ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ

blank

ಬಾಗಲಕೋಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಮಹತ್ವದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಅಽಕಾರಿಗಳಿಗೆ ಸೂಚಿಸಿದರು.

ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ತ್ರೆÊಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಿಷನ್ ಶಕ್ತಿ ಯೋಜನೆ, ಸಾಂತ್ವನ ಕೇಂದ್ರ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಸಖಿ ಒನ್ ಸ್ಟಾಪ್ ಸೆಂಟರ್, ಬೇಟಿ ಬಚಾವೋ ಭೇಟಿ ಪಡಾವೋ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-೨೦೦೫ ಸೇರಿದಂತೆ ಅನೇಕ ಮಹತ್ವದ ಯೋಜನೆಗಳು ಸಪರ್ಮಕವಾಗಿ ಅನುಷ್ಠಾನಗೊಳಿಸಬೇಕು ಎಂದರು.

ಇಲಾಖೆಯಿಂದ ಅನುಷ್ಠಾನಗೊಳುತ್ತಿರುವ ಕಾಯ್ದೆಗಳು ಹಾಗೂ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಜಿಲ್ಲೆಯಿಂದ ಅಪೌಷ್ಠಿಕತೆ, ಬಾಲ್ಯವಿವಾಹ ಪ್ರಕರಣಗಳನ್ನು ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣಿಕೆ ತಡೆಗಟ್ಟುವದು ಹಾಗೂ ಕೇಂದ್ರ ಸರ್ಕಾರದ ನಿರ್ದೇಶನದಂತೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಜ.೨೨ ರಿಂದ ಮಾ. ೮ ವರೆಗೆ ಸರಣಿ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಳ್ಳಲು ಎಲ್ಲ ಅಽಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಪ್ರಭಾಕರ ವಿವಿಧ ಯೋಜನೆಗಳಲ್ಲಿ ಸಾಽಸಿದ ಪ್ರಗತಿ ವರದಿಯನ್ನು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಿರೂಪಣಾಽಕಾರಿ ಮಂಜುನಾಥ ಪರಸನ್ನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಽಕಾರಿ ಸುಮಂಗಲಾ ಹೀರೆಮನಿ, ಜಿಲ್ಲೆಯ ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಽಕಾರಿಗಳು ಹಾಗೂ ಎಲ್ಲಾ ಯೋಜನೆಗಳ ಸಮಿತಿಯ ಜಿಲ್ಲಾ ಮಟ್ಟದ ಅಽಕಾರಿಗಳು ಹಾಗೂ ಸದಸ್ಯರುಗಳು ಮತ್ತು ಯೋಜನೆಗಳಿಗೆ ಸಂಬAಽಸಿದ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.

 

Share This Article

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…

ಮಲಬದ್ಧತೆ ಸಮಸ್ಯೆ ನಿಮ್ಮನ್ನು ಕಾಡುತ್ತಿದ್ಯಾ?; ಈ ತರಕಾರಿಗಳಿಂದ ತೊಂದರೆ ನಿವಾರಣೆ ಗ್ಯಾರಂಟಿ | Health Tips

ಮಲಬದ್ಧತೆ ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ನಿಮ್ಮ ಕರುಳುಗಳು ಸರಿಯಾಗಿ…

ಸ್ಟ್ರೆಚ್ ಮಾರ್ಕ್ಸ್ ಹೋಗಲಾಡಿಸಲು ಉತ್ತಮ ಮದ್ದು ತೆಂಗಿನ ಎಣ್ಣೆ; ಈ ಬಗ್ಗೆ ತಜ್ಞರು ಹೇಳೋದೇನು | Health Tips

ಗರ್ಭಾವಸ್ಥೆಯಲ್ಲಿ ಹಿಗ್ಗಿಸಲಾದ ಗುರುತುಗಳು ಇರುವುದು ಸಹಜ. ಕೆಲವೊಮ್ಮೆ ಈ ಗುರುತುಗಳು ತಾವಾಗಿಯೇ ಮಾಯವಾಗುತ್ತವೆ ಮತ್ತು ಕೆಲವೊಮ್ಮೆ…