23.2 C
Bangalore
Saturday, December 14, 2019

ಮೈತ್ರಿಯಿಂದ ಬಿಜೆಪಿಗೆ ನಷ್ಟವಿಲ್ಲ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಸಾಗರ: ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಯಾವುದೇ ನಷ್ಟವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೂ ಫಲಿತಾಂಶ ಏನಾಯಿತು ಎಂಬುದು ಜನರಿಗೆ ಗೊತ್ತಿದೆ ಎಂದು ಸಚಿವ ಸಿ.ಟಿ.ರ ವಿ ಹೇಳಿದರು.

ಬಿಜೆಪಿ ರಾಷ್ಟ್ರೀಯವಾದ ಆಧರಿಸಿ ಚುನಾವಣೆ ಎದುರಿಸಲಿದೆ. ನಾವು ಯಾವುದೇ ಜಾತಿ, ಧರ್ಮ ಆಧರಿಸಿದ ಅಜೆಂಡಾ ಹೊಂದಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು. ಪಕ್ಷ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ 370ನೇ ವಿಧಿ ವಾಪಸ್, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ವಣ, ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವ ಭರವಸೆ ನೀಡಿತ್ತು. ಅದನ್ನು ದೇಶದ ಜನರು ಒಪ್ಪಿ ನಮಗೆ ಬಹುಮತ ನೀಡಿದ್ದಾರೆ ಎಂದರು.

ನಮೆಗೆಲ್ಲ ಸಂವಿಧಾನವೇ ಪ್ರಧಾನ: ಐಎಎಸ್ ಅಧಿಕಾರಿಯೊಬ್ಬರು ಸೇವೆಗೆ ರಾಜೀನಾಮೆ ಸಲ್ಲಿಸುವ ವೇಳೆ ವ್ಯಕ್ತಪಡಿಸಿರುವ ಅಭಿಪ್ರಾಯ ಅವರ ಸ್ವಂತದ್ದು. ನಮಗೆಲ್ಲ ಸಂವಿಧಾನವೇ ಪ್ರಧಾನ. ದೇಶದ ಜನರು ಬಿಜೆಪಿಗೆ ಬಹುಮತ ನೀಡಿದ್ದಾರೆ. ಅದನ್ನು ಪ್ರಶ್ನಿಸುವ ನೆಪದಲ್ಲಿ ಸಂವಿಧಾನದ ಆಶಯ ಪ್ರಶ್ನಿಸುವ ಕೆಲಸ ಆಗಬಾರದು. ಸಂವಿಧಾನದಡಿ ವ್ಯವಸ್ಥೆ ಒಪ್ಪಿಕೊಳ್ಳಲಾಗದಿರುವವರು ಅದರಿಂದ ಹೊರಬರುವುದು ಅಥವಾ ಅಲ್ಲೇ ಇರುವುದು ಅವರಿಗೆ ಬಿಟ್ಟ ವಿಚಾರ ಎಂದು ಸಿ.ಟಿ. ರವಿ ಹೇಳಿದರು.

ಮಾಸಾಶನ ಅರ್ಜಿ ಬಗ್ಗೆ ಕ್ರಮ: ಹಲವು ಕಲಾವಿದರಿಗೆ ಸರಿಯಾದ ದಾಖಲೆಗಳಿಲ್ಲ ಎನ್ನುವ ಕಾರಣಕ್ಕೆ ಮಾಸಾಶನ ಅರ್ಜಿ ವಾಪಸ್ ಕಳುಹಿಸಲಾಗಿದೆ ಎನ್ನುವ ವಿಚಾರ ಗಮನಕ್ಕೆ ಬಂದಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು. ಜೀವನಸಂಜೆಯಲ್ಲಿರುವ ಕಲಾವಿದರು ಎಲ್ಲ ದಾಖಲಾತಿ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಕಲಾವಿದರು ಆ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಬಗ್ಗೆ ದೃಢೀಕರಿಸುವ ಜವಾಬ್ದಾರಿ ಜಿಲ್ಲೆಯ ಸಹಾಯಕ ನಿರ್ದೇಶಕರಿಗೆ ನೀಡಬೇಕು ಎನ್ನುವ ಬಗ್ಗೆಯೂ ಸಲಹೆಗಳು ಕೇಳಿಬರುತ್ತಿವೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ದೊಡ್ಡ ನಗರಗಳಲ್ಲಿರುವವರು ಕೇವಲರು ದಾಖಲಾತಿ ತಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುದಾನ ಪಡೆದುಕೊಂಡು ಹೋಗುತ್ತಾರೆ ಎನ್ನುವ ಬಗ್ಗೆ ದೂರುಗಳಿವೆ. ಇನ್ಮುಂದೆ ಆ ರೀತಿ ಆಗುವುದಿಲ್ಲ. ಎಲ್ಲವನ್ನೂ ಆನ್​ಲೈನ್​ನಲ್ಲಿಯೇ ನೀಡಬೇಕಾಗಿರುವುದರಿಂದ ಜರಡಿ ಹಿಡಿದು ಸಾಣಿಸಲಾಗುತ್ತದೆ ಎಂದು ಹೇಳಿದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...