ಬೆಳಗಾವಿ: ಪ್ರಜಾಪ್ರಭುತ್ವದ ಶಕ್ತಿ ಎಂದರೇ ಅದು ಮತದಾನ ಹಕ್ಕು. ಅದನ್ನು ಸಮಾಜಕ್ಕಾಗಿ ದುಡಿಯುವ ವ್ಯಕ್ತಿಗಳಿಗೆ ಹಾಕುವುದರ ಮೂಲಕ ಯೋಗ್ಯರನ್ನು ವಿಧಾನಸಭೆಗೆ ಕಳುಹಿಸಿಕೊಡುವುದಕ್ಕಾಗಿ ಪ್ರತಿಯೊಬ್ಬರ ಮತಗಳು ಪರಿಣಾಮ ಬೀರುತ್ತವೆ ಎಂದು ಗದಗ-ಡಂಬಳ ತೋಂಟದಾರ್ಯ ಸಂಸ್ಥಾನ ಮಠದ ಡಾ.ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ ಹೇಳಿದರು.
ಬುಧವಾರ ಬೆಳಗ್ಗೆ ಮಾರುತಿ ಗಲ್ಲಿಯ ಮತಗಟ್ಟೆಗಳಲ್ಲಿ ಮತ ಚಲಾಯಿಸಿದ ಬಳಿಕ ಅವರು ಮಾತನಾಡಿದರು. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ತಮ್ಮದೇ ಆದ ನಾಯಕನನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವಿದೆ. ಆದರೆ ತಮ್ಮ ಅತ್ಯಮೂಲ್ಯವಾದ ಮತವನ್ನು ಸಮಾಜದ ಹಿತ ಕಾಪಾಡುವವರಿಗೆ ನೀಡಬೇಕು ಎಂದು ಶ್ರೀಗಳು ಹೇಳಿದರು. ಯಾವುದೇ ಆಮಿಷಗಳಿಗೆ ಬಿಲಿಯಾಗದೇ ಅರ್ಹರಿಗೆ ಮತದಾನ ಮಾಡುವುದರಿಂದ ದೇಶದ ಉಜ್ವಲ ಭವಿಷ್ಯ ನಿರ್ಮಾಣ ಮಾಡುವ ಶಕ್ತಿ ಪ್ರಜೆಗಳ ಕೈಯಲ್ಲಿದೆ ಎಂದರು.
ನಾಗನೂರು ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ, ಕಾರಂಜಿಮಠದ ಡಾ.ಶಿವಯೋಗಿ ಸ್ವಾಮೀಜಿ, ವಿಜಯಪುರದ ಶ್ರೀ ಸಿದ್ದಾರೂಢ ಸ್ವಾಮೀಜಿ, ಶೇಗುಣಸಿಯ ಶ್ರೀಮಹಾಂತ ಸ್ವಾಮೀಜಿ ಗಳು ಇಲ್ಲಿನ ಶಿವಬಸವ ನಗರ ಮತ್ತು ಮಾರುತಿ ಗಲ್ಲಿಯ ಮತಗಟ್ಟೆಗಳಲ್ಲಿ ಮತ ಚಲಾಯಿಸಿ ಗಮನ ಸೆಳೆದರು.
ಯೋಗ್ಯರಿಗೆ ಮತದಾನ ಮಾಡಿ-ತೋಂಟದಾರ್ಯ ಶ್ರೀ

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits
Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…
ಯುವಜನರಲ್ಲಿ ಹೃದಯಾಘಾತ ಹೆಚ್ಚಾಗಲು ಪ್ರಮುಖ ಕಾರಣಗಳಿವು… ತಕ್ಷಣ ಎಚ್ಚೆತ್ತುಕೊಳ್ಳದಿದ್ರೆ ಅಪಾಯ ಫಿಕ್ಸ್! Cardiac Arrest
Cardiac Arrest : ಒಂದು ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಂಡುಬರುತ್ತಿದ್ದ ಹೃದಯ ಸಂಬಂಧಿ ಸಮಸ್ಯೆಗಳು ಈಗ…