ಚಿತ್ರದುರ್ಗ: ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ. ತಿಪ್ಪೇಸ್ವಾಮಿ ಹೇಳಿದರು.
ರಾಜ್ಯಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನಗರದ ಸೆಂಟ್ ಜೋಸೆಫ್ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಸಂವಾದ ಕಾ ರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಾಲಾ ಮಕ್ಕಳಿಗೆ ಬಹಳ ಮುಖ್ಯವಾಗಿ ಬಸ್‌ವ್ಯವಸ್ಥೆ ಅಗತ್ಯವಿದೆ. ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಸೂಕ್ತ ಅಧ್ಯಯನ ನಡೆಸಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಆರು ತಿಂಗಳ ಒಳಗೆ ಶಿಫಾರಸು ಮಾಡುವಂತೆ ಸಂಸ್ಥೆಯೊಂದಕ್ಕೆ ಆಯೋಗ ಜವಾಬ್ದಾರಿ ನೀಡಿದೆ. ಸಾರಿಗೆ ಸೌಲಭ್ಯ ಕುರಿತಂತೆ ಮಕ್ಕಳು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿರುವುದು ಆಯೋಗ ಗಮನಿಸಿದೆ ಎಂದರು.
ಆಯೋಗ ಡಿಸೆಂಬರ್‌ನಲ್ಲಿ ಎಲ್ಲ ಜಿಲ್ಲೆಗಳಲ್ಲಿ ಮಕ್ಕಳಿಂದ ಅಹವಾಲು ಸ್ವೀಕರಿಸುವ ಹಾಗೂ ಸಂವಾದ ಕಾರ‌್ಯಕ್ರಮ ನಡೆಸುತ್ತಿದ್ದು, ಹಕ್ಕು ಗಳನ್ನು ಮಕ್ಕಳಿಗೆ ತಲುಪಿಸುವ ಜವಾಬ್ದಾರಿ ಹಲವು ಇಲಾಖೆಗಳ ಮೇಲಿದೆ ಎಂದರು.
ಬಾಲನ್ಯಾಯ ಕಾಯ್ದೆ ಅನುಸಾರ ಪ್ರತಿ ಪೊಲೀಸ್ ಠಾಣೆಯಲ್ಲಿ ಮೂರು ಜನ ಅಧಿಕಾರಿಗಳನ್ನು ಒಳಗೊಂಡಿರುವ ಮಕ್ಕಳ ವಿಶೇಷ ಪೊಲೀಸ್ ಘಟಕಗಳಿವೆ. ತೆರೆದ ಮನೆ ಕಾರ್ಯಕ್ರಮದಡಿ ಮಕ್ಕಳು ಪ್ರತಿ ಗುರುವಾರ ಠಾಣೆಗೆ ತೆರಳಿ ಪೊಲೀಸ್ ವ್ಯವಸ್ಥೆ ಮಾಹಿತಿ ಪಡೆಯಬಹುದಾಗಿದೆ. ಶಿಕ್ಷಕರು ಹತ್ತಿರದ ಠಾಣೆಗೆ ಮಕ್ಕಳನ್ನು ಕರೆದು ಕೊಂಡು ಹೋಗಬೇಕು ಎಂದರು.
ಸೌಕರ್ಯಗಳಿಗೆ ಮಕ್ಕಳ ಮನವಿ: ಕಾರ್ಯಕ್ರಮದಲ್ಲಿದ್ದ ಚಿತ್ರದುರ್ಗ ತಾಲೂಕಿನ ವಿವಿಧ ಪ್ರೌಢಶಾಲೆ ವಿದ್ಯಾರ್ಥಿಗಳು ಶಾಲೆಯಲ್ಲಿ ಕುಡಿಯುವ ನೀರು, ಕಾಂಪೌಂಡ್, ಶೌಚಗೃಹ, ಬಸ್‌ವ್ಯವಸ್ಥೆ, ಶಾಲಾ ಕೊಠಡಿಗಳ ಸಮಸ್ಯೆಗಳನ್ನು ಆಯೋಗದ ಸದಸ್ಯರು, ಅಧಿಕಾರಿಗಳ ಗಮನಕ್ಕೆ ತಂದರು.
ಐನಹಳ್ಳಿ ಕುರುಬರಹಟ್ಟಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ. ಕಾವ್ಯಾ, ಸಾರಿಗೆ ಸೌಲಭ್ಯ, ಶಾಲಾ ಕೊಠಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಿಎಂಎಫ್ ಅನುದಾನದಲ್ಲಿ ಹೊಸ ಕೊಠಡಿಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಐನಹಳ್ಳಿ ಗ್ರಾಪಂ ಮಕ್ಕಳ ಗ್ರಾಮ ಸಭೆ ನಡಾವಳಿ ಪಡೆದು ಕೆಎಸ್‌ಆರ್‌ಟಿಸಿಗೆ ಪತ್ರ ಬರೆಯುವಂತೆ ಬಿಇಒಗೆ ಸೂಚಿಸಿದ ತಿಪ್ಪೇಸ್ವಾಮಿ, ಬಸವನ ಶಿವನಕೆರೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಸೈಕಲ್ ಬೇಡಿಕೆ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಹೇಳಿದರು.
ಚಿಕ್ಕಗೊಂಡನಹಳ್ಳಿ ಸರ್ಕಾರಿ ಶಾಲೆ ಮಿಥುನ್, ಶಾಲೆ ಶೌಚಗೃಹ ಮತ್ತಿತರ ಸಮಸ್ಯೆಗಳ ಕುರಿತು ವಿವರಿಸಿದರು. ತಾಪಂ ಇಒ ವೈ. ರವಿ ಕುಮಾರ್ ಅಗತ್ಯ ಕ್ರಮವಹಿಸಲಾಗುವುದು ಎಂದರು.
ಡಿವೈಎಸ್‌ಪಿ ಪಿ.ಕೆ. ದಿನಕರ್ ಮಾತನಾಡಿ, ಪ್ರತಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಯನ್ನು ಮಕ್ಕಳ ಕಲ್ಯಾಣಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದರು.
ಡಿಡಿಪಿಐ ಎಂ.ಆರ್. ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ. ಶೀಲಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಡಿವೈಪಿಸಿ ವೆಂಕಟೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಂತೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಭಾರತಿ ಆರ್.ಬಣಕಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ,ಮುಖ್ಯಶಿಕ್ಷಕಿ ಬಾಲಮೇರಿ ಮತ್ತಿತರರು ಇದ್ದರು.
ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ಸೌಲಭ್ಯಕ್ಕೆ ಕ್ರಮ
ನಿಮ್ಮ ಸ್ಮಾರ್ಟ್ಫೋನ್ ನಿಮ್ಮ ಫಿಟ್ನೆಸ್ ಕೋಚ್… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone
Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…
ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್ ಲೈಫ್ ನಡೆಸುತ್ತಾರೆ! Numerology
Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…
ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast
breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…