ರೇವತಗಾಂವದಲ್ಲಿ ಶ್ರೀಶೈಲ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ

blank

ರೇವತಗಾಂವ: ಗ್ರಾಮದ ರೇವಣಸಿದ್ಧೇಶ್ವರ ಜಾತ್ರೆ ಹಾಗೂ ಪುನರ್ ಕಲಶಾರೋಹಣ ಕಾರ್ಯಕ್ರಮದ ನಿಮಿತ್ತ ಶನಿವಾರ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಭಗವತ್ಪಾದರವರ ಅಡ್ಡಪಲ್ಲಕ್ಕಿ ಉತ್ಸವ ಗ್ರಾಮದ ಮುತ್ತೈದೆಯರ ಕುಂಭ, ಕಳಸ, ಆರತಿಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ರೇವಣಸಿದ್ಧೇಶ್ವರರಿಗೆ ಬೆಳಗ್ಗೆ 6 ಗಂಟೆಗೆ ಭಕ್ತರಿಂದ ಸಕ್ಕರೆ-ಬೆಲ್ಲ ನೈವೇದ್ಯ ಕಾರ್ಯಕ್ರಮ ಜರುಗಿತು. 7.30ಕ್ಕೆ ವಿವಿಧ ವಾದ್ಯ ವೈಭವಗಳೊಂದಿಗೆ ರೇವಣಸಿದ್ಧೇಶ್ವರರ ಪಲ್ಲಕ್ಕಿ ಸಬೀನ ತಿರುಗುವ ಕಾರ್ಯಕ್ರಮ ನೆರವೇರಿತು. ನಂತರ ಗ್ರಾಮದ ಸುಮಂಗಲೆಯರಿಗೆ ಉಡಿ ತುಂಬುವ ಕಾರ್ಯ ನಡೆಯಿತು.

ಗ್ರಾಮದಲ್ಲಿ ಅಡ್ಡಪಲ್ಲಕ್ಕಿ ಉತ್ಸವದ ನಂತರ ಜಗದ್ಗುರುಗಳಿಂದ ಪುನರ್ ಕಲಶಾರೋಹಣ ನಡೆಯಿತು. ಬಳಿಕ ಜರುಗಿದ ಧರ್ಮಸಭೆಯ ಸಾನ್ನಿಧ್ಯ ವಹಿಸಿದ್ದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶ್ರೀಗಳು ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಸತ್ಯ, ನಿಷ್ಠೆ, ವಿಶ್ವಾಸ, ನಂಬಿಕೆ, ಪ್ರಾಮಾಣಿಕತೆ, ಶ್ರದ್ಧೆ, ಭಕ್ತಿಯ ಮೂಲಕ ಜ್ಞಾನದ ಬೆಳಕು ಕಾಣಬೇಕು. ಭಾರತ ಬಲಿಷ್ಠವಾಗಲು ಯುವಜನತೆ ದುಶ್ಚಟಗಳನ್ನು ತ್ಯಜಿಸಿ ಸದೃಢರಾಗಬೇಕು ಎಂದರು.

ರೇವಣಸಿದ್ಧೇಶ್ವರ ಜಾತ್ರೆಯ ನಿಮಿತ್ತ ಶನಿವಾರ ಸಂಜೆ 4 ಗಂಟೆಗೆ ಜಂಗಿ ನಿಕಾಲಿ ಕುಸ್ತಿ ಪಂದ್ಯ ನಡೆಯಿತು. ನೆರೆಯ ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧ ಭಾಗದ ಕುಸ್ತಿಪಟುಗಳು ಸೆಣಸಾಡಿದರು.

ರಾತ್ರಿ 9 ಗಂಟೆಗೆ ಭುವನೇಶ್ವರ ನಾಟ್ಯ ಸಂಘ ಹುನ್ನೂರ ಅವರಿಂದ ದೀಪಾವಳಿ ಎಂಬ ಸಾಮಾಜಿಕ ನಾಟಕ ಪ್ರದರ್ಶನವಾಯಿತು.

Share This Article

ನಿಮ್ಮ ಮಕ್ಕಳನ್ನು ಸ್ಮಾರ್ಟ್‌ಫೋನ್‌ಗಳಿಂದ ದೂರವಿಡುವುದು ಹೇಗೆ? Child Care Tips

Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…

ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್

ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…