ರಾಜ್ಯಪಾಲರು ಮಹದಾಯಿ ನೀರು ಕೊಡಿಸಲಿ

Latest News

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಸ್ತವ್ಯ ಹೂಡಿದ ಶಾಲೆಯಲ್ಲಿ ಶಿಕ್ಷಕರಿಂದ ಮಹಾ ಪ್ರಮಾದ

ಚಾಮರಾಜನಗರ: ಸಚಿವರ ಬಳಕೆಗೆಂದು ಮೀಸಲಿಟ್ಟ ಶೌಚಗೃಹವನ್ನು ಶಾಲಾ ಮಕ್ಕಳ ಕೈಯಲ್ಲಿ ಸ್ವಚ್ಛಗೊಳಿಸುವ ಮೂಲಕ ಶಾಲಾ ಶಿಕ್ಷಕರು ಪ್ರಮಾದವೆಸಗಿರುವ ಘಟನೆ ರಾಜ್ಯದ ಗಡಿಭಾಗದ ಶಾಲೆಯೊಂದರಲ್ಲಿ...

ರಾಷ್ಟ್ರ ರಕ್ಷಣೆಗೆ ಪ್ರಾಣವನ್ನೇ ಪಣಕ್ಕಿಡುವ ಧೀರ ಯೋಧರಿಗಾಗಿ “ಐರನ್​ ಮ್ಯಾನ್​” ಉಡುಪು ಅಭಿವೃದ್ಧಿಪಡಿಸಿದ ಯುವಕ!

ವಾರಾಣಸಿ: ಹಾಲಿವುಡ್​ ಐರನ್​ ಮ್ಯಾನ್​ ಚಿತ್ರದಿಂದ ಸ್ಪೂರ್ತಿಗೊಂಡು ವಾರಾಣಸಿಯ ಖಾಸಗಿ ವಿಶ್ವವಿದ್ಯಾಲಯದ ಉದ್ಯೋಗಿಯೊಬ್ಬರು "ಐರನ್​ ಮ್ಯಾನ್​" ಉಡುಪನ್ನು ಅಭಿವೃದ್ಧಿಪಡಿಸಿ ಸುದ್ದಿಯಾಗಿದ್ದಾರೆ. ಎದುರಾಳಿಯೊಂದಿಗೆ ಸೆಣಸಾಡುವ...

ಐಟಿ-ಬಿಟಿ ಅಭಿವೃದ್ಧಿಗೆ ಸರ್ಕಾರದ ಸಹಕಾರ: ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ, ಬೆಂಗಳೂರು ಟೆಕ್ ಸಮಿಟ್​ಗೆ ಅದ್ದೂರಿ ಚಾಲನೆ

ಬೆಂಗಳೂರು: ಆವಿಷ್ಕಾರ, ಸೇವಾ ಕ್ಷೇತ್ರಗಳ ಜತೆಗೆ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಅಭಿವೃದ್ಧಿಗೆ ಬೇಕಾಗುವ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ....

ಬಿಐಎಸ್ ವರದಿ ಆತಂಕಕಾರಿ: ಜಲಮಂಡಳಿಗೆ ತಜ್ಞರ ಸಲಹೆ, ಗುಣಮಟ್ಟದ ನೀರಿಗೆ ನಾಗರಿಕರ ಆಗ್ರಹ

ಬೆಂಗಳೂರು: ಬೆಂಗಳೂರು ಜಲಮಂಡಳಿ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಶುದ್ಧವಲ್ಲ ಎಂಬುದು ಭಾರತೀಯ ಗುಣಮಟ್ಟ ಸಂಸ್ಥೆ (ಬಿಐಎಸ್) ನಡೆಸಿದ ಅಧ್ಯಯನದಲ್ಲಿ ಬಯಲಾಗಿದೆ. ಇದು...

ವೈದ್ಯರಿಂದ ಮಾತೃಹೃದಯದ ಸೇವೆ

ಬೆಳ್ತಂಗಡಿ: ವೈದ್ಯರು ಮಾನವೀಯತೆ ಹಾಗೂ ನಗುಮುಖದ ಮಾತೃ ಹೃದಯದೊಂದಿಗೆ ರೋಗಿಗಳ ಸೇವೆ ಮಾಡಬೇಕು. ರೋಗಿಗಳ ಸೇವೆಯೇ ದೇವರ ಸೇವೆಯಾಗಿದೆ ಎಂದು ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ...

ನರಗುಂದ: ಮಹದಾಯಿ-ಮಲಪ್ರಭೆ ನದಿ ಜೋಡಣೆ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಆ. 15ರೊಳಗೆ ರೈತ ಸೇನಾ ಕರ್ನಾಟಕದ ನೂರಾರು ರೈತ ಹೋರಾಟಗಾರರು ರಾಜ್ಯಪಾಲರ ಭೇಟಿಗೆ ತೆರಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶಸ್ವಾಮಿ ಸೊಬರದಮಠ ತಿಳಿಸಿದರು.

ಮಹದಾಯಿ-ಮಲಪ್ರಭೆ ನದಿ ಜೋಡಣೆಗೆ ಆಗ್ರಹಿಸಿ ನರಗುಂದದಲ್ಲಿ ಶನಿವಾರ ರೈತರು ನಡೆಸುತ್ತಿರುವ 1479ನೇ ದಿನದ ನಿರಂತರ ಹೋರಾಟ ವೇದಿಕೆಯಲ್ಲಿ ಪತ್ರಿಕಾ ದಿನಾಚರಣೆ ಪ್ರಯುಕ್ತ ತಾಲೂಕು ಕಾರ್ಯನಿರತ ಪತ್ರಕರ್ತರನ್ನು ಸತ್ಕರಿಸಿ ಅವರು ಮಾತನಾಡಿದರು.

ಮಹದಾಯಿಗಾಗಿ ಉತ್ತರ ಕರ್ನಾಟಕದ ನೂರಾರು ರೈತರು ಹಲವಾರು ದಿನಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಹೋರಾಟದಲ್ಲಿ ಈ ಭಾಗದ ಹಲವಾರು ಅಮಾಯಕ ರೈತರ ಮೇಲೆ ಸರ್ಕಾರ ಕೇಸ್​ಗಳನ್ನು ಹಾಕಿದೆ. 12 ರೈತರು ಮೃತಪಟ್ಟಿದ್ದಾರೆ. ಕಳೆದ ವರ್ಷ ಆ. 14ರಂದು ನ್ಯಾಯಾಧಿಕರಣ ಕರ್ನಾಟಕಕ್ಕೆ 13.5 ಟಿಎಂಸಿ ನೀರು ನೀಡಿ ಆದೇಶಿಸಿದೆ. ವರ್ಷವಾದರೂ ಕೇಂದ್ರ ಸರ್ಕಾರದಿಂದ ಯೋಜನೆ ಕುರಿತು ಗೆಜೆಟ್ ನೋಟಿಫಿಕೇಷನ್ ದೊರೆತಿಲ್ಲ. ಜು. 16ರಂದು ಮಹದಾಯಿ ಹೋರಾಟಕ್ಕೆ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅಂದು ರಾಜ್ಯಪಾಲರ ಭೇಟಿಗೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ರೈತ ಸೇನಾ ಕರ್ನಾಟಕದಿಂದ ಮನವಿ ಸಲ್ಲಿಸಲಾಗಿತ್ತು. ಅದಕ್ಕೆ ಪ್ರತಿಕ್ರಿಯೆ ಬಂದಿಲ್ಲ ಎಂದರು. ಯೋಜನೆ ಕುರಿತು ಯಾವುದೇ ರಾಜ್ಯದೊಂದಿಗೆ ರಾಜಿ, ಮಾತುಕತೆ ಅವಶ್ಯಕತೆ ಇಲ್ಲ. ಯಾವುದೇ ರಾಜ್ಯದಿಂದ ಯೋಜನೆಗೆ ತಕರಾರು ಅರ್ಜಿ ಸಲ್ಲಿಕೆಯಾಗಿಲ್ಲ. ಆದರೂ ಕರ್ನಾಟಕದ ಎಲ್ಲ ರಾಜಕೀಯ ಪಕ್ಷಗಳು ಈ ಹೋರಾಟವನ್ನು ರಾಜಕೀಯ ಅಸ್ತ್ರವನ್ನಾಗಿಸಿಕೊಂಡಿವೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ, ಕೇಂದ್ರ ಸರ್ಕಾರದಿಂದ ನೀರು ಕೊಡಿಸಬೇಕೆಂದು ಒತ್ತಾಯಿಸಿ ಆ. 15ರಂದು ಬೆಂಗಳೂರು ರಾಜಭವನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದು ಯಾವುದೇ ರಾಜಕೀಯ ಪಕ್ಷದವರ ವಿರುದ್ಧವಲ್ಲ. ಇದರಲ್ಲಿ ರಾಜಕೀಯ ಪಕ್ಷದ ಮುಖಂಡರಿಗೆ ಅವಕಾಶವಿಲ್ಲ. ರೈತ ಸೇನಾ ಕರ್ನಾಟಕದ 1000 ಮಹಿಳಾ-ಪುರುಷ ಹೋರಾಟಗಾರರು ರೈಲ್ವೆ ಮೂಲಕ ಪ್ರಯಾಣಿಸಲಿದ್ದಾರೆ. ಆ. 14 ರೊಳಗೆ ರಾಜ್ಯಪಾಲರ ಭೇಟಿಗೆ ಅವಕಾಶ ದೊರೆತರೆ ಯೋಜನೆ ಕುರಿತು ರ್ಚಚಿಸಿ ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಮನವರಿಕೆ ಮಾಡಲಾಗುವುದು ಎಂದರು.

ಪತ್ರಕರ್ತರಾದ ರಾಜು ಹೊಸಮನಿ, ಉಮೇಶ ಬೋಳಶೆಟ್ಟಿ, ಸಿ.ಬಿ. ಸುಬೇದಾರ, ಜೆಡ್.ಎಂ. ಖಾಜಿ, ಪ್ರಭು ಗುಡಾರದ, ಸಿದ್ದಲಿಂಗಯ್ಯ ಮಣ್ಣೂರಮಠ, ಶಂಕರಪ್ಪ ತೆಗ್ಗಿನಮನಿ, ಬಸವರಾಜ ಹಲಕುರ್ಕಿ, ಎಸ್.ಎಸ್. ಖಾನಪ್ಪಗೌಡ್ರ ಮಾತನಾಡಿದರು.

ಈರಬಸಪ್ಪ ಹೂಗಾರ, ಎಸ್.ಬಿ. ಜೋಗಣ್ಣವರ, ರಮೇಶ ನಾಯ್ಕರ, ರಾಘವೇಂದ್ರ ಗುಜಮಾಗಡಿ, ಶಿವಾನಂದ ಹಳಕಟ್ಟಿ, ಹನುಮಂತ ಸರನಾಯ್ಕರ, ವಾಸು ಚವ್ಹಾಣ, ಅರ್ಜುನ ಮಾನೆ, ಸುಭಾಸ ಗಿರಿಯಣ್ಣವರ, ಮಂಜುಳಾ ಸರನಾಯ್ಕರ, ನಾಗರತ್ನಾ ಸವಳಬಾವಿ, ಅನಸಮ್ಮ ಶಿಂಧೆ, ಚನ್ನಮ್ಮ ಕರ್ಜಗಿ, ಕಾಶಮ್ಮ ಉಳ್ಳಾಗಡ್ಡಿಮಠ, ವೆಂಕಪ್ಪ ಹುಜರತ್ತಿ ಇತರರಿದ್ದರು.

ಮಹದಾಯಿ ಅಧಿಸೂಚನೆ ಹೊರಡಿಸಲು ಒತ್ತಾಯ

ನವಲಗುಂದ: ಮಹದಾಯಿ, ಕಳಸಾ ಬಂಡೂರಿ ರೈತ ಹೋರಾಟಕ್ಕೆ 4ನೇ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶನಿವಾರ ಸ್ಥಳೀಯ ರೈತ ಹೋರಾಟಗಾರರು ಪಟ್ಟಣದ ರೈತ ಭವನದ ಎದುರು ಕೆಲ ಹೊತ್ತು ಹುಬ್ಬಳ್ಳಿ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಮಹದಾಯಿ ಮಧ್ಯಂತರ ತೀರ್ಪಿಗೆ ಕೂಡಲೇ ಅಧಿಸೂಚನೆ ಹೊರಡಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ರೈತ ಮುಖಂಡ ಸುಭಾಸಚಂದ್ರಗೌಡ ಪಾಟೀಲ ಮಾತನಾಡಿ, ಆ. 3ಕ್ಕೆ ಮಹದಾಯಿ, ಕಳಸಾ ಬಂಡೂರಿ ರೈತ ಹೋರಾಟ ಆರಂಭವಾಗಿ 4ನೇ ವರ್ಷವಾಗಿದೆ. ಆದರೂ ರೈತರ ಬೇಡಿಕೆ ಈಡೇರಿಲ್ಲ. ಇದು ರೈತರಿಗೆ ಆದ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಮುಂದಾದರೂ, ರಾಜ್ಯ ಮತ್ತು ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು. ಈ ಭಾಗದ ಎಲ್ಲ ಪಕ್ಷದ ಜನಪ್ರತಿನಿಧಿಗಳು, ರಾಜಕೀಯ ನಾಯಕರು ಒಗ್ಗಟ್ಟಿನಿಂದ ರೈತರ ಸಮಸ್ಯೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು. ಹಿಂದಿನ ಸರ್ಕಾರದ ಅವಧಿಯ ಸಾಲಮನ್ನಾ ಲೋಪದೋಷ ಸರಿಪಡಿಸಿ ಎಲ್ಲ ರೈತರಿಗೂ ಸಾಲಮನ್ನಾದ ಯೋಜನೆ ತಲುಪಿಸಬೇಕು. ಬ್ಯಾಂಕ್​ಗಳು ರೈತರ ಸಾಲ ವಸೂಲಾತಿ ನಿಲ್ಲಿಸಬೇಕು. ಬರಗಾಲಕ್ಕೆ ತುತ್ತಾದ ತಾಲೂಕುಗಳನ್ನು ಗುರುತಿಸಿ ವಿಶೇಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ರೈತರ ಎಲ್ಲ ಬೇಡಿಕೆಗಳನ್ನು ಆ. 21ರೊಳಗಾಗಿ ಈಡೇರಿಸಬೇಕು. ಇಲ್ಲದಿದ್ದರೆ, ಆ. 22ರಂದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿರುವ ಮನವಿ ಪತ್ರವನ್ನು ಗ್ರೇಡ್2-ತಹಸೀಲ್ದಾರ್ ಎಂ.ಜೆ. ಹೊಕ್ರಾಣಿಯವರ ಮೂಲಕ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ರವಾನಿಸಿದರು.

ಬಿಜೆಪಿ ಮೇಲೆ ಹೆಚ್ಚಿದ ನಿರೀಕ್ಷೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ಚುಕ್ಕಾಣಿ ಹಿಡಿದಿದೆ. ಗೋವಾ, ಮಹಾರಾಷ್ಟ್ರ ಮತ್ತು ಕೇಂದ್ರದಲ್ಲೂ ಬಿಜೆಪಿ ಸರ್ಕಾರವಿದೆ. ಜತೆಗೆ ಉತ್ತರ ಕರ್ನಾಟಕ ಬಿಜೆಪಿ ಭದ್ರ ನೆಲೆಯಾಗಿದೆ. ಆದ್ದರಿಂದ ಬಿಜೆಪಿ ಮೇಲೆ ರೈತರ ನಿರೀಕ್ಷೆ ಹೆಚ್ಚಿದ್ದು ಶಾಸಕರು, ಸಂಸದರು ಬೇಡಿಕೆ ಈಡೇರಿಸಲು ಮುಂದಾಗಬೇಕು. ಈ ಹಿಂದೆ ಬಿಜೆಪಿ ಸರ್ಕಾರ ಕಳಸಾ, ಬಂಡೂರಿ, ಮಲಪ್ರಭಾ ನದಿ ಜೋಡಣೆ ಕಾಮಗಾರಿ 100 ಕೋಟಿ ರೂ. ಮೀಸಲಿಟ್ಟು ಕಾಮಗಾರಿಗೆ ಚಾಲನೆ ನೀಡಿತ್ತು. ಆ ಭರವಸೆಯನ್ನು ಈಡೇರಿಸಲು ಮುಖ್ಯಮಂತ್ರಿ ಮುಂದಾಗಬೇಕು ಎಂದು ರೈತರು ಮನವಿ ಮಾಡಿದರು.

ರೈತ ಹೋರಾಟ ಸಮಿತಿ ಮುಖಂಡ ಬಸಪ್ಪ ಭೀರಣ್ಣವರ, ಮಲ್ಲೇಶ ಉಪ್ಪಾರ, ಮಲ್ಲಪ್ಪ ಬಸೆಗೊಣ್ಣವರ, ರವಿಗೌಡ ಪಾಟೀಲ, ಯಲ್ಲಪ್ಪ ದಾಡಿಬಾವಿ, ನಿಂಗಪ್ಪ ಬಾಡಗಂಟಿ, ಶಿವಪ್ಪ ಸಂಗಳದ, ಗುರುಸಿದ್ದಪ್ಪ ಕಾಲುಂಗುರ ಇದ್ದರು.

- Advertisement -

Stay connected

278,592FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...