ಹಗರೆ: ಮಾದೀಹಳ್ಳಿ ಹೋಬಳಿ ಅಂಗಡಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬುಡಕಟ್ಟು ಸಮುದಾಯದ ಕ್ರೀಡಾಪಟು ವಿಶ್ವನಾಥ್ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಕ್ರೀಡಾಕೂಟದಲ್ಲಿ ಭಾಗವಹಿಸಿ 200 ಮೀ. ಮತ್ತು 600 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ವಿಶ್ವನಾಥ್ ಸತತ ಪರಿಶ್ರಮದಿಂದ ಈ ಸಾಧನೆ ಮಾಡಿರುವುದು ಪ್ರಶಂಶನೀಯ ಎಂದು ಶಾಲೆಯ ಮುಖ್ಯ ಶಿಕ್ಷಕ ವಿಠಲಮೂರ್ತಿ ತಿಳಿಸಿದ್ದಾರೆ.
ಶಾಲೆಯ ಸಹ ಶಿಕ್ಷಕರಾದ ಮಂಜುಳಾ, ವನಜಾಕ್ಷಿ, ಪೂರ್ಣಿಮಾ, ಶಾಂತಾ, ಲಕ್ಷ್ಮಣ, ಜ್ಯೋತಿ, ತಾರಾ ಹಾಗೂ ತಂದೆ ಪಾಪುಲಕಾಯಿ, ತಾಯಿ ಮೇರಿ, ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ್, ಗ್ರಾಮಸ್ಥರು ಕ್ರೀಡಾಪಟುವನ್ನು ಅಬಿನಂದಿಸಿ ಸಿಹಿ ಹಂಚಿ ಸಂಭ್ರಮಿಸಿದರು.