20.8 C
Bangalore
Sunday, December 8, 2019

ಯುವಕರಿಂದ ನೂತನ ಪ್ರಯೋಗ ನಡೆಯಲಿ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಧಾರವಾಡ: ವಿವಿಧ ಕ್ಷೇತ್ರಗಳಲ್ಲಿ ವಿಶ್ವಕ್ಕೆ ಅನನ್ಯ ಕೊಡುಗೆ ನೀಡಿರುವ ಭಾರತ ದೇಶದಲ್ಲಿ ಸಕಲ ಸೌಕರ್ಯಗಳಿದ್ದರೂ ನಮ್ಮ ದೇಶ ವಿಶ್ವವನ್ನು ಆಳುತ್ತಿಲ್ಲ. ಅದಕ್ಕೆ ನಮ್ಮ ಮನಸ್ಥಿತಿಯೇ ಕಾರಣ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಕುಲಸಚಿವ ಡಾ. ಎ.ಎಸ್. ದೇಶಪಾಂಡೆ ಹೇಳಿದರು.

ನಗರದ ಎಸ್​ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಡಿವಿಎಚ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಎಂಬಿಎ ಪದವಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಡೆದ ಪದವಿ ಅವರನ್ನು ವೃತ್ತಿಪರರನ್ನಾಗಿಸಲು ಸಾಧ್ಯವಿಲ್ಲ. ಅವರು ತಮ್ಮ ಕೆಲಸದ ಮೂಲಕ ತಾನೂ ಪದವೀಧರ ಎಂಬುದನ್ನು ತೋರಿಸಬೇಕು. ಒಂದು ಉತ್ತಮ ಕೆಲಸಕ್ಕೆ ಭದ್ರ ಬುನಾದಿ, ತಂತ್ರಜ್ಞಾನದ ಮಾಹಿತಿ ಹಾಗೂ ವಿಷಯ ಪ್ರಸ್ತುತಿ ಅತ್ಯಂತ ಮುಖ್ಯ. ಈ ಎಲ್ಲ ಅಂಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅವಶ್ಯವಾಗಿ ಮೈಗೂಡಿಸಿಕೊಳ್ಳಬೇಕು ಎಂದರು.

ನಮ್ಮ ಯುವಕರಲ್ಲಿ ನಿರುತ್ಸಾಹ ಮನೋಭಾವ ಇರುವುದರಿಂದಲೇ ನಮ್ಮ ದೇಶ ಸಂಪೂರ್ಣ ಅಭಿವೃದ್ಧಿ ಹೊಂದಲು ಸಾಧ್ಯವಾಗಿಲ್ಲ. ಆದರೆ ಉಳಿದ ದೇಶಗಳಲ್ಲಿ ಕೆಲಸ, ಹೊಸ ಪ್ರಯೋಗಗಳಿಗೆ ಯುವಕರು ಹೆಚ್ಚು ಉತ್ಸಾಹ ತೋರುತ್ತಿರುವ ಕಾರಣಕ್ಕೆ ಆ ದೇಶಗಳು ಅಭಿವೃದ್ಧಿ ಹೊಂದುತ್ತಿವೆ. ವಿದ್ಯಾರ್ಥಿಗಳಲ್ಲಿ ಎಸ್​ಡಿಎಂ ಸಂಸ್ಥೆ ಸಂಸ್ಕೃತಿ ಕಲಿಸಿದೆ. ಅದನ್ನು ಜೀವನದುದ್ದಕ್ಕೂ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿ, ಪ್ರತಿಯೊಬ್ಬರೂ ಶ್ರದ್ಧೆ, ನಿಷ್ಠೆಯಿಂದ ಕರ್ತವ್ಯ ನಿಭಾಯಿಸುವುದು ಮುಖ್ಯವಾಗಿದೆ. ವಿದ್ಯಾರ್ಥಿಗಳು ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.

ಎಸ್​ಡಿಎಂ ಕಾರ್ಯದರ್ಶಿ ಜೀವಂಧರಕುಮಾರ, ಪ್ರಾಚಾರ್ಯ ಡಾ. ಎಸ್.ಬಿ. ವಣಕುದುರೆ, ಎಂಬಿಎ ವಿಭಾಗದ ನಿರ್ದೇಶಕ ಡಾ. ಎಚ್.ಎಸ್. ಪ್ರಕಾಶ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಗೋಪಿನಾಥ, ಇತರರು ಇದ್ದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...