21 C
Bengaluru
Thursday, January 23, 2020

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು.

ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ ಮತ್ತು ಸಾಂಸ್ಕೃತಿ ಇಲಾಖೆ, ಬಿಜ್ಜಹಳ್ಳಿ ಸುಗ್ಗಿ ಸಾಂಸ್ಕೃತಿಕ ಮತ್ತು ಸಾಮಾಜಿಕ ಟ್ರಸ್ಟ್ ಹಾಗು ಜ್ಞಾನವಾಹಿನಿ ಪ್ರೌಢಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.

ಭಾರತೀಯ ಸಂಸ್ಕೃತಿ ಎಲ್ಲ ದೇಶಗಳ ಸಂಸ್ಕೃತಿಗಿಂತಲೂ ವಿಶಿಷ್ಟವಾಗಿದ್ದು, ಇದರ ಉಳಿವಿಗಾಗಿ ಶ್ರಮಿಸಬೇಕಿದೆ. ನಮ್ಮ ಜಾನಪದ ಕಲೆಗಳು ಅತ್ಯಂತ ಶ್ರೀಮಂತಿಕೆಯಿಂದ ಕೂಡಿದ್ದು, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗುತ್ತವೆ ಎಂದು ಹೇಳಿದರು.

ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಮಾತನಾಡಿ, ಯುವಜನ ಮೊಬೈಲ್, ಟಿವಿಗಳಿಗೆ ಅಂಟಿಕೊಂಡಿದ್ದು, ಜಾನಪದ ಕಲೆಗಳನ್ನು ಮರೆಯುತ್ತಿರುವುದು ಬೇಸರದ ಸಂಗತಿಯಾಗಿದೆ. ಪ್ರತಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದರೆ ನಮ್ಮ ಸಂಸ್ಕೃತಿ ಉಳಿವಿಗೆ ಸಹಕಾರಿಯಾಗಲಿದೆ ಎಂದರು.

ಕನ್ನಡ ಮತ್ತು ಸಾಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಶಂಕರಪ್ಪ ಮಾತನಾಡಿ, ಜಾನಪದ ಉಳಿಸಲು ಜನರ ಸಹಕಾರ ಅಗತ್ಯ ಎಂದರು.

ಕಾರ್ಯಕ್ರಮ ಆಯೋಜಕ ಮತ್ತು ಜಾನಪದ ಅಕಾಡೆಮಿ ಸದಸ್ಯ ಕೆ.ಕಾಳಯ್ಯ, ಜಿಪಂ ಅಧ್ಯಕ್ಷ ಎಚ್.ಬಸಪ್ಪ, ಗ್ರಾಪಂ ಅಧ್ಯಕ್ಷ ರಮೇಶ್, ತಾಪಂ ಮಾಜಿ ಉಪಧ್ಯಕ್ಷ ಕೆ.ಎಂ ಮಹದೇಶ್, ಕೋಡಿಹಳ್ಳಿ ಶಾಲೆ ಮುಖ್ಯ ಶಿಕ್ಷಕ ಉಮಾಕಾಂತ್, ಜ್ಞಾನವಾಹಿನಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ಕೆ.ಟಿ ಮುತ್ತುಸ್ವಾಮಿ, ಶಿಕ್ಷಕರಾದ ಹೇಮಂತ್, ಕುಮಾರ್ ಇದ್ದರು.

ಚಿಗುರು ಕಾರ್ಯಕ್ರಮ ಪ್ರಯುಕ್ತ ತಮಟೆ, ಡೋಲು ಬಾರಿಸುತ್ತಾ ಭರತನಾಟ್ಯ, ಸಮೂಹ ನೃತ್ಯ, ಗೀತಗಾಯನದ ಜಾನಪದ ನೃತ್ಯ, ಪಟಕುಣಿತ, ಪೂಜಾಕುಣಿತ, ಕಂಸಾಳೆ. ವೀರಗಾಸೆ, ಕೊಳಲು ವಾದನ ನೆರೆದವರ ಮನರಂಜಿಸಿತು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...