25.7 C
Bangalore
Sunday, December 15, 2019

ರಂಜನಿಯ ಸತ್ಯಂ ಸಹವಾಸ

Latest News

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಬೆಂಗಳೂರು: ಕಿರುತೆರೆಯಲ್ಲಿ ಕಮಾಲ್ ಮಾಡಿ ಬೆಳ್ಳಿತೆರೆಯಲ್ಲೂ ಮಿನುಗುತ್ತಿರುವ ‘ಪುಟ್ಟಗೌರಿ‘ ಧಾರಾವಾಹಿ ಖ್ಯಾತಿಯ ರಂಜನಿ ರಾಘವನ್ ಖುಷಿಯ ಅಲೆಯಲ್ಲಿ ತೇಲುತ್ತಿದ್ದಾರೆ. ಅವರ ಆ ಖುಷಿಗೆ ಕಾರಣ ‘ಸತ್ಯಂ’! ಅಂದರೆ, ರಂಜನಿ ನಾಯಕಿಯಾಗಿ ನಟಿಸುತ್ತಿರುವ ಹೊಸ ಚಿತ್ರಕ್ಕೆ ‘ಸತ್ಯಂ’ ಎಂದು ಶೀರ್ಷಿಕೆ ಇಡಲಾಗಿದ್ದು, ಈ ಸಿನಿಮಾ ಕನ್ನಡದ ಜತೆಗೆ ತೆಲುಗಿನಲ್ಲೂ ಸಿದ್ಧವಾಗಲಿದೆ. ಆ ಮೂಲಕ ಟಾಲಿವುಡ್​ಗೂ

ರಂಜನಿ ಪದಾರ್ಪಣೆ ಮಾಡುವ ಉತ್ಸಾಹದಲ್ಲಿದ್ದು, ನ.25ಕ್ಕೆ ಹೈದರಾಬಾದ್​ನಲ್ಲಿ ಚಿತ್ರದ ಮುಹೂರ್ತ ನೆರವೇರಲಿದೆ. ಕೌಟುಂಬಿಕ ಮತ್ತು ಥ್ರಿಲ್ಲರ್ ಶೈಲಿಯ ಸಿನಿಮಾ ಇದಾಗಿದ್ದು, ತುಂಬು ಕುಟುಂಬದ ಹುಡುಗಿಯಾಗಿ ರಂಜನಿ ಪಾತ್ರ ಸಾಗಲಿದೆ. ‘ಸಿನಿಮಾ ಕಥೆಯೇ ವಿಶೇಷವಾಗಿದೆ. ಕನ್ನಡದಲ್ಲಿ ಸೂಪರ್ ಹಿಟ್ ಅನಿಸಿಕೊಂಡಿರುವ ‘ಆಪ್ತಮಿತ್ರ’, ‘ಆಪ್ತರಕ್ಷಕ’ ಚಿತ್ರದ ರೀತಿಯಲ್ಲಿ ‘ಸತ್ಯಂ’ ಚಿತ್ರ ಸಾಗಲಿದೆ. ಚಿತ್ರದಲ್ಲಿ ಗೀತಾ ಹೆಸರಿನ ಪಾತ್ರ ನಿಭಾಯಿಸಲಿದ್ದೇನೆ. ಕಳೆದ ಏಳೆಂಟು ತಿಂಗಳಿಂದ ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ಅದೀಗ ‘ಸತ್ಯಂ’ ಮೂಲಕ ಈಡೇರಿದೆ’ ಎಂದು ಹೇಳಿಕೊಳ್ಳುತ್ತಾರೆ ರಂಜನಿ. ಗಿರೀಶ್ ಕಾಸರವಳ್ಳಿ ಸೇರಿ ಹಲವು ನಿರ್ದೇಶಕರ ಜತೆ ಕೆಲಸ ಮಾಡಿದ ಅನುಭವ ಇರುವ ಅಶೋಕ ಕಡಬ, ಈ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ. ಈ ಹಿಂದೆ ಕಲಾತ್ಮಕ ಶೈಲಿಯ ಸಿನಿಮಾ ಮಾಡಿದ ಅನುಭವವೂ ನಿರ್ದೇಶಕರಿಗಿದೆ. ಈಗಾಗಲೇ ಕನ್ನಡದಲ್ಲಿ ‘ಗಣಪ’, ‘ಕರಿಯ 2’ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಸಂತೋಷ್ ಈ ಚಿತ್ರಕ್ಕೆ ಹೀರೋ. ಇನ್ನು ತಾಂತ್ರಿಕ ವರ್ಗದ ವಿಚಾರದಲ್ಲೂ ಚಿತ್ರತಂಡ ಬಲಿಷ್ಠವಾಗಿದೆ. ‘ಸತ್ಯಂ’ ಚಿತ್ರಕ್ಕೆ ‘ಕೆಜಿಎಫ್’ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ರಾಗ ಸಂಯೋಜಿಸಲಿದ್ದಾರೆ. ಸಿನಿಟೆಕ್ ಸೂರಿ ಛಾಯಾಗ್ರಹಣದ ಜವಾಬ್ದಾರಿ ಹೊತ್ತರೆ, ಕೆ.ವಿ. ರಾಜು ಸಂಭಾಷಣೆ ಬರೆಯಲಿದ್ದಾರೆ. ನಿರ್ವಪಕ ಮಹಾಂತೇಶ್ ಕೆ. ಟಾಲಿವುಡ್ ಬಗ್ಗೆಯೂ ತಿಳಿದುಕೊಂಡಿರುವುದರಿಂದ ಕನ್ನಡದ ಜತೆಗೆ ತೆಲುಗಲ್ಲೂ ನಿರ್ಮಾಣ ಮಾಡುತ್ತಿದ್ದಾರೆ. ಹಾಗಾಗಿ 2 ಭಾಷೆಗೆ ಹೊಂದಾಣಿಕೆ ಆಗುವ ರೀತಿಯಲ್ಲೇ ಪಾತ್ರವರ್ಗವನ್ನೂ ಆಯ್ಕೆ ಮಾಡಿಕೊಂಡಿದ್ದಾರೆ. ವಿನಯಾ ಪ್ರಸಾದ್, ಪವಿತ್ರಾ ಲೋಕೇಶ್, ಸುಮನ್ ಸೇರಿ ಹಲವರು ಸಿನಿಮಾದಲ್ಲಿರಲಿದ್ದಾರೆ.

ಸಿನಿಮಾ ಕಥೆ ಬಗ್ಗೆಯೇ ತುಂಬ ಎಗೈ ್ಸ್ನಲ್ಲಿದ್ದೇನೆ. ಈಗಾಗಲೇ ಚಿತ್ರದ ಶೂಟಿಂಗ್ ಸಹ ಆರಂಭವಾಗಿದೆ. ಮುಹೂರ್ತದ ಬಳಿಕ ನನ್ನ ಪಾಲಿನ ಚಿತ್ರೀಕರಣಕ್ಕೆ ಚಾಲನೆ ದೊರಕಲಿದೆ. ಇದು ದ್ವಿಭಾಷೆಯಲ್ಲಿ ಸಿದ್ಧವಾಗುತ್ತಿರುವ ನನ್ನ ಮೊದಲ ಸಿನಿಮಾ.

| ರಂಜನಿ ರಾಘವನ್ ನಟಿ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...