ರಾಹುಲ್ ಗಾಂಧಿ ಕ್ಷಮೆ ಕೋರಲಿ

Latest News

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಗಂಡಸಿ ಗ್ರಾಮದಲ್ಲಿ ಕಾರ್ತಿಕ‌ ಮಹೋತ್ಸವ

ಅರಸೀಕೆರೆ:ತಾಲೂಕಿನ ಗಂಡಸಿ ಗ್ರಾಮದಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇಗುಲದ ಆವರಣದಲ್ಲಿ ಕಾರ್ತಿಕ ಮಹೋತ್ಸವ ಆಯೋಜಿಸಲಾಗಿತ್ತು. ಬಾಳೆಹೊನ್ನೂರು ರಂಭಾಪುರಿ ಪೀಠದ ಡಾ.ಶ್ರೀ ವೀರಸೋಮೇಶ್ವರ ಪ್ರಸನ್ನ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡು...

ರಾಮನಗರ: ಸುಪ್ರೀಂ ಕೋರ್ಟ್ ತೀರ್ಪಿನ ಹೊರತಾಗಿಯೂ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಪದೇಪದೆ ಆರೋಪಿಸುತ್ತಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಘಟಕ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಐಜೂರು ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು, ಕಾಂಗ್ರೆಸ್ ಮುಖಂಡರ ವಿರುದ್ಧ ಘೊಷಣೆ ಕೂಗಿದರು.

ಬಿಜೆಪಿ ರಾಜ್ಯ ವಕ್ತಾರ ಅಶ್ವತ್ಥ್ ನಾರಾಯಣ್ ಮಾತನಾಡಿ, ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನೇತೃತ್ವದ ಮಿತ್ರ ಕೂಟಗಳು ಜಾಗತಿಕ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚಸ್ಸು ಕುಂದಿಸುವ ಪ್ರಯತ್ನ ಮಾಡುತ್ತಿವೆ. ಖರೀದಿ ಸಂಬಂಧ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಆದರೆ ಕೋರ್ಟ್ ಆರೋಪಗಳನ್ನು ತಳ್ಳಿ ಹಾಕಿದೆ. ಆದರೂ ಕಾಂಗ್ರೆಸ್​ನ ರಾಷ್ಟ್ರೀಯ ಅಧ್ಯಕ್ಷ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾಡಿದರು.

ದೇಶದ ಸೈನ್ಯಕ್ಕೆ ನೂತನ ತಂತ್ರಜ್ಞಾನದ ಅವಶ್ಯಕತೆ ಇದೆ. ಇದಕ್ಕಾಗಿ ಕೇಂದ್ರ ಸರ್ಕಾರ ಫ್ರಾನ್ಸ್ ಸರ್ಕಾರದ ಜತೆ ರಫೇಲ್ ಯುದ್ಧ ವಿಮಾನ ಖರೀದಿಗೆ ಮುಂದಾಗಿದೆ. ಇಲ್ಲಿ ಯಾವುದೇ ಅಕ್ರಮ ವ್ಯವಹಾರ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಫ್ರಾನ್ಸ್ ಸರ್ಕಾರ ರಿಲಯನ್ಸ್ ಅಥವಾ ಎಚ್​ಎಎಲ್ ಕಂಪನಿಯಲ್ಲಿ ಯಾವುದಕ್ಕೆ ಸಹಭಾಗಿತ್ವ ನೀಡಬೇಕೆಂಬುದು ನಿರ್ಧರಿಸುತ್ತದೆಯೇ ಹೊರತು ಕೇಂದ್ರ ಸರ್ಕಾರ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ. ಇಂತಹ ಸೂಕ್ಷ್ಮ ವಿಚಾರಗಳನ್ನು ಬಹಿರಂಗವಾಗಿ ರ್ಚಚಿಸುವುದು ಕಾಂಗ್ರೆಸ್​ಗೆ ಶೋಭೆ ತರುವುದಿಲ್ಲ ಎಂದರು.

ಮಾಜಿ ಅಧ್ಯಕ್ಷ ಹುಲುವಾಡಿ ದೇವರಾಜು, ಬಿಜೆಪಿ ಮುಖಂಡರಾದ ನಂದಿನಿಗೌಡ, ಚಂದ್ರಶೇಖರ್ ರೆಡ್ಡಿ, ಚಂದನ್​ವೋರೆ, ಚನ್ನಪ್ಪ, ವಿನೋದ್ ಭಗತ್, ರುದ್ರದೇವರು ಇದ್ದರು.

ವಾಟ್ಸ್​ಆಪ್ ಸಮರ: ಯುದ್ಧ ವಿಮಾನ ಖರೀದಿಯಲ್ಲಿ ರಾಹುಲ್ ಗಾಂಧಿ ಸುಳ್ಳು ಆರೋಪ ಮಾಡುತ್ತಿರುವ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಾಟ್ಸ್​ಆಪ್​ನಲ್ಲಿ ಸಂದೇಶ ಮಂಗಳವಾರ ಸಂಜೆಯಿಂದಲೇ ಹರಿದಾಡ ತೊಡಗಿತ್ತು. ಆದರೆ ಪ್ರತಿಭಟನೆಯಲ್ಲಿ ಯಾರೂ ಪಾಲ್ಗೊಳ್ಳಬೇಡಿ ಎಂದು ಹೇಳುವ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ಹೆಸರಿರುವ ಮತ್ತೊಂದು ಸಂದೇಶವೂ ಕಾಣಿಸಿಕೊಂಡಿತು. ಹೀಗೆ ಒಬ್ಬರು ಮತ್ತೊಬ್ಬರ ಸಂದೇಶವನ್ನು ಸುಳ್ಳು ಎನ್ನುವ ರೀತಿಯಲ್ಲಿ ಬಿಂಬಿಸುವ ಪ್ರಯತ್ನಗಳು ನಡೆಯುತ್ತಲೇ ಇದ್ದವು. ಅಂತಿಮವಾಗಿ ಅಶ್ವತ್ಥ್ ನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾ ಘಟಕದ ಪ್ರಮುಖ ಮುಖಂಡರು ಹೊರಗುಳಿಯುವ ಮೂಲಕ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸಂದೇಶ ರವಾನೆಯಾಗಿದೆ. ಅಂತಿಮವಾಗಿ ರುದ್ರೇಶ್, ಉಪಾಧ್ಯಕ್ಷ ಎಸ್.ಆರ್.ನಾಗರಾಜ್, ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ವರದರಾಜೇಗೌಡ, ತಾಲೂಕು ಅಧ್ಯಕ್ಷ ಪ್ರವೀಣ್​ಗೌಡ, ಮಾಧ್ಯಮ ಪ್ರಮುಖ್ ರಮೇಶ್ ಪ್ರತಿಭಟನೆಯಿಂದ ದೂರ ಉಳಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅಶ್ವತ್ಥ್ ನಾರಾಯಣ್, ಮೂರು ದಿನದ ಹಿಂದೆಯೇ ಪಕ್ಷದ ಕಚೇರಿಯಲ್ಲಿ ಪ್ರತಿಭಟನೆ ಕುರಿತು ಮಾಹಿತಿ ನೀಡಲಾಗಿತ್ತು. ಆದರೆ ಕೆಲವು ಮುಖಂಡರು ದೂರ ಸರಿದಿದ್ದಾರೆ ಎಂದು ವಿಷಾದಿಸಿದರು.

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...