ರಾಯರಡ್ಡಿ ವಿರುದ್ಧ ಹೇಳಿಕೆ ಸಲ್ಲ: ರಡ್ಡಿ ಅಭಿಮಾನಿಗಳ ಕಿಡಿ

blank

ಕೊಪ್ಪಳ: ಶಾಸಕ ಬಸವರಾಜ ರಾಯರಡ್ಡಿ ಹಿರಿಯ ನಾಯಕ. ಅವರ ಬಗ್ಗೆ ಜೆಡಿಎಸ್ ಮುಖಂಡ ಮಲ್ಲನಗೌಡ ಅವಹೇಳನವಾಗಿ ಮಾತನಾಡಿದ್ದು ಸರಿಯಲ್ಲ. ತಕ್ಷಣ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವು ಅವರ ಮುಖಕ್ಕೆ ಮಸಿ ಬಳಿಯುತ್ತೇವೆ ಎಂದು ರಾಯರಡ್ಡಿ ಅಭಿಮಾನಿ ಬಳಗದ ಸಂಚಾಲಕ ಹನುಮೇಶ ಕಡೆಮನಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ತಳಕಲ್ ಗ್ರಾಮದಲ್ಲಿ ಸಾರ್ವಜನಿಕ ಸಭೆಯಲ್ಲಿ ಅಭಿಮಾನಿಗಳು ಗ್ರಾಪಂ ಅಧ್ಯಕರಾಗದ ಬಗ್ಗೆ ಮಾತನಾಡಿದ ವೇಳೆ ಅವರು ಉದಾಹರಣೆ ನೀಡಿದ್ದಾರೆ. ರಾಯರಡ್ಡಿ ಅವರು ಅತಿ‌ ಚಿಕ್ಕ ವಯಸ್ಸಿನಲ್ಲಿ ಶಾಸಕರಾಗಿದ್ದಾರೆ. ಮಂತ್ರಿಯಾಗಿದ್ದು, ರಾಜ್ಯ, ರಾಷ್ಟ್ರದಲ್ಲಿ ತಮ್ಮದೇ ಛಾಪು ಹೊಂದಿದ್ದಾರೆ.

ಅವರ ಬಗ್ಗೆ ಮಲ್ಲನಗೌಡ ಹಗುರವಾಗಿ ಮಾತನಾಡಿದ್ದು ಸರಿಯಲ್ಲ. ಚುನಾವಣೆಯಲ್ಲಿ 500ಮತ ಪಡೆಯದವರು ರಾಯರಡ್ಡಿ ಬಗ್ಗೆ ಮಾತನಾಡಿದ್ದು ಸರಿಯಲ್ಲ. ತಕ್ಷಣ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಾವೇ ಅವರ ಮುಖಕ್ಕೆ ಮಸಿ ಬಳಿಯುತ್ತೇವೆ.

ಶಾಸಕರ ಬಗ್ಗೆ ಹಗುರವಾಗಿ ಮಾತನಾಡಿದವರ ಬಗ್ಗೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಸಿದರು. ಜಿಪಂ ಮಾಜಿ ಸದಸ್ಯ ಅಶೋಕ ತೋಟದ್, ಕಾಂಗ್ರೆಸ್ ತಾಲೂಕು ಯುವ ಘಟಕ ಅಧ್ಯಕ್ಷ ಮರಿಸ್ವಾಮಿ ಪೂಜಾರ, ಎಸ್ಸಿ ಯುವ ಘಟಕ ಅಧ್ಯಕ್ಷ ಭೀಮಣ್ಣ ನಡಲಮನಿ ಇದ್ದರು.

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…