ರಕ್ತದಾನದಿಂದ ಆರೋಗ್ಯ ವೃದ್ಧಿ

blank

ಎನ್.ಆರ್.ಪುರ: ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ. 18ರಿಂದ 64 ವರ್ಷದೊಳಗಿನ ಆರೋಗ್ಯವಂತ ಪುರುಷರು ಹಾಗೂ ಮಹಿಳೆಯರು ರಕ್ತದಾನ ಮಾಡಬಹುದು ಎಂದು ಶಿವಮೊಗ್ಗ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ಕಾರ್ಯದರ್ಶಿ ಮಂಜುನಾಥ್ ಅಪ್ಪಾಜಿ ತಿಳಿಸಿದರು.
ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಶನಿವಾರ ಬಸ್ ನಿಲ್ದಾಣ ಸಮೀಪದ ಆಟೋ ನಿಲ್ದಾಣದಲ್ಲಿ ಅಭಿನವ ಪ್ರತಿಭಾ ವೇದಿಕೆ, ರಕ್ತದಾನಿಗಳ ಬಳಗದ ಆಶ್ರಯದಲ್ಲಿ ಆಯೋಜಿಸಿದ್ದ 33ನೇ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಅಭಿನವ ಪ್ರತಿಭಾ ವೇದಿಕೆ ಮುಖ್ಯಸ್ಥ ಅಭಿನವ ಗಿರಿರಾಜ್ ಮಾತನಾಡಿ, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನ ಮಾಡಬಹುದು ಎಂದು ತಿಳಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಾ ಶ್ರೀನಿವಾಸ್ ಮಾತನಾಡಿ, ನಮ್ಮ ಘಟಕದ ಸದಸ್ಯರು ರಕ್ತದಾನ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ರಕ್ತದಾನ ಮಾಡಿ ಅಮೂಲ್ಯ ಜೀವ ಉಳಿಸಬೇಕಾಗಿದೆ ಎಂದರು.
ರಕ್ತದಾನಿ ಬಳಗದ ಮುಖ್ಯಸ್ಥ ಅಜೇಯ್, ಜೆಸಿ ಕಾರ್ಯದರ್ಶಿ ಮಿಥುನ್, ಆಟೋ ಚಾಲಕರ ಸಂಘದ ಗೌರವಾಧ್ಯಕ್ಷ ಅಣ್ಣಪ್ಪ, ರೆಡ್ ಕ್ರಾಸ್ ಸಂಸ್ಥೆಯ ಪಿ.ಸಿ.ಶ್ರುತಿ, ಜೆಸಿ ಅಧ್ಯಕ್ಷ ಸಾರ್ಥಕ್ ಗೌಡ, ಆಟೋ ಚಾಲಕರ ಸಂಘದ ಅಧ್ಯಕ್ಷ ಮಧುಸೂದನ್, ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜು, ಕಾರ್ಯದರ್ಶಿ ಸಮೀರ್, ಪರಸ್ಪರ ಮಾನವತಾ ವೇದಿಕೆ ಮುಖ್ಯಸ್ಥ ಅರ್ಜುನ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಮಂಜುನಾಥ್, ಜಾನಪದ ಕಲಾವಿದರ ಒಕ್ಕೂಟದ ಅಧ್ಯಕ್ಷ ಮಂಜುನಾಥ್ ಎನ್. ಗೌಡ ಇದ್ದರು.
ಶಿಬಿರದಲ್ಲಿ 52 ಯೂನಿಟ್ ರಕ್ತ ಸಂಗ್ರಹಿಸಲಾಯಿತು. 100ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಅಭಿನವ ಗಿರಿರಾಜ್ ಹಾಗೂ ಇತರ ರಕ್ತದಾನಿಗಳಿಗೆ ರೆಡ್‌ಕ್ರಾಸ್ ಸಂಸ್ಥೆಯಿಂದ ಡೈಮಂಡ್ ಕಾರ್ಡ್ ನೀಡಿ ಗೌರವಿಸಲಾಯಿತು.

Share This Article

ಒಂದು ತಿಂಗಳು ಸಕ್ಕರೆ ಮತ್ತು ಉಪ್ಪು ಬಿಟ್ಟರೆ ದೇಹದಲ್ಲಾಗುವ ಬದಲಾವಣೆ ಏನು ಗೊತ್ತಾ? | Sugar

Sugar: ಸಾಮಾನ್ಯವಾಗಿ ಮನುಷ್ಯನ ದೇಹ ಅನಾರೋಗ್ಯಕ್ಕೊಳಗಾದಾಗ ಆಹಾರದಲ್ಲಿ ಸಕ್ಕೆರೆ ಮತ್ತು ಉಪ್ಪುನಂತಹ ಅಂಶಗಳನ್ನು ತ್ಯಜಿಸಬೇಕಾಗುತ್ತದೆ. ಇದರಿಂದ…

ಹೃದ್ರೋಗ ದೂರ, ಮೆದುಳಿನ ಆರೋಗ್ಯಕ್ಕೆ ಬಲ: ಟ್ಯೂನ ಮೀನಿನಲ್ಲಿದೆ ಹಲವು ಆರೋಗ್ಯ ಪ್ರಯೋಜನಗಳು! Tuna Fish Benefits

Tuna Fish Benefits: ಮೀನು ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಸಾಮಾನ್ಯವಾಗಿ ಹೇಳಲಾಗುತ್ತದೆ. ಮೀನಿನಲ್ಲಿ ಹಲವು…