ಇಳಕಲ್ಲ (ಗ್ರಾ) : ದೇಶದ ಪ್ರಧಾನ ಮಂತ್ರಿಯಾಗಿ ಹನ್ನೊಂದು ವರ್ಷ ಪೂರೈಸಿದ ನರೇಂದ್ರ ಮೋದಿ ವಿಶ್ವ ಕಂಡ ಮಹಾನ್ ನಾಯಕ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಬಣ್ಣಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಹನ್ನೊಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನದ ಮಗ್ಗಲು ಮುರಿದು ಅದು ಭಿಕ್ಷೆ ಬೇಡುವಂತೆ ಮಾಡಿದ್ದಾರೆ ಎಂದರು.
ವಿಶ್ವದ ಬೇರೆ ಬೇರೆ ದೇಶಗಳ 27 ಗೌರವವನ್ನು ಪಡೆದುಕೊಂಡು ಮುನ್ನುಗ್ಗುತ್ತಿರುವ ನರೇಂದ್ರ ಮೋದಿ ಅವರು ಇಡೀ ವಿಶ್ವದಲ್ಲೇ ನಂಬರ್ ಒನ್ ನಾಯಕರಾಗುವ ದಿನಗಳು ದೂರವಿಲ್ಲ ಎಂದು ಹೇಳಿದರು.
ಜಿಲ್ಲಾ ಕಾರ್ಯದರ್ಶಿ ಮಲ್ಲಯ್ಯ ಮೂಗನೂರ, ನಗರ ಘಟಕ ಅಧ್ಯಕ್ಷ ಅರವಿಂದ ಮಂಗಳೂರ, ಗ್ರಾಮೀಣ ಘಟಕ ಅಧ್ಯಕ್ಷ ಮಹಾಂತಗೌಡ ಪಾಟೀಲ ತೊಂಡಿಹಾಳ, ಜಿಲ್ಲಾ ಸಂಚಾಲಕ ಬಸವರಾಜ, ಡಾ. ಮಲ್ಲಿಕಾರ್ಜುನ ಗಡಿಯಣ್ಣನವರ ಉಪಸ್ಥಿತರಿದ್ದರು.