ಯೋಗ ಕಲಿತರಿಲ್ಲ ರೋಗ

Latest News

PHOTOS| ಸರ್ಜಾ ಕುಟುಂಬದಲ್ಲಿ ಗರಿಗೆದರಿದ ಮದುವೆ ಸಂಭ್ರಮ: ಭಾವಿ ಪತ್ನಿಯ ಮೆಹಂದಿ ಕಾರ್ಯಕ್ರಮದಲ್ಲಿ ಮಿಂಚಿದ ಧ್ರುವ!

ಬೆಂಗಳೂರು: ಬಹುಕಾಲದ ಗೆಳತಿ ಪ್ರೇರಣಾರನ್ನು ನಟ ಧ್ರುವ ಸರ್ಜಾ ಅವರು ಭಾನುವಾರ ನಡೆಯಲಿರುವ ಶುಭ ವಿವಾಹ ಮುಹೂರ್ತದಲ್ಲಿ ವರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಜಾ...

ಮಾದಪ್ಪನ ಸನ್ನಿಧಿಯಲ್ಲಿ ಸಂಗ್ರಹವಾಯ್ತು ಭಾರಿ ಮೊತ್ತ: ಬೆಟ್ಟದೊಡೆಯನ ಹುಂಡಿಗೆ ಹರಿದುಬಂತು ಕೋಟಿ ರೂಪಾಯಿ ಕಾಣಿಕೆ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ತೀರ್ಥಕ್ಷೇತ್ರ ಮಲೆಮಹದೇಶ್ವರಬೆಟ್ಟದ ಹುಂಡಿಯಲ್ಲಿ ಪ್ರತಿ ತಿಂಗಳು ದಾಖಲೆಯ ಮೊತ್ತ ಸಂಗ್ರಹವಾಗುತ್ತಿದೆ. ಎಪ್ಪತ್ತೇಳು ಮಲೆಗಳ ಒಡೆಯ ಮಾದಪ್ಪ ಮತ್ತೆ ಕೋಟ್ಯಾಧೀಶರಾಗಿದ್ದಾರೆ....

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ತ್ಯಾಮಗೊಂಡ್ಲು: ಆಧುನಿಕ ಕಾಲದಲ್ಲಿ ಮಾರಣಾಂತಿಕ ಕಾಯಿಲೆಗೆ ತುತ್ತಾಗುತ್ತಿರುವವರ ಸಂಖ್ಯೆ ಅಧಿಕವಾಗುತ್ತಿರುವುದು ಬೇಸರದ ಸಂಗತಿ. ರೋಗ ಬರುವುದಕ್ಕಿಂತ ಮುಂಚಿತವಾಗಿ ಮುಂಜಾಗ್ರತೆ ವಹಿಸಿದರೆ ರೋಗಗಳು ಬಾರದಂತೆ ತಡೆಯಬಹುದು ಎಂದು ರೋಟರಿ ಸಂಸ್ಥೆ ನೆಲಮಂಗಲ ಘಟಕದ ಅಧ್ಯಕ್ಷ ಕೆ.ಮಂಜುನಾಥ ಪಾಟೀಲ್ ಹೇಳಿದರು.

ಹೋಬಳಿಯ ಜಕ್ಕನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಸಂಸ್ಥೆ, ರಾಮಯ್ಯ ಹರ್ಷ ಆಸ್ಪತ್ರೆ ಹಾಗೂ ರೋಟರಿ ನೆಲಮಂಗಲ ಟ್ರಸ್ಟ್ ಬುಧವಾರ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಉಚಿತವಾಗಿ ಆಯೋಜಿಸುವ ತಜ್ಞ ವೈದ್ಯರನ್ನೊಳಗೊಂ ಆರೋಗ್ಯ ಉಚಿತ ತಪಾಸಣಾ ಶಿಬಿರದ ನೆರವನ್ನು ಗ್ರಾಮಾಂತರ ಪ್ರದೇಶದ ಜನರು ಉಪಯೋಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರಾರಂಭಿಕ ಹಂತದಲ್ಲೇ ಕಡ್ಡಾಯವಾಗಿ ಯೋಗ ಕಲಿಸಿದರೆ ಮುಂದೆ ಅನಾರೋಗ್ಯಕ್ಕೆ ಒಳಗಾಗುವುದು ತಪ್ಪುತ್ತದೆ. ದೈನಂದಿನ ಜೀವನ ಯಾಂತ್ರೀಕೃತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮನುಷ್ಯರಿಗೆ ರಕ್ತದೊತ್ತಡ, ಮಧುಮೇಹ, ಅಸ್ತಮಾ, ಕೊಲೆಸ್ಟ್ರಾಲ್, ಇನ್ನಿತರ ರೋಗಗಳಿಗೆ ತುತ್ತಾಗುತ್ತಿರುವುದು ಸಾಮಾನ್ಯವಾಗುತ್ತಿದೆ ಎಂದರು.

ಉನ್ನತಮಟ್ಟದ ಚಿಕಿತ್ಸೆ ಪಡೆಯಲು ಸುಸಜ್ಜಿತ ಆಸ್ಪತ್ರೆಗಳಲ್ಲಿ ಅಧಿಕ ವೆಚ್ಚ ಭರಿಸಬೇಕಾಗುತ್ತದೆ. ಆದರೆ ಸಮಾಜದ ಎಲ್ಲರಿಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಅನುಕೂಲಕರವಾಗಲಿದೆ. ಈ ಶಿಬಿರದಲ್ಲಿ ತಪಾಸಣೆಯಲ್ಲದೆ ನೆಲಮಂಗಲ ತಾಲೂಕು ಔಷಧ ವ್ಯಾಪಾರಿಗಳ ಸಂಘದಿಂದ ಉಚಿತ ಔಷಧ ವಿತರಣೆ ಕೂಡ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಆರೋಗ್ಯವಿಲ್ಲದಿದ್ದರೆ ಎಷ್ಟೇ ಸಂಪತ್ತಿದ್ದರೂ ಕೂಡ ವ್ಯರ್ಥ, ಪ್ರತಿದಿನ ಆರೋಗ್ಯಕರ ಜೀವನ ರೂಢಿಸಿಕೊಂಡರೆ ವೈದ್ಯರಿಂದ ದೂರವಿರಬಹುದು ಎಂದು ಹರ್ಷ ರಾಮಯ್ಯ ಆಸ್ಪತ್ರೆ ಶಾಖಾ ಮುಖ್ಯಸ್ಥ ಎಚ್.ಎನ್. ನರೇಶ್ ಕುಮಾರ್ ಮಾಹಿತಿ ನೀಡಿದರು.

ಶಿಬಿರದಲ್ಲಿ ಇಎನ್​ಟಿ, ಕೀಲು ಮತ್ತು ಮೂಳೆ, ಶಾರದಾ ರೋಟರಿ ಕಣ್ಣಿನ ಆಸ್ಪತ್ರೆಯಿಂದ ಕಣ್ಣಿನ ಪರೀಕ್ಷೆ, ಚರ್ಮ, ದಂತ, ಸ್ತ್ರೀ ರೋಗ,ಸಕ್ಕರೆ,ಇಸಿಜಿ, ಮಕ್ಕಳ ಕಾಯಿಲೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಲಾಯಿತು. ಸುಮಾರು 250ಕ್ಕೂ ಹೆಚ್ಚು ಮಂದಿ ಶಿಬಿರದ ಸದ್ಬಳಕೆ ಮಾಡಿಕೊಂಡರು.

ರೋಟರಿ ನೆಲಮಂಗಲ ಟ್ರಸ್ಟ್ ಅಧ್ಯಕ್ಷ ಬಿ.ಆರ್.ತಿಮ್ಮರಾಜು, ನೆಲಮಂಗಲ ರೋಟರಿ ಸಂಸ್ಥೆ ಕಾರ್ಯದರ್ಶಿ ರಂಜಿತ್, ಕಮ್ಯುನಿಟಿ ಸರ್ವೀಸ್ ಡೈರೆಕ್ಟರ್ ಸಿ.ಜಿ.ಮಂಜುನಾಥ್ ಗೌಡ, ಹೆಲ್ತ್ ಚೇರ್ಮನ್ ಕೆ.ಎಸ್.ಲೋಕೇಶ್, ವಜ್ರಗಟ್ಟೆ ನಾಗರಾಜು, ಶಾಲಾ ಎಸ್​ಡಿಎಂಸಿ ಅಧ್ಯಕ್ಷ ಮಹೇಶ್, ಮುಖ್ಯಶಿಕ್ಷಕ ಗಿರೀಶ್ ಇದ್ದರು.

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...