More

  ರಕ್ತದಾನ ಮಾಡಿ ಸಂಕಷ್ಟದಲ್ಲಿರುವ ಜೀವಗಳನ್ನು ಉಳಿಸಿ

  ಮದ್ದೂರು: ಪ್ರಪಂಚದಲ್ಲಿ ರಕ್ತಕ್ಕೆ ಪರ್ಯಾಯವಾದ ವಸ್ತು ಬೇರೆ ಯಾವುದೂ ಇಲ್ಲದ ಕಾರಣ ಆರೋಗ್ಯವಂತರು ರಕ್ತದಾನ ಮಾಡುವ ಮೂಲಕ ಸಂಕಷ್ಟದಲ್ಲಿರುವ ಜೀವಗಳನ್ನು ಉಳಿಸಿ ಮಾನವೀಯತೆ ಮೆರೆಯಬೇಕು ಎಂದು ಶಾಸಕ ಡಿ.ಸಿ.ತಮ್ಮಣ್ಣ ತಿಳಿಸಿದರು.

  ಪಟ್ಟಣದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದಲ್ಲಿ ಭಾನುವಾರ ಗಾಂಧಿ ಜಯಂತಿ, ಲಾಲ್ ಬಹಾದೂರ್ ಶಾಸ್ತ್ರಿ ಜಯಂತಿ ಹಾಗೂ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರಸ್ತುತ ರಕ್ತದ ಅಗತ್ಯತೆ ಹೆಚ್ಚಾಗಿದೆ. ರಕ್ತದಾನ ಮಾಡುವುದರಿಂದ ಯಾವುದೇ ಅಡ್ಡ ಪರಿಣಾಮವಾಗುವುದಿಲ್ಲ. ಪ್ರತಿ 6 ತಿಂಗಳಿಗೊಮ್ಮೆ ರಕ್ತದಾನ ಮಾಡಬೇಕು. ರಕ್ತದಾನ ಶ್ರೇಷ್ಠದಾನ ಎಂದರು.

  ತಾಲೂಕಿನ ಯುವಕರು, ವಿವಿಧ ಸಂಘ, ಸಂಸ್ಥೆಗಳು ಒಗ್ಗಟ್ಟಾಗಿ ಇಂತಹ ಬೃಹತ್ ರಕ್ತದಾನ ಶಿಬಿರ ಆಯೋಜಿಸಿರುವುದು ಸಂತಸ ತಂದಿದೆ. ಮುಂದೆಯೂ ಇದೇ ರೀತಿ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ನೊಂದವರ ಬಾಳಿಗೆ ಬೆಳಕಾಗಬೇಕು ಎಂದು ಸಲಹೆ ನೀಡಿದರು.

  ತಹಸೀಲ್ದಾರ್ ಟಿ.ಎನ್.ನರಸಿಂಹಮೂರ್ತಿ, ತಾಪಂ ಇಒ ಸಂದೀಪ್ ಸೇರಿದಂತೆ 280ಕ್ಕೂ ಹೆಚ್ಚು ಜನರು ರಕ್ತದಾನ ಮಾಡುವ ಮೂಲಕ ಗಮನ ಸೆಳೆದರು.
  ಹಿರಿಯ ಗಾಂಧಿವಾದಿ ಕೆ.ಟಿ.ಚಂದು, ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ, ಸಿರಿ ಆದರ್ಶ ಚಿಟ್ಸ್ ಫಂಡ್‌ನ ವ್ಯವಸ್ಥಾಪಕ ಆದರ್ಶ, ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಆರ್.ಕೆ.ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ, ಕಸಾಪ ತಾಲೂಕು ಅಧ್ಯಕ್ಷ ಸುನಿಲ್‌ಕುಮಾರ್, ವಿವಿಧ ಸಂಘಟನೆಗಳ ಮುಖಂಡರಾದ ಕುಂದನಕುಪ್ಪೆ ಕುಮಾರ್, ಪೊಲೀಸ್ ಸಿದ್ದರಾಜು, ತೈಲೂರು ರಘು, ಚಲುವರಾಜು, ಎಂ.ಪಿ.ಲಿಂಗೇಗೌಡ, ಕರಡಗೆರೆ ಯೋಗೇಶ್, ರಘು ವೆಂಕಟೇಗೌಡ, ಆನಂದಚಾರಿ, ಶ್ರೀನಿವಾಸ್, ಜಯಂತ್, ಉಲ್ಲಾಸ್, ಶಂಕರೇಗೌಡ, ಅಯೂಬ್‌ಖಾನ್, ಕಲೀಂ ಪಾಷ, ಸೊ.ಶಿ.ಪ್ರಕಾಶ್, ಉಮೇಶ್, ಲಕ್ಷ್ಮಣ್ ಚನ್ನಸಂದ್ರ, ಇಂದುಶೇಖರ್, ರಮಾನಂದ ಸೇರಿದಂತೆ ಇತರರು ಹಾಜರಿದ್ದರು.

  See also  ಅರ್ಜಿಯೊಂದಿಗೆ ಸೂಕ್ತ ದಾಖಲಾತಿ ಲಗತ್ತಿಸಿ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts