇಳಿದಾಗ ಉತ್ತರ ನೀಡಲಿಲ್ಲ. ಗಾಂಧೀಜಿ ಜನಿಸಿದ್ದು 1857ರ ಅ. 5ರಂದು ಎಂದು ತಪ್ಪು ಉತ್ತರ ನೀಡಿದ್ದಾರೆ. ಕ್ವಿಟ್ ಇಂಡಿಯಾ ಚಳವಳಿ ಹಾಗೂ ಜಲಿಯನ್ ವಾಲಿಬಾಗ್ ಹತ್ಯಾಕಾಂಡದ ಬಗ್ಗೆ ಉತ್ತರಿಸಲಿಲ್ಲ. ಅವರ ಜೊತೆಗಿದ್ದ ಕನ್ನಡ ಶಿಕ್ಷಕ ಎಸ್.ಆರ್. ಹೂಲಿ ಅವರನ್ನೂ ಆಯುಕ್ತರು ಸುಮ್ಮನೇ ಕಳಿಸಲಿಲ್ಲ. ಸಂಧಿ ಎಂದರೇನು, ಪ್ರಕಾರಗಳೆಷ್ಟು? ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ, ಅವರು ಉತ್ತರಿಸಲು ಅಸಮರ್ಥರಾಗಿದ್ದಾರೆ. ಇಬ್ಬರು ಶಿಕ್ಷಕರು ಬೋಧನೆಯಲ್ಲಿ

ತೊಡಗಿಕೊಳ್ಳದಿರುವುದು ಆಯುಕ್ತರ ಗಮನಕ್ಕೆ ಬಂದಿದೆ. ತರಗತಿಯಲ್ಲಿ ಪಾಠ ಮಾಡದೇ ಕಾಲಹರಣ ಮಾಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ಇಂಥ ಶಿಕ್ಷಕರಿಂದ ಸಮಾಜ, ಇಲಾಖೆ, ಮಕ್ಕಳು, ಪಾಲಕರು ಏನು ನಿರೀಕ್ಷಿಸಲು ಸಾಧ್ಯ ಎಂದು ಆಯುಕ್ತ ಹಿರೇಮಠ ಬೇಸರ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರು ತಮ್ಮ ವಿಷಯಗಳ ಬಗ್ಗೆ ಸಂಪೂರ್ಣ ಜ್ಞಾನ ಹೊಂದಿರಬೇಕು. ಮಕ್ಕಳ ಭವಿಷ್ಯ ರೂಪಿಸುವ ಶಿಲ್ಪಿಗಳಾಗಬೇಕು. 20 ವರ್ಷಗಳ ಅನುಭವಸ್ಥ ಶಿಕ್ಷಕರು ಬೋಧನಾ ಜ್ಞಾನ, ಕೌಶಲ ಹೊಂದಿಲ್ಲ. ಈ ಮೂಲಕ ಸಮಾಜ, ಇಲಾಖೆಗೆ ದ್ರೋಹ ಬಗೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿ, ಉತ್ತರ ಪಡೆದು ವರದಿ ನೀಡುವಂತೆ ಹುಬ್ಬಳ್ಳಿ ಗ್ರಾಮೀಣ ಬಿಇಒಗೆ ಸೂಚಿಸಿದ್ದೇನೆ. 
| ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅಪರ ಆಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ

ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತರು ಕೇಳಿದ ಪಠ್ಯ ವಿಷಯದ ಪ್ರಶ್ನೆಗಳಿಗೆ ಉತ್ತರಿಸದ ಶಿಕ್ಷಕರಾದ ವಿ.ಎಫ್. ಚುಳಕಿ, ಎಸ್.ಆರ್. ಹೂಲಿ ಅವರಿಗೆ ಕಾರಣ ಕೇಳಿ ಸಿಆರ್​ಪಿ ಮೂಲಕ ನೋಟಿಸ್ ನೀಡಲಾಗಿದೆ. ಅವರಿಂದ ಲಿಖಿತ ಉತ್ತರ ಪಡೆದು ಆಯುಕ್ತರಿಗೆ ಸಲ್ಲಿಸಲಾಗುವುದು. 
| ಎನ್.ಎಂ. ಹುಡೇದಮನಿ ಹುಬ್ಬಳ್ಳಿ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...