ಮೊಬೈಲ್ ಆಪ್ ಬೆಳೆ ಸಮೀಕ್ಷೆ ಇಂದಿನಿಂದ

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ಗದಗ: ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಕೃಷಿ ಇಲಾಖೆ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಜಿಲ್ಲೆಯಲ್ಲಿ ಜು. 23ರಿಂದ ಆರಂಭವಾಗಲಿದೆ.

ಆಂಡ್ರಾಯಿಡ್ ಮೊಬೈಲ್ ಹೊಂದಿರುವ ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಉತ್ತೀರ್ಣರಾದ ಯುವಕ-ಯುವತಿಯರನ್ನು ಬಳಸಿಕೊಂಡು ಬೆಳೆ ಸಮೀಕ್ಷೆ ಮಾಡಲಾಗುತ್ತಿದೆ. ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಮಾಡಲು ಜಿಲ್ಲೆಯಲ್ಲಿ ಒಟ್ಟು 340 ಜನರಿಗೆ ತರಬೇತಿ ನೀಡಲಾಗಿದೆ.

ರೈತರು ಬೆಳೆದ ಬೆಳೆಯ ಬಗ್ಗೆ ಪ್ರಾಯೋಗಿಕವಾಗಿ ಕೆಲವು ಗ್ರಾಮೀಣ ಭಾಗದಲ್ಲಿ ತುಲನೆ ಮಾಡಿದಾಗ ವಾಸ್ತವತೆಗೂ, ಅಂದಾಜಿಗೂ ಸಾಕಷ್ಟು ವ್ಯತ್ಯಾಸ ಕಂಡುಬರುತ್ತಿತ್ತು. ಇದನ್ನು ಗಮನಿಸಿದ ಸರ್ಕಾರ ಕಳೆದ ಎರಡು ವರ್ಷಗಳಿಂದ ಮೊಬೈಲ್ ಆಪ್ ಮೂಲಕ ಬೆಳೆ ಸಮೀಕ್ಷೆ ನಡೆಸುತ್ತಿದೆ. 2017ರಲ್ಲಿ ಪ್ರಾಯೋಗಿಕವಾಗಿ ಪ್ರಯೋಗ ಮೊಬೈಲ್ ಆಪ್ ಮೂಲಕ ಆರಂಭಿಸಲಾಯಿತು. 2018ರಲ್ಲಿ ಮುಂಗಾರು ಬೆಳೆ ಮಾತ್ರ ಸಮೀಕ್ಷೆ ನಡೆಸಲಾಯಿತು. ಈ ವರ್ಷದಿಂದ ವ್ಯವಸ್ಥಿತವಾಗಿ ರಾಜ್ಯದಲ್ಲಿ ಸಮೀಕ್ಷೆ ನಡೆಸಲು ತೀರ್ವನಿಸಿದೆ. ಯಾವ ಸರ್ವೆ ನಂಬರ್​ಗಳಲ್ಲಿ ರೈತರು ಯಾವ ಬೆಳೆ ಬೆಳೆದಿದ್ದಾರೆ ಎಂಬುದರ ಕುರಿತು ಮೊಬೈಲ್ ಆಪ್ ಮೂಲಕ ಮಾಹಿತಿ ಪಡೆದುಕೊಳ್ಳುವ ವ್ಯವಸ್ಥೆ ಇದಾಗಿದೆ.

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯ ಸರ್ಕಾರ ಇಂಥದ್ದೊಂದು ಯೋಜನೆ ರೂಪಿಸಿದೆ. ಬರ, ಅತಿವೃಷ್ಟಿಯ ಕುರಿತು ಪರಿಹಾರಕ್ಕಾಗಿ ಕೇಂದ್ರಕ್ಕೆ ಮನವಿ ಸಲ್ಲಿಸುವುದು ವಾಡಿಕೆ. ಆಗ ವಾಸ್ತವತೆಗೂ ಹಾಗೂ ಅಂಕಿ ಅಂಶಗಳಿಗೂ ಸಾಕಷ್ಟು ವ್ಯತ್ಯಾಸ ಕಂಡುಬರುತ್ತಿರುವುದರಿಂದ ಆಡಳಿತಾತ್ಮಕ ತೊಂದರೆ ಉಂಟಾಗಿ ಪರಿಹಾರ ಬಿಡುಗಡೆ ತಡವಾಗುವುದು ಸೇರಿ ಇನ್ನಿತರ ಸಮಸ್ಯೆ ಎದುರಾಗುತ್ತಿವೆ. ಇದನ್ನು ಮನಗಂಡು ರಾಜ್ಯ ಸರ್ಕಾರ ಮೊಬೈಲ್ ಆಪ್ ಮೂಲಕ ನಿಖರವಾಗಿ ಬೆಳೆಯ ಕುರಿತು ಮಾಹಿತಿ ಪಡೆದುಕೊಳ್ಳಲು ಮುಂದಾಗಿದೆ.

ಸಮೀಕ್ಷೆ ಮಾಡುವ ಸಿಬ್ಬಂದಿಗೆ ಒಂದು (ಹೊಲ) ಸಮೀಕ್ಷೆಗೆ 10 ರೂ. ಸಂಭಾವನೆ ನೀಡಲು ನಿರ್ಧರಿಸಲಾಗಿದ್ದು, ಪ್ರತಿನಿತ್ಯ 30ರಿಂದ 50 ಸಮೀಕ್ಷೆ ಮಾಡಬೇಕೆಂದು ಸೂಚಿಸಲಾಗಿದೆ. ಸಮೀಕ್ಷೆಯ ವಿವರವನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಯ ಗ್ರಾಮ ಲೆಕ್ಕಿಗರಿಗೆ ನೀಡಲಾಗುವುದು.

ಈ ಹಿಂದೆ ರೈತರು ಯಾವ ಬೆಳೆ ಬೆಳೆಯುತ್ತಾರೆ ಎಂಬುದರ ಬಗ್ಗೆ ಪಹಣಿಯಲ್ಲಿ ಕಡ್ಡಾಯವಾಗಿ ಮಾಹಿತಿ ದಾಖಲು ಮಾಡಲಾಗುತ್ತಿತ್ತು. ಇದರಿಂದ ಕೃಷಿ ಮತ್ತು ತೋಟಗಾರಿಕೆ ಇಲಾಖೆಯು ಯಾವ ಬೆಳೆ ಎಷ್ಟು ಪ್ರಮಾಣದಲ್ಲಿದೆ ಎಂದು ಅಂದಾಜಿಸಲು ಸಾಧ್ಯವಾಗುತ್ತಿತ್ತು. ಆದರೆ, ಕಾಲಕ್ರಮೇಣ ಈ ಪದ್ಧತಿಯು ಸಡಿಲಗೊಂಡಿತು. ಪರಿಣಾಮ ನಿಖರವಾದ ಮಾಹಿತಿ ಲಭ್ಯವಾಗುತ್ತಿರಲಿಲ್ಲ ಎಂಬುದು ಅಧಿಕಾರಿಗಳು ಹೇಳುತ್ತಿದ್ದಾರೆ.

ಅನುಕೂಲವೇನು?: ರೈತರು ಯಾವ ಬೆಳೆಯನ್ನು ಎಷ್ಟು ಎಕರೆ ಪ್ರದೇಶದಲ್ಲಿ ಬೆಳೆದಿದ್ದಾರೆ. ಬರ, ನೆರೆ ಬಂದು ಬೆಳೆ ನಷ್ಟವಾದಾಗ ಯಾವ ಬೆಳೆ, ಎಷ್ಟು ಪ್ರದೇಶದಲ್ಲಿ ನಷ್ಟವಾಗಿದೆ ಎಂಬ ಮಾಹಿತಿಯನ್ನು ನಿಖರವಾಗಿ ಆಪ್ ಮೂಲಕ ಪಡೆದುಕೊಳ್ಳಬಹುದು. ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಲು ಹಾಗೂ ಪರಿಹಾರ ಬಿಡುಗಡೆ ನಂತರ ರೈತರಿಗೆ ಸಮರ್ಪಕವಾಗಿ ಪರಿಹಾರ ವಿತರಿಸಲು ಅನುಕೂಲವಾಗಲಿದೆ ಎಂಬ ದೃಷ್ಟಿಯಿಂದ ಸರ್ಕಾರ ಆಪ್ ಮೂಲಕ ಬೆಳೆ ಸಮೀಕ್ಷೆ ಮಾಡುವ ಕಾರ್ಯವನ್ನು ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಪ್ ಮೂಲಕ ಬೆಳೆ ಸಮೀಕ್ಷೆ ಮಾಡುವ ಕಾರ್ಯ ಜಿಲ್ಲೆಯಲ್ಲಿ ಜು 23ರಿಂದ ಆರಂಭವಾಗಲಿದೆ. ಇದಕ್ಕಾಗಿ ಈಗಾಗಲೇ ಸಾಕಷ್ಟು ಜನರಿಗೆ ತರಬೇತಿ ನೀಡಲಾಗಿದೆ. ತರಬೇತಿ ಪಡೆದಿರುವ ಜನರಿಗೆ ಆಪ್ ಬಳಕೆ ಮಾಡುವುದು, ಸಮೀಕ್ಷೆ ಮಾಡವುದರ ಕುರಿತು ತಿಳಿವಳಿಕೆ ನೀಡಲಾಗಿದ್ದು, ಎಲ್ಲರಿಗೂ ಯೂಸರ್ ನೇಮ, ಪಾಸ್​ವರ್ಡ್ ನೀಡಲಾಗಿದ್ದು, ಮಂಗಳವಾರದಿಂದ ಬೆಳೆ ಸಮೀಕ್ಷೆ ಕಾರ್ಯ ಶುರುವಾಗಲಿದೆ.
| ರುದ್ರೇಶಪ್ಪ, ಜಂಟಿ ನಿರ್ದೇಶಕ, ಕೃಷಿ ಇಲಾಖೆ ಗದಗ

——————–

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...