26.8 C
Bangalore
Friday, December 13, 2019

ರಾಮಮಂದಿರಕ್ಕೆ ಆಗ್ರಹಿಸಿ ಬೈಕ್ ರ‍್ಯಾಲಿ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ಗದಗ: ವಿಶ್ವ ಹಿಂದು ಪರಿಷತ್ ವತಿಯಿಂದ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ವಣಕ್ಕಾಗಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನ. 25ರಂದು ಜರುಗುವ ಜನಾಗ್ರಹ ಸಭೆ ಅಂಗವಾಗಿ ಶನಿವಾರ ಬೃಹತ್ ಬೈಕ್ ರ‍್ಯಾಲಿ ಜರುಗಿತು.

ವಿಶ್ವ ಹಿಂದು ಪರಿಷತ್, ಭಜರಂಗ ದಳ, ಶ್ರೀರಾಮ ಸೇನೆ ಹಾಗೂ ವಿವಿಧ ಸಂಘಟನೆಗಳು ಪದಾಧಿಕಾರಿಗಳ ನೇತೃತ್ವದಲ್ಲಿ ಜರುಗಿದ ಬೈಕ್ ರ್ಯಾಲಿಯಲ್ಲಿ 1000ಕ್ಕೂ ಹೆಚ್ಚು ಬೈಕ್​ಗಳು 2500ಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬೆಳಗ್ಗೆ ಮುಳಗುಂದ ರಸ್ತೆಯ ಅಂಬಾಭವಾನಿ ದೇವಸ್ಥಾನದ ಮುಂಭಾಗದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನರಗುಂದ ಶಾಸಕ ಸಿ.ಸಿ. ಪಾಟೀಲ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಶ್ರೀರಾಮನ ಭಾವಚಿತ್ರವಿರುವ ವಾಹನ ಮುಂದೆ ಸಾಗುತ್ತಿದ್ದರೇ, ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಹಿಂದು ಕಾರ್ಯಕರ್ತರು ಹಾಗೂ ಶ್ರೀರಾಮನ ಭಕ್ತರು ಶ್ರೀರಾಮ ಮಂದಿರ ನಿರ್ವಣವಾಗಲೇಬೇಕು ಎಂಬ ಘೊಷಣೆಗಳನ್ನು ಕೂಗುತ್ತಿದ್ದರು.

ನಗರದ ಅಂಭಾಭವಾನಿ ದೇವಸ್ಥಾನದಿಂದ ಮುಳಗುಂದ ನಾಕಾ, ತ್ರಿಕೂಟೇಶ್ವರ ದೇವಸ್ಥಾನ, ರಾಚೋಟೇಶ್ವರ ದೇವಸ್ಥಾನ, ಹನುಮನ ಗರಡಿ, ವೀರನಾರಾಯಣ ದೇವಸ್ಥಾನ, ಸರಾಫ್ ಬಜಾರ್, ಟಾಂಗಾಕೂಟ, ಮಹಾತ್ಮಾ ಗಾಂಧಿ ವೃತ್ತ, ಬೆಟಗೇರಿಯ ಹೆಲ್ತ್​ಕ್ಯಾಂಪ್, ಟೆಂಗಿನಕಾಯಿ ಬಜಾರ್, ಟರ್ನಲ್ ಪೇಟೆ ಮಾರ್ಗವಾಗಿ ಸಾಗಿದ ಬೈಕ್ ರ‍್ಯಾಲಿ ಶ್ರೀರಾಮ ಮಂದಿರದಲ್ಲಿ ಸಮಾರೋಪಗೊಂಡಿತು.

ಬೆಟಗೇರಿಯ ಲಕ್ಷ್ಮಣ ಗುರಿಕಾರ ಎಂಬುವವರು ಶ್ರೀರಾಮನ ವೇಷ ಧರಿಸಿ ಬೈಕ್ ರ್ಯಾಲಿಯದ್ದಕ್ಕೂ ಗಮನ ಸೆಳೆದರು. ಅಲ್ಲದೇ, ಮಹಿಳೆಯರು ತಾವೇನೂ ಕಡಿಮೆ ಇಲ್ಲವೆಂಬಂತೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಬೆಟಗೇರಿಯ ಟರ್ನಲ್ ಪೇಟೆ ಸುಭಾಸ್ ರಸ್ತೆಯಲ್ಲಿ ಸಾರ್ವಜನಿಕರು ಶ್ರೀರಾಮನ ಭಾವಚಿತ್ರಕ್ಕೆ ಹಾಗೂ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಹಿಂದು ಕಾರ್ಯಕರ್ತರಿಗೆ ಹೂಮಳೆಗರೆಯುವ ಮೂಲಕ ಸ್ವಾಗತಿಸಿದರು.

ಗದಗ-ಬೆಟಗೇರಿ ಅವಳಿನಗರದಲ್ಲಿ ಜರುಗಿದ ಬೈಕ್ ರ್ಯಾಲಿಯುದ್ದಕ್ಕೂ ಭಗವಾಧ್ವಜಗಳು ರಾರಾಜಿಸಿದವು. ಕಳೆದ ಗುರುವಾರ ನಗರದ ಜುಮ್ಮಾ ಮಸೀದಿ ಬಳಿ ಕೆಲ ಆತಂಕದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರಮುಖ ರಸ್ತೆಗಳು ಕೇಸರಿಮಯ

ಭಾನುವಾರ ನಡೆಯಲಿರುವ ಜನಾಗ್ರಹ ಸಭೆಯ ಹಿನ್ನೆಲೆಯಲ್ಲಿ ಅವಳಿ ನಗರದಲ್ಲಿ ಶುಭ ಹಾರೈಕೆಯ ಫ್ಲೆಕ್ಸ್, ಬ್ಯಾನರ್, ಕಟೌಟ್​ಗಳು ರಾರಾಜಿಸತೊಡಗಿವೆ. ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಭಗವಾಧ್ವಜ ಹಾಕಲಾಗಿದೆ. ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಅವಳಿ ನಗರದ ಗಲ್ಲಿಗಲ್ಲಿಗೆ ಸಂಚರಿಸಿ ಸಮಾವೇಶ ಕುರಿತು ಜಾಗೃತಿ ಮೂಡಿಸತೊಡಗಿದ್ದಾರೆ.

ಇಂದು ಜನಾಗೃಹ ಸಭೆ

ವಿಶ್ವ ಹಿಂದು ಪರಿಷದ್ ವತಿಯಿಂದ ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ವಣಕ್ಕಾಗಿ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ನ. 25ರಂದು ಸಂಜೆ 4ಕ್ಕೆ ಜನಾಗ್ರಹ ಸಭೆ ಜರುಗಲಿದೆ. ಹೊಸಹಳ್ಳಿಯ ಬೂದೀಶ್ವರ ಸಂಸ್ಥಾನಮಠದ ಅಭಿನವ ಬೂದೀಶ್ವರ ಸ್ವಾಮೀಜಿ, ಅಡ್ನೂರು ಬೃಹನ್ಮಠದ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಮುಕ್ಕಣ್ಣೇಶ್ವರ ಮಠದ ಶಂಕರಾನಂದ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಪಾಲ್ಗೊಳ್ಳುವರು. ಹುಬ್ಬಳ್ಳಿಯ ಕ್ಷೇತ್ರ ಸಂಯೋಜಕ ರಘುನಂದನ್ ಅವರು ಮುಖ್ಯ ಭಾಷಣ ಮಾಡುವರು.

 

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....