Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ರಾಹುಲ್​ಗೆ ಕಪ್ಪು ಬಿಸಿ

Monday, 12.02.2018, 3:02 AM       No Comments

ಸಿಂಧನೂರು: ‘ಜನಾಶೀರ್ವಾದ’ ಯಾತ್ರೆ ಹೆಸರಿನಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿ ನಾಲ್ಕು ದಿನಗಳ ಹೈದರಾಬಾದ್ ಕರ್ನಾಟಕ ಪ್ರವಾಸ ಆರಂಭಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಎರಡನೇ ದಿನವೇ ಪ್ರತಿಭಟನೆಯ ಸ್ವಾಗತ ಸಿಕ್ಕಿದೆ. ರಾಹುಲ್ ಬಸ್ ಯಾತ್ರೆ ಭಾನುವಾರ ಸಿಂಧನೂರು ಪ್ರವೇಶಿಸುತ್ತಿದ್ದಂತೆಯೇ ಏಕಾಏಕಿ ಎದುರಾದ ಮಾದಿಗ ದಂಡೋರ ಸಂಘಟನೆ ಯುವಕರ ತಂಡ ಬಸ್ಸಿನ ಮೇಲೆ ಕಪು್ಪ ಬಟ್ಟೆ ಸುತ್ತಿ ಎಸೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿತು. ರಾಹುಲ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಈ ಬೆಳವಣಿಗೆಯಿಂದ ತೀವ್ರ ಮುಜುಗರಕ್ಕೀಡಾಗಬೇಕಾಯಿತು. ದಸಂಸದ ಇಬ್ಬರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸುವ ಸಲುವಾಗಿ ನ್ಯಾ. ಸದಾಶಿವ ಆಯೋಗದ ವರದಿ ಶಿಫಾರಸು ಜಾರಿಗೊಳಿಸಬೇಕೆಂಬುದು ಪ್ರತಿಭಟನಾಕಾರರ ಬೇಡಿಕೆಯಾಗಿತ್ತು. ಭದ್ರತಾ ವೈಫಲ್ಯದ ಬಗ್ಗೆ ತೀವ್ರ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸ್ಥಳದಲ್ಲಿ ಕರ್ತವ್ಯದ ಮೇಲಿದ್ದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು. ಸರಿಯಾದ ಮುನ್ನೆಚ್ಚರಿಕೆ ವಹಿಸಲು ಏನಾಗಿತ್ತೆಂದು ಸಾರ್ವಜನಿಕರ ಎದುರೇ ತರಾಟೆಗೆ ತೆಗೆದುಕೊಂಡರು. ಮತ್ತೊಂದೆಡೆ ಕನಕಗಿರಿಯಿಂದ ಯಾತ್ರೆ ಸಾಗುವಾಗ ಕೆಲವು ಯುವಕರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದರಿಂದಾಗಿ ಕಾಂಗ್ರೆಸ್ ನಾಯಕರು ಮತ್ತೊಮ್ಮೆ ಮುಜುಗರ ಎದುರಿಸುವಂತಾಯಿತು.

ಸಚಿನ್ ತೆಂಡುಲ್ಕರ್ ವಿಕೆಟ್ ಕೀಪರ್ ನೋಡಿಕೊಂಡು ಕ್ರಿಕೆಟ್ ಆಡಿದ್ದರೆ ಒಂದು ರನ್ ಸಹ ಗಳಿಸಲು ಆಗುತ್ತಿರಲಿಲ್ಲ. ಅವರು ಮುಂದೆ ನೋಡಿ ಕ್ರಿಕೆಟ್ ಆಡಿದರು. ಮೋದಿ ಸಹ ಹಿಂದೆ ನೋಡಿ ಸರ್ಕಾರ ಮಾಡುವ ಬದಲು ಮುಂದೆ ನೋಡಿ ಸಮಸ್ಯೆಗಳಿಗೆ ಪರಿಹಾರ ಹುಡುಕಲಿ.

| ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ

Leave a Reply

Your email address will not be published. Required fields are marked *

Back To Top