21 C
Bengaluru
Wednesday, January 22, 2020

ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧಕ್ಕೆ ಆಂದೋಲನ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ,

ರಾಜ್ಯದಲ್ಲಿ ಸಂಪೂರ್ಣ ಮದ್ಯಪಾನ ನಿಷೇಧಕ್ಕೆ ರಾಜ್ಯ ಸರ್ಕಾರವನ್ನು ಆಗ್ರಹಿಸಲು ಆಂದೋಲನ ಹಮ್ಮಿಕೊಂಡಿದ್ದೇವೆ ಎಂದು ಹುಬ್ಬಳ್ಳಿ ಮದ್ಯ ವಿರೋಧಿ ಆಂದೋಲನದ ಸಂಚಾಲಕಿ ಡಾ. ವೀಣಾ ಟೊಣಪಿ ತಿಳಿಸಿದರು.ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರ ರಾಜ್ಯದಲ್ಲಿ ಆಗಿರುವಂತೆ ಸಂಪೂರ್ಣ ಪಾನ ನಿಷೇಧವೇ ನಮ್ಮ ಗುರಿ. ಈ ದಿಸೆಯಲ್ಲಿ ಡಿ. 7ರಂದು ಬೆ. 9.45ಕ್ಕೆ ನಗರದ ಇಂದಿರಾ ಗಾಜಿನ ಮನೆಯಿಂದ ಮಿನಿ ವಿಧಾನಸೌಧದವರೆಗೆ ಮೌನ ಮೆರವಣಿಗೆ ಹಮ್ಮಿಕೊಂಡಿದ್ದೇವೆ. ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. 25 ಮಹಿಳಾ ಮಂಡಳಗಳು ಬೆಂಬಲ ವ್ಯಕ್ತಪಡಿಸಿವೆ. ಐಎಂಎ, ಶಾಲಾ ಕಾಲೇಜ್‌ಗಳನ್ನು ಸಂಪರ್ಕಿಸಿದ್ದೇವೆ. ಸುಮಾರು 800 ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.ಹಿಂದೆಲ್ಲ ಮದ್ಯಪಾನ ನಿಷೇಧಕ್ಕೆ ಸಾಕಷ್ಟು ಹೋರಾಟ ನಡೆದಿರುವುದು ಗೊತ್ತಿದೆ. ಹಾಗೆಲ್ಲ ಸರ್ಕಾರ ಹಠಾತ್ ಆಗಿ ಮದ್ಯಪಾನ ನಿಷೇಧ ಮಾಡುತ್ತದೆಂದು ನಂಬಿಕೊಂಡಿಲ್ಲ. ನಾವು ಹಂತ ಹಂತವಾಗಿ ಹೋರಾಟ ಮಾಡಲಿದ್ದೇವೆ ಎಂದರು.ಸಂಪೂರ್ಣ ಮದ್ಯಪಾನ ನಿಷೇಧಕ್ಕೂ ಪೂರ್ವ ಸರ್ಕಾರಕ್ಕೆ ಕೆಲವು ಸೂಚನೆಗಳನ್ನು ನೀಡುತ್ತಿದ್ದೇವೆ. ಮದ್ಯ ವರ್ಜನ ಕೇಂದ್ರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸ್ಥಾಪಿಸಬೇಕು. ಮುಂದಿನ ದಿನಗಳಲ್ಲಿ ಹೊಸದಾಗಿ ಮದ್ಯ ಮಾರಾಟ ಲೈಸನ್ಸ್ ನೀಡಬಾರದು. ಮದ್ಯ ಮಾರಾಟ ಗುರಿ ನಿಗದಿಪಡಿಸಬಾರದು. ಪಟಾಕಿ ಮಾರಾಟಕ್ಕೆ ನಿರ್ದಿಷ್ಟ ಪ್ರದೇಶ ನಿಗದಿಪಡಿಸಿದಂತೆ ಮದ್ಯ ಮಾರಾಟಕ್ಕೆ ವ್ಯವಸ್ಥೆ ಮಾಡಬೇಕು. ಕುಡಿದು ವಾಹನ ಚಾಲನೆ ಮಾಡುವವರಿಗೆ ಕೇವಲ ದಂಡವಲ್ಲ, ಮದ್ಯ ವರ್ಜನ ಕೇಂದ್ರಗಳಿಗೆ ಕಳಿಸಬೇಕು. ದಂಡದಿಂದ ಬರುವ ಆದಾಯವನ್ನು ಇದಕ್ಕೆ ಉಪಯೋಗಿಸಬೇಕೆಂದು ಕೋರುತ್ತಿದ್ದೇವೆ ಎಂದರು.ರಸ್ತೆ ಅಪಘಾತ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ, ಇತ್ಯಾದಿ ಘಟನೆಗಳಿಗೆ ಮದ್ಯಪಾನವೇ ಕಾರಣ. ಆನ್‌ಲೈನ್, ಹೋಮ್ ಡಿಲೇವರಿ ಮೂಲಕ ಮದ್ಯ ಪೂರೈಕೆಯಾಗುವ ದಿನಗಳು ದೂರವಿಲ್ಲ. ಹಾಗಾದರೆ, ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಸಹ ಸಂಚಾಲಕಿ ಶಾರದಾ ಜಿ., ಡಾ. ಅನಿತಾ ಕೆಂಭಾವಿ, ಡಾ. ಭಾರತಿ ಹಿರೇಮಠ, ಪ್ರಭಾ ದೊಡ್ಡವಾಡಮಠ ಹಾಗೂ ಅನೂಪ ಬಿಜಾಪುರ ಇದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...