ಉಡುಪಿ: ರಾಜ್ಯದಲ್ಲಿ 4 ಲಕ್ಷ ಮನೆ ನಿರ್ಮಾಣ ಗುರಿ ಹೊಂದಲಾಗಿದ್ದು, ವಿವಿಧ ವಸತಿ ಯೋಜನೆ ಫಲಾನುಭವಿಗಳ ಆಯ್ಕೆಗಾಗಿ ನಗರ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಹಾಗೂ ಗ್ರಾಮೀಣ ಭಾಗಗಳಲ್ಲಿ ಜಿಪಂ ಸಿಇಒ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು. ಬುಧವಾರ ಕೊಳಗೇರಿ ಅಭಿವೃದ್ಧಿ ಮಂಡಳಿ ಮತ್ತು ನಗರಸಭೆ ಸಹಯೋಗದೊಂದಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್‌ನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ರಾಜೀವ್ ಗಾಂಧಿ ವಸತಿ ಯೋಜನೆಯಡಿ 460 ಮನೆಗಳ ವಸತಿ ಸಮುಚ್ಚಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. 5-6 ವರ್ಷದಿಂದ ನನೆಗುದಿಗೆ ಬಿದ್ದಿದ್ದ ಅನೇಕ ಯೋಜನೆಗಳಿಗೆ ಇಲಾಖೆ ಕಾಯಕಲ್ಪ ನೀಡುತ್ತಿದೆ. ಪ್ರಧಾನಿ ಆಶಯದಂತೆ ಪ್ರತಿ ಯೊಬ್ಬರಿಗೂ ಸೂರು ಕಲ್ಪಿಸಲು ಉದ್ದೇಶಿಸಲಾಗಿದೆ. ಪ್ರಸ್ತುತ ವಸತಿ ಪ್ರದೇಶದಲ್ಲಿ ಮೂಲಸೌಕರ್ಯ ನಿರ್ಮಾಣಕ್ಕೆ 6.82 ಕೋಟಿ ರೂ. ಬೇಡಿಕೆ ಸಲ್ಲಿಸಿದ್ದಾರೆ. ಇದರ ಜತೆಗೆ ಎಸ್‌ಟಿಪಿ ಪ್ಲಾೃಂಟ್, ದೇವಸ್ಥಾನ, ಅಂಗನವಾಡಿ ಕೇಂದ್ರ ನಿರ್ಮಾಣಕ್ಕೂ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು.
ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಸ್ವಂತ ಸೂರು ಹೊಂದುವುದು ಜನರ ಮುಖ್ಯ ಗುರಿಯಾಗಿರುತ್ತದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ 2022ರೊಳಗೆ ಪ್ರತಿಯೊಬ್ಬರೂ ಮನೆ ಹೊಂದಬೇಕು ಎಂಬ ನಿಟ್ಟಿನಲ್ಲಿ 1.5 ಲಕ್ಷ ರೂ. ಅನುದಾನವೂ ಲಭಿಸುತ್ತಿದೆ. ದೂರದೃಷ್ಟಿಯ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಬೇಕು. ತಲೆ ಮೇಲೊಂದು ಸೂರು ವ್ಯಕ್ತಿಯ ಆತ್ಮಗೌರವವನ್ನು ಹೆಚ್ಚಿಸುತ್ತದೆ ಎಂದರು. ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ದೇಶದಲ್ಲಿ ಸ್ಲಂ ರಹಿತ ಪ್ರದೇಶ ಮೋದಿಯವರ ಸಂಕಲ್ಪ. ಜಿಲ್ಲೆಯಲ್ಲಿ 17 ಘೊಷಿತ ಕೊಳಚೆಗೇರಿ ಪ್ರದೇಶಗಳಿವೆ. ನಗರದಲ್ಲೇ 8 ಸ್ಲಂಗಳಿವೆ. ಇವುಗಳಲ್ಲಿ 4 ಸ್ಲಂಗಳ ಬಡಜನರಿಗೆ ಇಲ್ಲಿ ಮನೆ ನಿರ್ಮಾಣವಾಗುತ್ತಿರುವುದು ಸಂತಸದ ವಿಚಾರ. ಇಲ್ಲಿ 4 ಸಂಕೀರ್ಣಗಳಲ್ಲಿ 1000 ಮನೆ ನಿರ್ಮಾಣಕ್ಕೆ ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು. ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತ ಪಿ.ಆರ್.ಶಿವಪ್ರಸಾದ್, ಪೌರಾಯುಕ್ತ ಆನಂದ್ ಸಿ.ಕಲ್ಲೋಳಿಕರ್, ನಗರಸಭಾ ಸದಸ್ಯೆ ವಿಜಯಲಕ್ಷ್ಮೀ, ಬ್ಯಾಂಕ್ ಆಫ್ ಬರೋಡಾ ಜಿಎಂ ರವೀಂದ್ರ ರೈ ಉಪಸ್ಥಿತರಿದ್ದರು.
7.42 ಲಕ್ಷ ರೂ.ನಲ್ಲಿ ಫ್ಲಾಟ್ ನಿರ್ಮಾಣ: 7.42 ಲಕ್ಷ ರೂ.ವೆಚ್ಚದಲ್ಲಿ ಫ್ಲಾೃಟ್ ನಿರ್ಮಾಣವಾಗಲಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನ ಪ.ಜಾತಿ ಮತ್ತು ಪಂಗಡಕ್ಕೆ 3.50 ಲಕ್ಷ ರೂ., ಸಾಮಾನ್ಯ ವರ್ಗಕ್ಕೆ 2.70 ಲಕ್ಷ ರೂ. ಹಾಗೂ ನಗರಸಭೆಯಿಂದ 74,299 ರೂ. ನೀಡಲಾಗುತ್ತದೆ ಎಂದು ಪ್ರಸ್ತಾವಿಕ ವಾಗಿ ಮಾತನಾಡಿದ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಪ.ಜಾತಿ ಮತ್ತು ಪಂಗಡದ ಫಲಾನುಭವಿಗಳು 60 ಸಾವಿರ ರೂ, ಸಾಮಾನ್ಯ ವರ್ಗದವರು 90 ಸಾವಿರ ರೂ. ಪಾವತಿಸಬೇಕು. ಉಳಿದ ಮೊತ್ತವನ್ನು ಬ್ಯಾಂಕ್ ಆಫ್ ಬರೋಡಾ ಮೂಲಕ ಸಾಲ ರೂಪದಲ್ಲಿ ಫಲಾನುಭವಿಗಳಿಗೆ ಒದಗಿಸಲಾಗುವುದು. ಮುಂದಿನ ವರ್ಷ ಮೇನಲ್ಲಿ ವಸತಿ ಸಮುಚ್ಚಯ ಉದ್ಘಾಟನೆಗೊಳ್ಳಲಿದೆ ಎಂದರು.
ಬಡವರಿಗೆ ಸರ್ಕಾರದಿಂದ ವಸತಿ ನೀಡಲು ಈ ಹಿಂದೆ ಇದ್ದ ಆದಾಯ ಮಿತಿಯನ್ನು 75 ಸಾವಿರ ರೂ. ನಿಂದ 3 ಲಕ್ಷಕ್ಕೆ ಹೆಚ್ಚಿಸಲಾಗಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಸಹಾಯಧನ ಮೊತ್ತವನ್ನು 1.20ರಿಂದ 2 ಲಕ್ಷಕ್ಕೆ ಏರಿಕೆ ಮಾಡಲಾಗುವುದು.
– ವಿ.ಸೋಮಣ್ಣ, ವಸತಿ ಸಚಿವ
ರಾಜ್ಯದಲ್ಲಿ 4 ಲಕ್ಷ ಮನೆ ನಿರ್ಮಾಣ ಗುರಿ

ರಾತ್ರಿ ವೇಳೆ ಮಾವಿನ ಹಣ್ಣು ತಿನ್ನಬಾರದು! ಯಾಕೆ ಗೊತ್ತಾ? mango
mango: ಬೇಸಿಗೆಯಲ್ಲಿ ಹೆಚ್ಚು ಇಷ್ಟವಾಗುವ ಹಣ್ಣು ಮಾವಿಹಣ್ಣು. ಇದು ವಿಟಮಿನ್ ಎ, ಸಿ, ಫೈಬರ್, ಉತ್ಕರ್ಷಣ…
ಅಕ್ಷಯ ತೃತೀಯ ಹಬ್ಬಕ್ಕೂ ಮುನ್ನ ನಿಮ್ಮ ಮನೆಯಿಂದ ಈ ವಸ್ತುಗಳನ್ನು ತೆಗೆದುಹಾಕಿ.. Akshaya Tritiya
Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಲಕ್ಷ್ಮಿ ದೇವಿಯ ಹಬ್ಬವೆಂದು ಪರಿಗಣಿಸಲಾಗುತ್ತದೆ. ಚಿನ್ನದ ಅಂಗಡಿಗಳು ವ್ಯಾಪಾರದಿಂದ…
ಕಬ್ಬಿನ ರಸವನ್ನು ಎಷ್ಟು ದಿನ ಸಂಗ್ರಹಿಸಬಹುದು..ಈ ಜ್ಯೂಸ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳಿವು..Sugarcane Juice
Sugarcane Juice: ಕಬ್ಬಿನ ಜ್ಯೂಸ್ ಬೇಸಿಗೆಯಲ್ಲಿ ಎಲ್ಲರೂ ಹೆಚ್ಚು ಇಷ್ಟಪಡುವ ಆರೋಗ್ಯಕರ ಪಾನೀಯಗಳಲ್ಲಿ ಒಂದಾಗಿದೆ.…