16 C
Bangalore
Saturday, December 7, 2019

ರಂಗ ಮಿತ್ರರು ದಶಮಾನೋತ್ಸವ ಸಂಭ್ರಮ 3ರಂದು

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಹುಬ್ಬಳ್ಳಿ: ‘ಹುಬ್ಬಳ್ಳಿ ರಂಗ ಮಿತ್ರರು’ ದಶಮಾನೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭ ಇಲ್ಲಿನ ದೇಶಪಾಂಡೆ ನಗರದ ಕರ್ನಾಟಕ ಜಿಮ್ಖಾನ ಕ್ಲಬ್​ನಲ್ಲಿ ನ. 3ರಂದು ಬೆಳಗ್ಗೆ 10ಕ್ಕೆ ಏರ್ಪಾಟಾಗಿದೆ.

ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ದಶಮಾನೋತ್ಸವ ಸಂಭ್ರಮದ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್, ಹೋಟೆಲ್ ಉದ್ಯಮಿ ಹರಿ ಓಂ ಸುಧಾಕರ ಶೆಟ್ಟಿ ಈ ವಿಷಯ ತಿಳಿಸಿದರು.

ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರು ಉದ್ಘಾಟಿಸುವರು. ಧಾರವಾಡ ಜೆಎಸ್​ಎಸ್ ವಿತ್ತಧಿಕಾರಿ ಡಾ. ಅಜಿತ ಪ್ರಸಾದ ‘ದಶಾಂತರಂಗ’ ಪುಸ್ತಕ ಬಿಡುಗಡೆಗೊಳಿಸುವರು. ಕರ್ನಾಟಕ ಜಿಮ್ಖಾನ ಅಸೋಸಿಯೇಷನ್ ಕಾರ್ಯಾಧ್ಯಕ್ಷ ಸುನೀಲ ಕೊಠಾರಿ, ಕಲಾ ಸಂಘಟಕ ಆರ್.ಜಿ. ಭಟ್, ಉದ್ಯಮಿಗಳಾದ ಯು.ಬಿ. ಶೆಟ್ಟಿ, ದಿವಾಣ ಗೋವಿಂದ ಭಟ್, ಸುಗ್ಗಿ ಸುಧಾಕರ ಶೆಟ್ಟಿ, ಯಕ್ಷದೃವ ಪಟ್ಲ ಫೌಂಡೇಷನ್ ಸಂಸ್ಥಾಪಕ ಸತೀಶ ಶೆಟ್ಟಿ, ಮಲೆನಾಡು ಒಕ್ಕಲಿಗರ ಸಂಘದ ಅಧ್ಯಕ್ಷ ರತ್ನಾಕರ ಬೆಳ್ಳನ್ನಗೌಡ, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಆನಂದ ಪೂಜಾರಿ, ಹು-ಧಾ ನಾಮಧಾರಿ ಸಮಾಜ ಹಿತವರ್ಧಕ ಸಂಘದ ಅಧ್ಯಕ್ಷ ತಿಮ್ಮಪ್ಪ ನಾಯ್ಕ ಅತಿಥಿಗಳಾಗಿ ಆಗಮಿಸುವರು ಎಂದರು.

ಬೆಳಗ್ಗೆ 10.30ಕ್ಕೆ ಯಕ್ಷ ಗೀತಾ ನೃತ್ಯ ಸಂಭ್ರಮ, ಮಧ್ಯಾಹ್ನ 12ಕ್ಕೆ ಯಕ್ಷ ರೂಪಕ ಸಂಭ್ರಮ, ಮಧ್ಯಾಹ್ನ 1.10ಕ್ಕೆ ಯಕ್ಷ ಹಾಸ್ಯ ಸಂಭ್ರಮ(ಗದಾಯುದ್ಧ), ಮಧ್ಯಾಹ್ನ 3.05ಕ್ಕೆ ಮಹಿಳೆಯರಿಂದ ಯಕ್ಷ ಶೃಂಗಾರ ಸಂಭ್ರಮ ನಡೆಯಲಿದೆ. ಮಧ್ಯಾಹ್ನ 4 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಸಾನ್ನಿಧ್ಯ ವಹಿಸುವರು. ಶ್ರೀಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೆಂದ್ರ ಕುಮಾರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅತಿಥಿಗಳಾಗಿ ಆಗಮಿಸುವರು. ಶ್ರೀ ಹನುಮಗಿರಿ ಮೇಳ ಸಂಚಾಲಕ ಡಾ. ಶ್ಯಾಮ್ಟ್, ಶ್ರೀ ಸಾಲಿಗ್ರಾಮ ಮೇಳದ ಸಂಚಾಲಕ ಪಿ. ಕಿಶನ್ ಹೆಗ್ಡೆ, ಶ್ರೀ ಕಟೀಲು ಮೇಳ ಸಂಚಾಲಕ ಕೆ. ದೇವಿಪ್ರಸಾದ ಶೆಟ್ಟಿ, ಶ್ರೀ ಪೆರ್ಡರು ಮೇಳ ಸಂಚಾಲಕ ಕರುಣಾಕರ ಶೆಟ್ಟಿ ಸೇರಿ ಇತರರನ್ನು ಸನ್ಮಾನಿಸಲಾಗುವುದು ಎಂದರು.

ಸಂಜೆ 6ಕ್ಕೆ ಯಕ್ಷ ಪ್ರದರ್ಶನ ಸಂಭ್ರಮ(ದ್ರೌಪದಿ ಪ್ರತಾಪ), ದೊಂದಿ ಬೆಳಕಿನಲ್ಲಿ ಯಕ್ಷ ಪರಂಪರಾ ಸಂಭ್ರಮ(ಸಮ ಸಪ್ತಕರು) ಜರುಗಲಿದೆ. ತೆಂಕ ಮತ್ತು ಬಡಗ ತಿಟ್ಟುಗಳನ್ನು ಈ ಭಾಗದಲ್ಲಿ ಪರಿಚಯಿಸಲಾಗುವುದು. ಕರಾವಳಿಯ ಸಾಂಸ್ಕೃತಿಕ ವೈಭವ ಇಲ್ಲಿ ಗರಿಗೆದರಲಿದೆ. ಉದ್ಘಾಟನೆಗೆ ಮುನ್ನ ಗಣಹೋಮ ಜರುಗಲಿದೆ. ಒಟ್ಟು 12 ತಾಸು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮತ್ತಷ್ಟು ಸಂಭ್ರಮ ಮನೆ ಮಾಡಲಿದೆ ಎಂದರು. ಹೋಟೆಲ್ ಉದ್ಯಮಿ ಅನಂತ ಪದ್ಮನಾಭ ಐತಾಳ ಸುದ್ದಿಗೋಷ್ಠಿಯಲ್ಲಿದ್ದರು.

ಯಕ್ಷಗಾನ ಅಧ್ಯಯನ ಪೀಠವಾಗಲಿ

ರಂಗ ಮಿತ್ರರು ಮೂಲಕ ಯಕ್ಷಗಾನ ಕಲೆ ಉಳಿಸುವ ಸಂಬಂಧ ಹಲವು ರೂಪುರೇಷೆಗಳನ್ನು ಹಾಕಿಕೊಳ್ಳಲಾಗಿದೆ. ನೆರೆ ಸಂತ್ರಸ್ತರಿಗೆ ನೆರವು, ಕಲಾವಿದರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಯಕ್ಷಗಾನ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕೆಂದರೆ ‘ಯಕ್ಷಗಾನ ಅಧ್ಯಯನ ಪೀಠ’ ಅನುಷ್ಠಾನದ ಆಗತ್ಯವಿದೆ.

-ಹರಿ ಓಂ ಸುಧಾಕರ ಶೆಟ್ಟಿ, ಹೋಟೆಲ್ ಉದ್ಯಮಿ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...