21 C
Bengaluru
Thursday, January 23, 2020

ರಸ್ತೆ ನಿರ್ವಿುಸಿದರೆ ವಿಷ ಸೇವನೆ!

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮುಂಡಗೋಡ: ನಮ್ಮ ಸ್ವಂತ ಜಾಗವನ್ನು ಅತಿಕ್ರಮಣ ಮಾಡಿ ಸಾರ್ವಜನಿಕ ರಸ್ತೆ ನಿರ್ವಿುಸಲು ಮುಂದಾಗಿದ್ದು, ನಮ್ಮನ್ನು ಬೀದಿಪಾಲು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿ ಪಟ್ಟಣದ ಚನ್ನವೀರಯ್ಯ ಕೂಡಲಮಠ ಎಂಬುವರು ಕುಟುಂಬ ಸಮೇತ ಕೈಯಲ್ಲಿ ವಿಷದ ಬಾಟಲಿ ಹಿಡಿದುಕೊಂಡು ಪಟ್ಟಣ ಪಂಚಾಯಿತಿ ಕಚೇರಿ ಎದುರು ನಿಂತು ಶುಕ್ರವಾರ ಮಾಧ್ಯಮದವರ ಎದುರು ಅಳಲು ತೋಡಿಕೊಂಡರು.

ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಬೃಂದಾವನ ಬಡಾವಣೆಗೆ ಕಳೆದ 6-7 ವರ್ಷಗಳಿಂದ ಅಧಿಕೃತ ರಸ್ತೆ ಇಲ್ಲ. ಈಗ ಬಡಾವಣೆ ಎದುರಿನ 1 ಗುಂಟೆ 12 ಆಣೆ ಜಾಗವನ್ನು ಕಬಳಿಸಿ ರಸ್ತೆ ಮಾಡಲು ಹೊರಟಿದ್ದಾರೆ. ಈ ಬಗ್ಗೆ ಪಪಂ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸುತ್ತಿಲ್ಲ. ಅಧಿಕಾರಿಗಳು ಕೂಡ ಬಡಾವಣೆಯ ಮಾಲೀಕನ ಪರವಾಗಿಯೇ ಇದ್ದಾರೆಂದು ಆರೋಪಿಸಿದ ಅವರು, ಈಗ ಜಾಗ ಖಾಲಿ ಮಾಡುವಂತೆ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ. ನಮಗೆ ವಾಸಿಸಲು ಈ ಜಾಗ ಹೊರತುಪಡಿಸಿ ಬೇರೆ ಯಾವುದೇ ನೆಲೆ ಇಲ್ಲ.

ಈ ಜಾಗವನ್ನು ಕಸಿದುಕೊಂಡು ರಸ್ತೆ ನಿರ್ವಿುಸಿದರೆ ನಮ್ಮ ಕುಟುಂಬ ಸದಸ್ಯರೆಲ್ಲ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳೇ ಮುಂದೆ ನೇರ ಹೊಣೆಯಾಗಲಿದ್ದಾರೆ ಎಂದು ಮಾಧ್ಯಮದವರ ಮುಂದೆ ಹೇಳಿದರು. ಇದಕ್ಕೂ ಮುನ್ನ ಚನ್ನವೀರಯ್ಯ ಕೂಡ ಲಮಠ ಕುಟುಂಬದವರು ನಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಪಪಂ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು. ಈ ವೇಳೆ ನಿರ್ಮಲಾ ಕೂಡಲಮಠ, ಶಿವಯೋಗಿ ಕೂಡಲಮಠ ಇತರರಿದ್ದರು.

ಬಡಾವಣೆ ಮಾಲೀಕರು ರಸ್ತೆ ನಿರ್ವಣಕ್ಕೆ 4 ಗುಂಟೆ ಜಾಗದ ಹಕ್ಕು ಬಿಟ್ಟುಕೊಟ್ಟ ಬಗ್ಗೆ ಪತ್ರ ನೀಡಿದ್ದಾರೆ. ಸರ್ವೆ ನಡೆಸಲಾಗಿದೆ. ಸಾರ್ವಜನಿಕ ರಸ್ತೆ ನಿರ್ವಿುಸುವ ಉದ್ದೇಶದಿಂದ ಸಾರ್ವಜನಿಕ ಪ್ರಕಟಣೆ ಹೊರಡಿಸುತ್ತಿದ್ದೇವೆ. ಯಾರಾದರೂ ಈ ಬಗ್ಗೆ ದಾಖಲೆ ಸಮೇತ ತಕರಾರು ಅರ್ಜಿ ಸಲ್ಲಿಸಿದರೆ ಪರಿಶೀಲನೆ ನಡೆಸಲಾಗುವುದು.
| ಸಂಗನಬಸಯ್ಯ
ಪಪಂ ಮುಖ್ಯಾಧಿಕಾರಿ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...