16 C
Bangalore
Saturday, December 7, 2019

ಮೋಟಾರು ವಾಹನ ಕಾಯ್ದೆ ವಿರುದ್ಧ ಪ್ರತಿಭಟನೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಹಾನಗಲ್ಲ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೋಟಾರು ವಾಹನ ಕಾಯ್ದೆ ಅವೈಜ್ಞಾನಿಕವಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೆ ಸರ್ಕಾರ ಆದೇಶ ಹಿಂಪಡೆದು, ಸರಳೀಕರಣಗೊಳಿಸಬೇಕು ಎಂದು ಆಗ್ರಹಿಸಿ ವಕೀಲರ ಸಂಘ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಗುರುವಾರ ಮನವಿ ಅರ್ಪಿಸಿತು.

ಪಟ್ಟಣದ ನ್ಯಾಯಾಲಯದ ಆವರಣದಿಂದ ಮಹಾತ್ಮಾ ಗಾಂಧಿ ವೃತ್ತದವರೆಗೆ ವಕೀಲರು ಪ್ರತಿಭಟನಾ ಮೆರವಣಿಗೆ ನಡೆಸಿ, ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ 1988ರ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಮಾಡಿರುವುದರಿಂದ ಎಲ್ಲರಿಗೂ ಸಮಸ್ಯೆಯಾಗುತ್ತಿದೆ. ಜನಸಾಮಾನ್ಯರಲ್ಲದೆ, ರೈತರು ಹಾಗೂ ಬಡವರ್ಗದ ಜನತೆಗೆ ಈ ಆದೇಶ ತೀವ್ರ ಸಂಕಷ್ಟ ತಂದಿದೆ. ಮಿತಿ ಮೀರಿದ ದಂಡ ಪಾವತಿಸಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. 15 ದಿನಗಳೊಳಗಾಗಿ ಕೇಂದ್ರ ಸರ್ಕಾರ ಈ ಆದೇಶ ಹಿಂಪಡೆಯಬೇಕು. ಕೇಂದ್ರ ಇದಕ್ಕೆ ಸ್ಪಂದಿಸದಿದ್ದಲ್ಲಿ ಸುಪ್ರೀಂಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ವಕೀಲರ ಸಂಘದ ಅಧ್ಯಕ್ಷ ಸೋಮಶೇಖರ ಕೋತಂಬ್ರಿ, ಕಾರ್ಯದರ್ಶಿ ರಮೇಶ ತಳವಾರ, ವಿನಾಯಕ ಕುರುಬರ, ರವಿಬಾಬು ಪೂಜಾರ, ಎಂ.ವಿ. ಪಾಟೀಲ, ನಾಗರಾಜ ವಿರುಪಣ್ಣನವರ, ಸಚಿನ್ ತಟ್ಟಿ, ಸತೀಶ ತಿಳವಳ್ಳಿ, ಎ.ಎಂ. ಮುಂಡರಗಿ, ಬಿ.ಎಸ್. ಅಕ್ಕಿವಳ್ಳಿ, ಬಿ.ಎಸ್. ಕುಲಕರ್ಣಿ, ರವಿ ವಡೆಯರ, ಬಿ.ಎಸ್. ದಳವಾಯಿ, ಎನ್.ಎಂ. ಮುಲ್ಲಾ, ಎಂ.ಎಂ. ಉಪ್ಪಿನ, ಪ್ರಶಾಂತ ಕಾಮನಹಳ್ಳಿ ಇತರರು ಉಪಸ್ಥಿತರಿದ್ದರು.

ಕಾಯ್ದೆ ತಿದ್ದುಪಡಿ ಪರಾಮರ್ಶೆಗೆ ಆಗ್ರಹ

ಬ್ಯಾಡಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೋಟರ್ ಕಾಯ್ದೆ ಸಾರ್ವಜನಿಕರ ಜನಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದ್ದು, ಕೂಡಲೆ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ವಕೀಲರು ಗುರುವಾರ ಪ್ರತಿಭಟನೆ ನಡೆಸಿದರು.

ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ ಬನ್ನಿಹಟ್ಟಿ ಮಾತನಾಡಿ, ಇಂತಹ ಜನವಿರೋಧಿ ಕಾಯ್ದೆ ಜಾರಿಗೊಳಿಸುವ ಮುನ್ನ ಮತ್ತೊಮ್ಮೆ ಪರಾಮರ್ಶೆ ಮಾಡುವುದು ಒಳಿತು. ಕೇಂದ್ರ ಸರ್ಕಾರ ಈ ಕುರಿತು ಚಿಂತನೆ ಮಾಡಬೇಕಿದೆ ಎಂದರು.

ಎಪಿಎಂಸಿ ಅಧ್ಯಕ್ಷ ಕರಬಸಪ್ಪ ನಾಯ್ಕರ, ವಕೀಲರ ಸಂಘದ ಉಪಾಧ್ಯಕ್ಷ ಎಸ್.ಎಸ್. ಶೆಟ್ಟರ, ಕಾರ್ಯದರ್ಶಿ ಸಿ.ಪಿ. ದೊಣ್ಣೇರ, ಎಂ.ಎ. ಕೋಡಿಹಳ್ಳಿ ಸದಸ್ಯರಾದ ಡಿ.ಎಚ್. ಬುಡ್ಡನಗೌಡ್ರ, ಎನ್.ಎಂ. ಹುಬ್ಬಳ್ಳಿ, ಕೆ.ಡಿ. ಪಾಟೀಲ, ಪಿ.ಸಿ. ಸದ್ದಲಗಿ, ಬಿ.ಸಿ. ಕಾರಗಿ, ಎಂ.ಎಂ. ಮುಚ್ಚಟ್ಟಿ, ಪಿ.ಎಸ್. ಚಳಗೇರಿ, ಎಚ್.ವಿ. ಪಾಟೀಲ, ಎಂ.ಎಚ್. ಜಾಧವ, ಪಿ.ಸಿ. ಶಿಗಿಹಳ್ಳಿ, ಎಫ್.ಎಂ. ಮುಳುಗುಂದ, ಎಸ್.ಎಸ್. ಶೆಟ್ಟರ, ಎಂ.ಕೆ. ಕೋಡಿಹಳ್ಳಿ, ಪಿ.ಆರ್. ಮಠದ, ಭಾರತಿ ಕುಲಕರ್ಣಿ, ಆರ್.ವಿ. ಬೆಳಕೇರಿಮಠ, ಎಂ.ಜೆ. ಮುಲ್ಲಾ ಇತರರಿದ್ದರು.

ಕಲಾಪ ಸ್ಥಗಿತ: ಕೇಂದ್ರದ ಮೋಟಾರ್ ಕಾಯ್ದೆ ವಿರೋಧಿಸಿ ವಕೀಲರು ನ್ಯಾಯಾಲಯದ ಕಲಾಪದಿಂದ ದೂರ ಉಳಿಯುವ ಮೂಲಕ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು. ಹೀಗಾಗಿ ಬಹುತೇಕ ಕಕ್ಷಿದಾರರು ನ್ಯಾಯಾಲಯದ ಬಳಿ ಕಾಯ್ದು ಸುಸ್ತಾಗಿ ತಮ್ಮೂರಿಗೆ ಮರಳಿದರು.

ರೈತರ ಹೋರಾಟಕ್ಕೆ ಬೆಂಬಲ: ಬ್ಯಾಡಗಿ ತಾಲೂಕಿನ ವಿವಿಧ ಕೆರೆ-ಕಟ್ಟೆಗಳನ್ನು ನದಿ ನೀರು ತುಂಬಿಸುವ, ಮುಖ್ಯರಸ್ತೆ ವಿಸ್ತರಣೆ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ವಕೀಲರ ಸಂಪೂರ್ಣ ಬೆಂಬಲವಿದೆ. ಸೆ. 21ರಂದು ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಎಲ್ಲರೂ ಪಾಲ್ಗೊಂಡು ಸಹಕಾರ ನೀಡುತ್ತೇವೆ ಎಂದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...