16 C
Bangalore
Saturday, December 7, 2019

ರಣಾಂಗಣ ಸಿದ್ಧ, ಇನ್ನು ಮತಯುದ್ಧ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಹುಬ್ಬಳ್ಳಿ: ಬಿಜೆಪಿ, ಕಾಂಗ್ರೆಸ್​ಗೆ ಪ್ರತಿಷ್ಠೆಯ ಕಣವಾದ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಗುರುವಾರ ಮುಕ್ತಾಯವಾಗುವುದರೊಂದಿಗೆ ರಣಕಣದ ಸ್ಪಷ್ಟ ಚಿತ್ರಣ ಪೂರ್ಣಗೊಂಡಿದೆ.

ಬಿಜೆಪಿಯಿಂದ ಹಾಲಿ ಸಂಸದ ಪ್ರಲ್ಹಾದ ಜೋಶಿ, ಕಾಂಗ್ರೆಸ್​ನಿಂದ ಮಾಜಿ ಸಚಿವ ವಿನಯ ಕುಲಕರ್ಣಿ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಕಳೆದ ಚುನಾವಣೆಯಲ್ಲೂ ಇಬ್ಬರು ಆಯಾ ಪಕ್ಷದಿಂದಲೇ ಸ್ಪರ್ಧಿಸಿದ್ದರು. 2014ರಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಲ್ಲಿದ್ದರೂ ಲೆಕ್ಕಕ್ಕೆ ಇರಲಿಲ್ಲ. ಈ ಸಲ ಆ ಪಕ್ಷದ ಸ್ಪರ್ಧೆಯೇ ಇಲ್ಲ.

ಕಾಂಗ್ರೆಸ್ ಪಕ್ಷ ಕಾಲು ಶತಮಾನದಿಂದ ಧಾರವಾಡ ಕ್ಷೇತ್ರದಲ್ಲಿ ಗೆಲುವಿಗಾಗಿ ಕನವರಿಸುತ್ತ ಬಂದಿದೆ. ಹೀಗಾಗಿ ಈ ಸಲವಾದರೂ ಗೆಲ್ಲಬೇಕು ಎಂದು, ಸಾಕಷ್ಟು ಹಗ್ಗ ಜಗ್ಗಾಟದ ನಂತರ ಕಡೆಗೂ ವಿನಯ ಕುಲಕರ್ಣಿಗೆ ಟಿಕೆಟ್ ನೀಡಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ವರಿಷ್ಠರು ಟಿಕೆಟ್ ವಿಷಯದಲ್ಲಿ ಅಂಗೈಯಲ್ಲಿ ಅರಮನೆ ತೋರಿಸಿ ಮುಖ ತಿರುಗಿಸಿದ್ದಾರೆ. ಹೀಗಾಗಿ, ಮುಸ್ಲಿಂ ಸಮಾಜದ ಒಂದಿಷ್ಟು ಜನ ಅಸಮಾಧಾನಗೊಂಡಿದ್ದಾರೆ.

2014ರ ಲೋಕಸಭೆ, 2018ರ ವಿಧಾನಸಭೆ ಚುನಾವಣೆಯಲ್ಲಿ ವಿನಯ ಕುಲಕರ್ಣಿ ಸೋಲು ಕಂಡವರು. ಒಮ್ಮೆ ಅಧಿಕಾರದ ರುಚಿ ನೋಡಿದವರಿಗೆ ಸರ್ಕಾರದಲ್ಲಿಯ ಹುದ್ದೆ ಇಲ್ಲದೆ ಖಾಲಿ ಇರುವುದು ಕಷ್ಟವೇ.

ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಕಳೆದ ಚುನಾವಣೆಯಲ್ಲಿ ಕೊಟ್ಟ ಪೆಟ್ಟು, ಧಾರವಾಡದಲ್ಲಿ ಕುಸಿದ ಕಟ್ಟಡದ ನಿರ್ವತೃರಲ್ಲಿ ಅವರ ಮಾವ ಕೂಡ ಒಬ್ಬರಾಗಿರುವುದು ಇತ್ಯಾದಿ ಕಾರಣದಿಂದ ವರ್ಚಸ್ಸಿಗೆ ಧಕ್ಕೆಯೂ ಆಗಿತ್ತು. ಹೀಗಾಗಿ ಟಿಕೆಟ್ ಕಷ್ಟ ಎಂಬ ಮಾತು ಕೇಳಿಬಂದಿತ್ತು. ಆದಾಗ್ಯೂ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಎಂ.ಬಿ. ಪಾಟೀಲರ ಬೆಂಬಲದಿಂದ ಟಿಕೆಟ್ ಪಡೆದಿರುವ ಕುಲಕರ್ಣಿ, ಸಂಸತ್ ಪ್ರವೇಶದ ಕನಸು ಕಂಡಿರುವುದು ಸಹಜ.

ಟಿಕೆಟ್ ಘೊಷಣೆ ವಿಳಂಬವಾಗಿದ್ದರಿಂದ ಅವರಿಗೆ ಸಿಗುವುದು 18 ದಿನ ಮಾತ್ರ. ಮೇಲಾಗಿ, ಸಚಿವ ಸಿ.ಎಸ್. ಶಿವಳ್ಳಿಯವರ ಅಕಾಲಿಕ ನಿಧನದಿಂದಾಗಿ ಅವರಿಗೆ ಶಾಸಕರ ಬೆಂಬಲ ಕಡಿಮೆಯಾಗಿದೆ. ಮಧ್ಯೆ ಡಾ. ಮಹೇಶ ನಾಲವಾಡ ಪಕ್ಷ ಬಿಟ್ಟಿದ್ದಾರೆ. ದೀಪಕ ಚಿಂಚೋರೆ ದೂರ ಸರಿದಿದ್ದಾರೆ. ರಾಹುಲ್​ಗಾಂಧಿಯನ್ನು ದೇಶದ ಪ್ರಧಾನಿಯಾಗಿಸಲು ವಿನಯ ಕುಲಕರ್ಣಿಗೆ ಜನ ಎಷ್ಟು ಮತ ನೀಡುತ್ತಾರೆ ಎನ್ನುವುದು ಅತ್ಯಂತ ಕುತೂಹಲದ ಸಂಗತಿ.

ಪ್ರಲ್ಹಾದ ಜೋಶಿ ನಾಲ್ಕನೇ ಬಾರಿ ಸಂಸದರಾಗುವ ಅಭಿಲಾಷೆಯೊಂದಿಗೆ ಕಣಕ್ಕಿಳಿದಿದ್ದಾರೆ. ಎರಡು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರೇ ಹುಬ್ಬಳ್ಳಿಗೆ ಬಂದು ರ‍್ಯಾಲಿ ನಡೆಸುವ ಮೂಲಕ ಚುನಾವಣೆ ಘೊಷಣೆಗೂ ಮುನ್ನವೇ ಬಿಜೆಪಿ ಪ್ರಚಾರಕ್ಕೆ ಚಾಲನೆ ನೀಡಿದ್ದರಿಂದ, ಕಮಲ ಪಕ್ಷದ ಮತಯಾಚನೆ ಜೋರಾಗಿಯೇ ನಡೆದಿದೆ.

ಇಡೀ ದೇಶದಲ್ಲಿ ಮೋದಿಯೋ, ರಾಹುಲ್​ಗಾಂಧಿಯೋ ಎಂಬ ವಿಷಯದ ಆಧಾರದಲ್ಲೇ ಚುನಾವಣೆ ನಡೆಯುತ್ತಿದ್ದು, ಧಾರವಾಡ ಕ್ಷೇತ್ರ ಹೊರತಲ್ಲ. ಆದಾಗ್ಯೂ, ಪ್ರಚಾರ ರಂಗು ಪಡೆದಂತೆಲ್ಲ ಹೊಸ ಹೊಸ ವಾಗ್ಬಾಣಗಳ ಪ್ರಯೋಗವಾಗುವುದು ನಿರೀಕ್ಷಿತ. ಧಾರವಾಡ ಕ್ಷೇತ್ರದಲ್ಲಿ ಯಾರ್ಯಾರು ಏನೇನು ಮಾತಾಡಲಿದ್ದಾರೆ, ಯಾವ್ಯಾವ ಭರವಸೆ ನೀಡಲಿದ್ದಾರೆ, ಹೊಸ ಹೊಸ ತಂತ್ರ ಮಾಡಲಿದ್ದಾರೆ ಎಂಬ ಕುತೂಹಲಕ್ಕೆ ಏ. 5ರಿಂದ 21ರವರೆಗಿನ ದಿನಗಳು ಸಾಕ್ಷಿಯಾಗಲಿವೆ.

ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕೆಲಸದ ಜೊತೆಗೆ ನರೇಂದ್ರ ಮೋದಿ ಎಂಬ ಚುಂಬಕ ಶಕ್ತಿ ಬಿಜೆಪಿಗೆ ದೊಡ್ಡ ಬಲ. 8ರಲ್ಲಿ 6 ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿರುವುದು, ಪಕ್ಷದಲ್ಲಿ ಒಡಕು-ಅಸಮಾಧಾನವಿಲ್ಲದಿರುವುದು ಅನುಕೂಲವಾಗಿದೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...