20.4 C
Bangalore
Monday, December 9, 2019

ಯೋಗ, ಆರೋಗ್ಯ ಅಣ್ಣ-ತಮ್ಮ ಇದ್ದಂತೆ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಶಿರಸಿ: ಯೋಗ ಮತ್ತು ಆರೋಗ್ಯ ಅಣ್ಣ ತಮ್ಮಂದಿರಿದ್ದಂತೆ. ಯೋಗ ಸಾಧನೆಯ ಉದ್ದೇಶ ಜ್ಞಾನ ಸಾಧನೆಯಾದರೂ ಆರೋಗ್ಯ ತನ್ನಿಂದ ತಾನೇ ಲಭಿಸುತ್ತದೆ ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದರು.

ಡಾ. ವೆಂಕಟ್ರಮಣ ಹೆಗಡೆ ‘ವಿಜಯವಾಣಿ’ ದಿನಪತ್ರಿಕೆಯಲ್ಲಿ ಬರೆದ ಅಂಕಣಗಳ ಸಂಗ್ರಹ ‘ಆಹಾರ ಆರೋಗ್ಯ’ವನ್ನು ನಿಸರ್ಗಮನೆಯಲ್ಲಿ ಗುರುವಾರ ಬಿಡುಗಡೆಗೊಳಿಸಿ ಅವರು ಆಶೀರ್ವಚನ ನೀಡಿದರು. ರೋಗ ನಿರೋಧಕ ಶಕ್ತಿಯನ್ನು ಪ್ರಕೃತಿ ನಮಗೆ ಸಹಜವಾಗಿ ನೀಡಿರುತ್ತದೆ. ನಾವು ಸೇವಿಸುವ ಆಹಾರದಲ್ಲಿ ವ್ಯತ್ಯಾಸವಾದಲ್ಲಿ ಆರೋಗ್ಯದಲ್ಲಿಯೂ ವ್ಯತ್ಯಾಸವಾಗುತ್ತದೆ. ರೋಗ ಆರಂಭಕ್ಕೆ ಮನಸ್ಸೂ ಕಾರಣ. ಮನಸ್ಸಿನ ರೋಗವನ್ನು ಕಡಿಮೆ ಮಾಡುವುದು ಯೋಗ ಚಿಕಿತ್ಸೆಯಿಂದ ಸಾಧ್ಯವಿದೆ ಎಂದು ಹೇಳಿದರು.

ರಂಭಾಪುರಿ ಶ್ರೀಗಳ ಬಗ್ಗೆ ತಿಳಿದಿದ್ದರೂ ಅವರನ್ನು ಇಷ್ಟು ಸನಿಹದಿಂದ ನೋಡಲು ಸಾಧ್ಯವಾಗಿರಲಿಲ್ಲ. ಸ್ವರ್ಣಪುರಿ ಮತ್ತು ರಂಭಾಪುರಿಯ ಬಾಂಧವ್ಯ ಸತತವಾಗಿ ಮುಂದುವರಿಯಲಿ ಎಂದು ಆಶಿಸಿದರು.

ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಆಶೀರ್ವಚನ ನೀಡಿ, ‘ಆರೋಗ್ಯಪೂರ್ಣ ಸಮಾಜ ನಿರ್ವಣಕ್ಕೆ ಶಿಕ್ಷಣ, ಆರೋಗ್ಯ ಮತ್ತು ಅಧ್ಯಾತ್ಮ ಪ್ರಮುಖ ಅಂಶಗಳು. ಓದು, ಉದ್ಯೋಗಕ್ಕಾಗಿ ಶಿಕ್ಷಣ ಎಂಬ ನಂಬಿಕೆ ಬದಲಾಗಿ ಜ್ಞಾನಕ್ಕಾಗಿ , ಜೀವನ ವಿಕಾಸಕ್ಕಾಗಿ ಶಿಕ್ಷಣ ಎಂಬಂತಾಗಬೇಕು. ಇತ್ತೀಚಿನ ಜೀವನ ಪದ್ಧತಿಯಲ್ಲಿ ಮನುಷ್ಯನ ಬುದ್ಧಿಶಕ್ತಿ ಬೆಳೆದಿದೆ. ಆದರೆ, ಅದಕ್ಕೆ ತಕ್ಕಂತೆ ಭಾವನೆ ಬೆಳೆಯದಿರುವುದು ದುರಂತಕ್ಕೆ ಕಾರಣವಾಗುತ್ತಿದೆ. ಆಧ್ಯಾತ್ಮ ಮನುಷ್ಯನಿಗೆ ಶಾಂತಿ ಮತ್ತು ನೆಮ್ಮದಿಯನ್ನು ನೀಡುತ್ತದೆ’ ಎಂದರು.

ಪ್ರತಿ ವನಸ್ಪತಿಯಲ್ಲಿಯೂ ಎಷ್ಟು ಶಕ್ತಿ ಇದೆ ಎಂಬುದನ್ನು ಆಹಾರ ಆರೋಗ್ಯ ಕೃತಿ ತಿಳಿಸಿಕೊಡುತ್ತಿದೆ. ‘ವಿಜಯವಾಣಿ’ ಈ ಎಲ್ಲ ಮಾಹಿತಿಗಳನ್ನು ಅಂಕಣ ರೂಪದಲ್ಲಿ ಪ್ರಕಟಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕ ಮಾತನಾಡಿದರು. ಕೃತಿಕಾರರಾದ ಡಾ. ವೆಂಕಟ್ರಮಣ ಹೆಗಡೆ, ಮಾನಸಾ ಹೆಗಡೆ ಇದ್ದರು.

ಇದಕ್ಕೂ ಮುನ್ನ ಶಿರಗುಪ್ಪಿಯ ಸ್ವಾಮಿ ವಿವೇಕಾನಂದ ಯೋಗ, ಮಲ್ಲಕಂಬ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ನೀಡಿದ ಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

415 ಲೇಖನಗಳ ಪುಸ್ತಕ: ನಿಸರ್ಗಮನೆಯ ಡಾ. ವೆಂಕಟ್ರಮಣ ಹೆಗಡೆ ಮತ್ತು ಮಾನಸಾ ಹೆಗಡೆ ಕಳೆದ ಒಂದುವರೆ ವರ್ಷಗಳಿಂದ ‘ವಿಜಯವಾಣಿ’ಯಲ್ಲಿ ಬರೆದ ಆರೋಗ್ಯ ಲೇಖನವನ್ನು ಪುಸ್ತಕ ರೂಪದಲ್ಲಿ ಹೊರ ತರಲಾಗಿದೆ. ಒಟ್ಟು 415 ಲೇಖನಗಳನ್ನು ಈ ಪುಸ್ತಕ ಒಳಗೊಂಡಿದೆ. ಈ ಪುಸ್ತಕಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಶುಭಾಶೀರ್ವಾದ ಸಂದೇಶ ಬರೆದಿದ್ದಾರೆ.</

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...