Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಯುವ ಮತದಾರರ ಸೆಳೆಯಲು ಕಾಂಗ್ರೆಸ್​ನಿಂದ ಕಾರ್ಯತಂತ್ರ

Saturday, 11.08.2018, 3:02 AM       No Comments

ನವದೆಹಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೊಸ ಮತದಾರರನ್ನು ಸೆಳೆಯಲು ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್, ಮೊದಲ ಸಲ ಮತಹಾಕುವವರನ್ನು ದೇಶಾದ್ಯಂತ ಗುರುತಿಸುವ ಕಾರ್ಯ ಆರಂಭಿಸಿದೆ. ಈ ಆಂದೋಲನವನ್ನು ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್​ಎಸ್​ಯುುಐ) ಕಾರ್ಯಕರ್ತರು ನಡೆಸುತ್ತಿದ್ದಾರೆ. ಇವರು ವಾರ್ಡ್ ಗಳಲ್ಲಿ ಸಮೀಕ್ಷೆ ನಡೆಸಿ ಅರ್ಹ ಯುವಕ/ಯುವತಿಯರ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲು ಸಹಾಯ ಮಾಡಲಿದ್ದಾರೆ. ಜತೆಗೆ ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಇಂಗ್ಲಿಷ್ ಕಲಿಸುವುದು, ಪೇಯಿಂಗ್ ಗೆಸ್ಟ್​ಗಳಲ್ಲಿರುವ ಈಶಾನ್ಯ ಭಾರತದ ಮಹಿಳೆಯರನ್ನು ಗುರುತಿಸಿ ಅವರ ಭದ್ರತೆ ವಿಚಾರಿಸುವ ಕಾರ್ಯವನ್ನೂ ಮಾಡಲಿದ್ದಾರೆ. ಕಾಲೇಜು ಮಟ್ಟದಲ್ಲಿ ಕಾರ್ಯಾಗಾರ ಆಯೋಜಿಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಮತ್ತು ಸಂಕಷ್ಟ ಕಾಲದಲ್ಲಿ ನೆರವು ನೀಡುವ ಕೆಲಸವನ್ನು ಈ ಕಾರ್ಯಕರ್ತರು ಮಾಡಲಿದ್ದಾರೆ. -ಏಜೆನ್ಸೀಸ್

Leave a Reply

Your email address will not be published. Required fields are marked *

Back To Top