ರಾಜಕಾರಣಕ್ಕೆ ಹೊಸ ಮೌಲ್ಯ ನೀಡಿದ ಮೋದಿ

ಶಿವಮೊಗ್ಗ: ರಾಜಕಾರಣಕ್ಕೆ ಹೊಸ ಮೌಲ್ಯ ತಂದುಕೊಟ್ಟಿರುವವರು ಪ್ರಧಾನಿ ನರೇಂದ್ರ ಮೋದಿ. ರಾಜಕೀಯ ಎಂದರೆ ಕೇವಲ ಅಧಿಕಾರ ಹಿಡಿಯುವುದು, ಹಣ ಸಂಪಾದಿಸುವುದು ಎಂಬ ಗ್ರಹಿಕೆಯನ್ನು ಅವರು ದೂರಾಗಿಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್ ಹೇಳಿದರು.

ಜಿಲ್ಲಾ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಇದುವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ಅಧಿಕಾರ ಸೇವೆಯ ಮಾರ್ಗ ಎನ್ನುವುದನ್ನು ಮರೆತಿತ್ತು. ಈಗ ಮೋದಿ ರಾಜಕೀಯ ಸೇವೆ ಮಾಡಲು ಇರುವ ಸಾಧನ ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ.ಸಿದ್ದರಾಮಣ್ಣ ಮಾತನಾಡಿ, ಬಿಜೆಪಿ ಆರಂಭದಿಂದಲೂ ವಿಶಿಷ್ಟ ಪಕ್ಷ. ಈಗ ಸದಸ್ಯತ್ವದಲ್ಲಿ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿದೆ. ಮೋದಿ ವಿಶ್ವದ ಅಗ್ರಗಣ್ಯ ನಾಯಕರಾಗಿ ಬೆಳೆಯುತ್ತಿದ್ದಾರೆ ಎಂದರು.

ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿ, ಮೋದಿ ಆಡಳಿತದ ಜತೆಗೆ ಆರೋಗ್ಯಕ್ಕೂ ಒತ್ತು ನೀಡಿದ್ದಾರೆ. ಪ್ರತಿದಿನ ಬೆಳಗ್ಗೆ 2 ಗಂಟೆ ವ್ಯಾಯಾಮ ಮಾಡá-ತ್ತಾರೆ. ವಿಶ್ವದ ಎಲ್ಲರೂ ಆರೋಗ್ಯದಿಂದ ಇರಬೇಕೆಂದು ಭಾರತದ ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ ಎಂದು ಹೇಳಿದರು. ಎಂಎಡಿಬಿ ಮಾಜಿ ಅಧ್ಯಕ್ಷ ಎ.ಎಸ್.ಪದ್ಮನಾಭ ಭಟ್, ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್.ಅರುಣ್, ಮೇಯರ್ ಲತಾ ಗಣೇಶ್, ಉಪಮೇಯರ್ ಚನ್ನಬಸಪ್ಪ ಮುಂತಾದವರಿದ್ದರು.

Leave a Reply

Your email address will not be published. Required fields are marked *