More

  ಮೇ.6ಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಷಾ ಬೆಳಗಾವಿಗೆ

  ಬೆಳಗಾವಿ: ಉತ್ತರ ಕರ್ನಾಟಕದ ಅತಿದೊಡ್ಡ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಳಗಾವಿ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ಪ್ರಚಾರಾರ್ಥವಾಗಿ ಬಿಜೆಪಿ ಚಾಣಕ್ಯ ಎಂದೇ ಖ್ಯಾತಿಯಾಗಿರುವ ಅಮಿತ್‌ ಷಾ ಮೇ.6 ರಂದು ಆಗಮಿಸಲಿದ್ದಾರೆ.

  18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಸಕ್ಕರೆ ಜಿಲ್ಲೆಯ ಅಥಣಿ, ರಾಯಬಾಗ, ಚಿಕ್ಕೋಡಿ ಹಾಗೂ ಸವದತ್ತಿಯಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಚಿಕ್ಕೋಡಿ ಬಿಜೆಪಿ ಘಟಕದ ಜಿಲ್ಲಾಧ್ಯಕ್ಷ ರಾಜೇಂದ್ರ ನೇರ್ಲಿ ತಿಳಿಸಿದ್ದಾರೆ.
  ಅಮಿತ್‌ ಷಾ ಅವರು, ಅಥಣಿಯಲ್ಲಿ ಮೇ.6 ರಂದು ಮ.12.45 ರಿಂದ 1.30ರವರೆಗೆ ಚುನಾವಣೆ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು, ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಪರವಾಗಿ ಮತದಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ರಾಯಬಾಗ ವಿಧಾನಸಭಾ ಕ್ಷೇತ್ರದಲ್ಲಿ ಧುರ್ಯೋಧನ ಐಹೊಳೆ ಪರವಾಗಿ ಮಧ್ಯಾಹ್ನ 3-4ಗಂಟೆಯವರೆಗೆ ವರೆಗೆ ಬಹಿರಂಗ ಪ್ರಚಾರಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.40 ರಿಂದ 5.30ರವರೆಗೆ ಚಿಕ್ಕೋಡಿ ವಿಧಾನಸಭಾ ಕ್ಷೇತ್ರದಲ್ಲಿ ರಮೇಶ ಕತ್ತಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಅದೇ ದಿನ ಸಂಜೆ 6.20 ರಿಂದ 7.15ರ ವರೆಗೆ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದಲ್ಲಿ ರತ್ನಾ ಮಾಮನಿ ಪರವಾಗಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ ಎಂದು ಜಿಲ್ಲಾಧ್ಯಕ್ಷರು ʻವಿಜಯವಾಣಿʼಗೆ ತಿಳಿಸಿದ್ದಾರೆ.

  
  

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts