22.5 C
Bengaluru
Sunday, January 19, 2020

ರೇಷ್ಮೆ ಮಾರುಕಟ್ಟೆ ಸಮಸ್ಯೆಗೆ ಪರಿಹಾರ

Latest News

ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ: ನಗರದ ಹಿಲ್ ರೋಡ್ ಅಂಗನವಾಡಿಯಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ...

ಶೇ.95ರಷ್ಟು ಮಕ್ಕಳಿಗೆ ಲಸಿಕೆ

ಮೈಸೂರು: ಮಕ್ಕಳನ್ನು ಮಾರಕ ಪೊಲೀಯೋ ಕಾಯಿಲೆಯಿಂದ ದೂರವಿಡಲು ಜಿಲ್ಲೆಯಲ್ಲಿ ಭಾನುವಾರ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯನ್ನು ಪೊಲೀಯೋ ಮುಕ್ತಗೊಳಿಸಲು ಪಣತೊಟ್ಟಿರುವ ಆರೋಗ್ಯ...

ಎಂ.ಎಸ್​. ಧೋನಿ ಹಿಂದಿಕ್ಕಿದ ವಿರಾಟ್​ ಕೊಹ್ಲಿ: ಕೊಹ್ಲಿಗೆ ಸರಿಸಮಾನಾಗಿ ನಿಂತ ರೋಹಿತ್​ ಶರ್ಮ!

ಬೆಂಗಳೂರು: ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲುವು...

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಶಿರಹಟ್ಟಿ: ಪಟ್ಟಣದ ರೇಷ್ಮೆ ಮಾರುಕಟ್ಟೆಯ ಸಮಸ್ಯೆಗೆ ಪರಿಹಾರ ಸಿಗುವ ಲಕ್ಷಣಗಳು ಗೋಚರಿಸಿವೆ.

ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ರೇಷ್ಮೆ ಗೂಡು ವಹಿವಾಟು ನಡೆಸುವ ಮೂಲಕ ಗಮನ ಸೆಳೆದ ಇಲ್ಲಿನ ಮಾರುಕಟ್ಟೆ ಸಿಬ್ಬಂದಿ ಕೊರತೆಯಿಂದ ಸೊರಗುತ್ತಿದೆ. ಹೀಗಾಗಿ ಗುರುವಾರ ಮಾರುಕಟ್ಟೆಗೆ ಭೇಟಿ ನೀಡಿದ ಬೆಳಗಾವಿ ಪ್ರಭಾರ ಜಂಟಿ ನಿರ್ದೇಶಕ ಎನ್.ಪಿ. ನಾಯಕ ಅವರು, ‘ಶಿರಹಟ್ಟಿಯಲ್ಲಿ ಗೂಡು ಮಾರಾಟ, ರೀಲಿಂಗ್ ವ್ಯವಸ್ಥೆ ಕಾರ್ಯಚಟುವಟಿಕೆ ಚೆನ್ನಾಗಿ ನಡೆಯುತ್ತಿರುವುದರಿಂದ ಮತ್ತು ರೈತರ ಅನುಕೂಲಕ್ಕಾಗಿ ಮಾಸಾಂತ್ಯದೊಳಗೆ ಅಗತ್ಯ ಸಿಬ್ಬಂದಿ ನೇಮಿಸಿ ಶಾಶ್ವತ ಪರಿಹಾರ ಕಲ್ಪಿಸಲಾಗುತ್ತದೆ’ ಎಂದು ಭರವಸೆ ನೀಡಿದರು.

ರೇಷ್ಮೆ ಮಾರುಕಟ್ಟೆಗೆ 7 ಸಿಬ್ಬಂದಿಯ ಅಗತ್ಯವಿದ್ದು ಸದ್ಯ ಇಬ್ಬರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಸಿಬ್ಬಂದಿ ನಿವೃತ್ತಿಯ ಬಳಿಕ ಖಾಲಿ ಇದ್ದ ನೌಕರರ ಕೊರತೆಯಿಂದ ಗೂಡು ಮಾರಾಟ, ರೈತರಿಗಾಗುವ ತೊಂದರೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕುರಿತು ‘ವಿಜಯವಾಣಿ’ಯಲ್ಲಿ ‘ಸೊರಗುತ್ತಿದೆ ರೇಷ್ಮೆ ಮಾರುಕಟ್ಟೆ’ ಶೀರ್ಷಿಕೆಯಡಿ ವಿಸõತ ವರದಿ ಪ್ರಕಟಿಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಪ್ರಭಾರ ಜಂಟಿ ನಿರ್ದೇಶಕ ಎನ್.ಪಿ.ನಾಯಕ ಮತ್ತು ಜಿಲ್ಲಾ ಪ್ರಭಾರ ಸಹಾಯಕ ನಿರ್ದೇಶಕ ಸಿ.ಎಚ್. ಮುದಗಲ್ ಮಾರುಕಟ್ಟೆಯ ಸ್ಥಿತಿಗತಿ ಪರಿಶೀಲಿಸಿದರು.

ನಂತರ ಮಾತನಾಡಿದ ನಾಯಕ ಅವರು, ‘ಉತ್ತರ ಕರ್ನಾಟಕದಲ್ಲಿ ಧಾರವಾಡದ ರಾಯಾಪುರಕ್ಕಿಂತಲೂ ಶಿರಹಟ್ಟಿ ರೇಷ್ಮೆ ಗೂಡು ಖರೀದಿ ಮಾರುಕಟ್ಟೆ ಪ್ರಸಿದ್ದಿ ಪಡೆದಿದೆ. ಆದರೆ, ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾರುಕಟ್ಟೆ ವಿಸ್ತರಣಾಧಿಕಾರಿ, ನಿರೀಕ್ಷಕ, ಪ್ರದರ್ಶಕ ಮತ್ತು ಪ್ರವರ್ತಕ ಸೆರಿ ನಾಲ್ವರು ನಿವೃತ್ತಿಯಾಗಿದ್ದರಿಂದ ಆ ಹುದ್ದೆಗಳು ಖಾಲಿ ಇವೆ. ಸಿಬ್ಬಂದಿ ಕೊರತೆಯಿಂದ ಮಾರುಕಟ್ಟೆ ವ್ಯಾಪಾರ ವಹಿವಾಟು, ಬಿಲ್ಲಿಂಗ್, ಸಕಾಲಕ್ಕೆ ಹಣ ಸಿಗದೇ ವಿವಿಧ ಜಿಲ್ಲೆಗಳಿಂದ ಗೂಡು ಮಾರಲು ಬರುವ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. 1997ರಲ್ಲಿ ನೇಮಕಗೊಂಡ ಬಹುತೇಕ ಅಧಿಕಾರಿಗಳು, ಸಿಬ್ಬಂದಿ ನಿವೃತ್ತರಾದ ಬಳಿಕ ರಾಜ್ಯದ ವಿವಿಧೆಡೆ ಇರುವ ರೇಷ್ಮೆ ಇಲಾಖೆ ಹಾಗೂ ಗೂಡು ವಹಿವಾಟು, ರೀಲಿಂಗ್ ವ್ಯವಸ್ಥೆ ಇರುವ ಮಾರುಕಟ್ಟೆ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಉಂಟಾಗಿದೆ. ಬೇರೆಡೆಯ ಸಿಬ್ಬಂದಿಯನ್ನು ನಿಯುಕ್ತಿಗೊಳಿಸುವ ಮೂಲಕ ತಕ್ಕ ಮಟ್ಟಿಗೆ ಸಮಸ್ಯೆ ಪರಿಹರಿಸಲು ಆಯುಕ್ತರು ಮುಂದಾಗಿದ್ದಾರೆ’ ಎಂದರು.

ರೇಷ್ಮೆ ಬೆಳೆಗಾರ ಸಂಘದ ಅಧ್ಯಕ್ಷ ಎಚ್.ಎಂ. ದೇವಗಿರಿ ಮತ್ತು ರೀಲರ್ ಸಂಘದ ಅಧ್ಯಕ್ಷ ಚಂದ್ರಕಾಂತ ಅಕ್ಕಿ ಅವರು ಮಾರುಕಟ್ಟೆ ಸಮಸ್ಯೆ ಪರಿಹರಿಸಲು ಕೋರಿದರು. ರೈತ ಗೂಳಪ್ಪ ಕರಿಗಾರ ಹಾಗೂ ರೀಲರ್ಸ್ ಉಪಸ್ಥಿತರಿದ್ದರು.

ಸದ್ಯ ಧಾರವಾಡದ ರಾಯಾಪುರದಿಂದ ಎ.ಎಸ್. ಶಿವಲಿಂಗಯ್ಯ ಹಾಗೂ ಎಂ.ಎಸ್. ತೋಟದ ಎಂಬುವರನ್ನು ಶಿರಹಟ್ಟಿ ರೇಷ್ಮೆ ಮಾರುಕಟ್ಟೆಗೆ ನೇಮಿಸಲಾಗಿದೆ. ಒಬ್ಬರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಎಂ.ಎಸ್. ತೋಟದ ಎಂಬುವರು ಇಲ್ಲಿಗೆ ಬರಲು ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಕಮಿಷನರ್ ಆಜ್ಞೆ ಪಾಲಿಸದಿದ್ದರೆ ಅವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ. ಸರ್ಕಾರ ಹೊಸ ನೇಮಕಾತಿ ಮೂಲಕ ಹುದ್ದೆಗಳ ಭರ್ತಿಗೆ ಚಿಂತನೆ ನಡೆಸಿದೆ. ನಾನು ಶಿರಹಟ್ಟಿ ಮಾರುಕಟ್ಟೆ ಸಮಸ್ಯೆ ಪರಿಹಾರದ ಬಗ್ಗೆ ಇಲಾಖೆಯ ಆಯುಕ್ತರಿಗೆ ಸಮಗ್ರ ಮಾಹಿತಿ ನೀಡಿದ್ದೇನೆ. ಅವರು ಪರ್ಯಾಯ ವ್ಯವಸ್ಥೆಯೊಂದಿಗೆ ಶೀಘ್ರವೇ ಶಾಶ್ವತ ಪರಿಹಾರ ನೀಡಲಿದ್ದಾರೆ. ಅಲ್ಲಿಯವರೆಗೆ ರೈತರ ಸಹಕಾರ ಬೇಕು.
| ಎನ್.ಪಿ. ನಾಯಕ, ಪ್ರಭಾರ ಜಂಟಿ ನಿರ್ದೇಶಕ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...