20.4 C
Bangalore
Monday, December 9, 2019

ರಾಜ್ಯ ಸರ್ಕಾರದಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ

Latest News

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಕಾಗವಾಡ, ಅಥಣಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮುನ್ನಡೆ

ಬೆಳಗಾವಿ: ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೊದಲ ಸುತ್ತಿನ ಎಣಿಕೆಯಲ್ಲಿ ಮುಂದಿದ್ದಾರೆ. ಅಂಚೆಮತಗಳ ಎಣಿಕೆಯಲ್ಲೂ ಮುಂದಿದ್ದ ಅವರು ನಂತರ ಮೊದಲ ಸುತ್ತಿನಲ್ಲೂ...

ಮೊದಲ ಹಂತದ ಮತ ಎಣಿಕೆ ಶಿವರಾಮ ಹೆಬ್ಬಾರಗೆ 5004 ಮತ ಮುನ್ನಡೆ

ಕಾರವಾರ: ಕುತೂಹಲ ಕೆರಳಿಸಿರುವ ವಿಧಾನಸಭೆಯ 15 ಕ್ಷೇತ್ರಗಳ ಉಪಚುನಾವಣೆಯ ಪೈಕಿ ಯಲ್ಲಾಪುರ ಕ್ಷೇತ್ರದ ಮತ ಎಣಿಕೆ ಆರಂಭವಾಗಿದೆ. ಮೊದಲ ಹಂತದ ಮತ ಎಣಿಕೆಯಲ್ಲಿ...

ಧಾರವಾಡ: ರಾಜ್ಯ ಸಮ್ಮಿಶ್ರ ಸರ್ಕಾರದ ದಬ್ಬಾಳಿಕೆ ಹಾಗೂ ಗೃಹ ಸಚಿವ ಎಂ.ಬಿ. ಪಾಟೀಲ ಅವರ ದುರಹಂಕಾರಿ ನಡೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಕೈಗೆ ಕಪ್ಟು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೊಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಸಮ್ಮಿಶ್ರ ಸರ್ಕಾರದ ವಿರುದ್ಧ ಮಾತನಾಡುವ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮ ಕೈಗೊಳ್ಳುವ ಮೂಲಕ ಕೀಳು ಮಟ್ಟದ ರಾಜಕಾರಣ ನಡೆದಿದೆ ಎಂದು ಆರೋಪಿಸಿದರು.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೇ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವಾಗುತ್ತಿದೆ. ಪ್ರಜಾಪ್ರಭುತ್ವ, ಪ್ರಜಾಸತ್ತೆಗೆ ಧಕ್ಕೆಯಾಗುತ್ತಿದೆ. ರಾಜ್ಯದಲ್ಲಿ 160 ತಾಲೂಕುಗಳು ಬರಗಾಲವಿದ್ದರೂ ಸರ್ಕಾರ ಸಮಸ್ಯೆ ಬಗೆ ಹರಿಸುತ್ತಿಲ್ಲ. ಹೀಗಾಗಿ ಸರ್ಕಾರ ಇದೆಯೇ ಎಂಬ ಅನುಮಾನ ಜನರಲ್ಲಿ ಮೂಡಿದೆ ಎಂದು ದೂರಿದರು.

ರಾಜ್ಯ ಸರ್ಕಾರ ವಾಕ್ ಸ್ವಾತಂತ್ರ್ಯ ಕಿತ್ತುಕೊಳ್ಳುವ ಮೂಲಕ ಎದುರಾಳಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಇಂದಿರಾಗಾಂಧಿ ಸರ್ಕಾರ ನೇರವಾಗಿ ತುರ್ತು ಪರಿಸ್ಥಿತಿ ಹೇರಿದ್ದರೆ, ಈ ಸಮ್ಮಿಶ್ರ ಸರ್ಕಾರ ಅಘೊಷಿತ ತುರ್ತು ಪರಿಸ್ಥಿತಿ ಹೇರಿದೆ ಎಂದು ಆರೋಪಿಸಿದರು.

ಜನರು ಸಾಮಾಜಿಕ ಜಾಲ ತಾಣಗಳಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರೆ ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡಿದವರ ಮೇಲೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಸರ್ಕಾರದ ಈ ಇಬ್ಬಗೆ ನೀತಿ ಖಂಡನೀಯ. ಇದಲ್ಲದೆ ಎಲ್ಲ ಸುಳ್ಳು ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಎಂ.ಬಿ. ಪಾಟೀಲ ಅವರು ಗೃಹ ಸಚಿವ ಹುದ್ದೆಯಲ್ಲಿ ಮುಂದುವರಿಯಲು ಲಾಯಕ್ಕಿಲ್ಲ. ಹೀಗಾಗಿ ಅವರು ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಅವಳಿನಗರದಲ್ಲಿ ರೌಡಿಶೀಟರ್​ಗಳ ಹಾವಳಿ ಹೆಚ್ಚಾಗಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದರೂ ಪೊಲೀಸ್ ಅಧಿಕಾರಿಗಳು ಸುಮ್ಮನೆ ಕುಳಿತಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕಿ ಸೀಮಾ ಮಸೂತಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಮಾತನಾಡಿದರು. ನಂತರ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಅಧ್ಯಕ್ಷ ನಾಗೇಶ ಕಲರ್ಬುಗಿ, ಮುಖಂಡರಾದ ಶಿವು ಹಿರೇಮಠ, ಸಂಜಯ ಕಪಟಕರ, ಶಿವಾನಂದ ಮುತ್ತಣ್ಣವರ, ಸುಧೀರ ಸರಾಫ್, ವಿಜಯಾನಂದ ಶೆಟ್ಟಿ, ಯಲ್ಲಪ್ಪ ಅರವಾಳದ, ಅರವಿಂದ ಏಗನಗೌಡರ, ಈರಣ್ಣ ಹಪ್ಪಳಿ, ಶಂಕರ ಶೇಳಕೆ, ಉದಯ ಲಾಡ್, ಮೋಹನ ರಾಮದುರ್ಗ, ಸುರೇಶ ಬೇದರೆ, ಈರೇಶ ಅಂಚಟಗೇರಿ, ಶ್ರೀನಿವಾಸ ಕೋಟ್ಯಾನ್, ಕಾರ್ಯಕರ್ತರು ಇದ್ದರು.</

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...