Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ರಿಚರ್ಡ್ ಹ್ಯಾಡ್ಲಿಗೆ ಶಸ್ತ್ರಚಿಕಿತ್ಸೆ

Thursday, 14.06.2018, 3:02 AM       No Comments

ವೆಲ್ಲಿಂಗ್ಟನ್: ಕರುಳು ಕ್ಯಾನ್ಸರ್​ನಿಂದ ಬಳಲುತ್ತಿರುವ ನ್ಯೂಜಿಲೆಂಡ್ ಕ್ರಿಕೆಟ್ ದಂತಕಥೆ ಸರ್ ರಿಚರ್ಡ್ ಹ್ಯಾಡ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಕರುಳಿನಲ್ಲಿದ್ದ ದುರ್ವಂಸವನ್ನು ತೆಗೆಯಲಾಗಿದೆ ಎಂದು ಹ್ಯಾಡ್ಲಿ ಪತ್ನಿ ಲೇಡಿ ಡಿಯಾನ್ನೆ ಹ್ಯಾಡ್ಲಿ ಸಮ್ಮುಖದಲ್ಲಿ ಹೊರಡಿಸಲಾಗಿರುವ ಪ್ರಕಟಣೆಯಲ್ಲಿ ತಿಳಿಸಿದೆ. ‘ಎಂದಿನಂತೆ 3 ವರ್ಷಕ್ಕೊಮ್ಮೆ ಕೊಲೊನೊಸ್ಕೋಪಿ ಪರೀಕ್ಷೆಗೆ ತೆರಳಿದ್ದ ವೇಳೆ ಕರುಳು ಕ್ಯಾನ್ಸರ್ ಇರುವುದು ಪತ್ತೆಯಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಿಮೋಥೆರಪಿ ಚಿಕಿತ್ಸೆಯನ್ನು ಶೀಘ್ರವೇ ಆರಂಭಿಸಲಾಗುವುದು. ಆದಷ್ಟು ಬೇಗ ರಿಚರ್ಡ್ ಆರೋಗ್ಯದಲ್ಲಿ ಸುಧಾರಣೆ ಕಾಣಲಿದೆ ಎಂದು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಹೇಳಿದೆ. 66 ವರ್ಷದ ಹ್ಯಾಡ್ಲಿ ಕಿವೀಸ್ ಪರ 86 ಟೆಸ್ಟ್ ಪಂದ್ಯಗಳಿಂದ 431 ವಿಕೆಟ್ ಕಬಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top