17 C
Bangalore
Friday, December 13, 2019

ರೈತರಿಂದ ಪ್ರತಿಭಟನಾ ಮೆರವಣಿಗೆ

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

 ಹಲಗೂರು: ಕಾಡಂಚಿನ ಜಮೀನಿಗೆ ಕಾಡುಪ್ರಾಣಿಗಳು ದಾಳಿ ನಡೆಸಿ ಬೆಳೆಹಾನಿ ಮಾಡಿರುವ ರೈತರಿಗೆ ಪರಿಹಾರ ಹಾಗೂ ಅವುಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಂಗಳವಾರ ವಿವಿಧ ಗ್ರಾಮಗಳ ರೈತರು ಕರ್ನಾಟಕ ರಾಜ್ಯ ರೈತಸಂಘದ ಜತೆಗೂಡಿ ಪ್ರತಿಭಟನೆ ನಡೆಸಿದರು.

ಹಲಗೂರು, ಧನಗೂರು, ವಡ್ಡರ ಕಾಲನಿ (ಕುರಿ ಫಾರಂ) ತಾಳೆಹಳ್ಳ, ಕದಂಪುರ, ಗಾಣಾಳು, ಬಿರೋಟ, ಬಾಣ ಸಮುದ್ರ, ನೆಟ್ಕಲ್, ಹೆಬ್ಬಣಿ, ದಬ್ಬಳ್ಳಿ, ಹೆಬ್ಬಣಿ ಮಂಚನಹಳ್ಳಿ, ದಾಸನದೊಡ್ಡಿ, ಹೊಸಹಳ್ಳಿ ಗ್ರಾಮಗಳ ನೂರಾರು ರೈತರು ಪ್ರಾಂತ ರೈತಸಂಘದ ಸದಸ್ಯರೊಡಗೂಡಿ ಹಲಗೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಅರಣ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಂತ ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಎನ್. ಎಲ್.ಭರತ್‌ರಾಜ್ ಮಾತನಾಡಿ, ಈಗ ಬೇಸಾಯ ಮಾಡುವುದು ದುಸ್ಸಾಹಸವಾಗಿದೆ. ಸಾಲ ಸೋಲ ಮಾಡಿ ಬೆಳೆ ಒಡ್ಡಿದರೆ ಅದಕ್ಕೆ ನೂರೆಂಟು ವಿಘ್ನ. ನೀರಿನ ಕೊರತೆ, ಕೀಟಬಾಧೆ ಹಾಗೂ ಬೆಳೆಗೆ ನ್ಯಾಯಯುತ ಬೆಲೆ ಸಿಗದಿರುವುದು ಮುಂತಾದ ಸಮಸ್ಯೆಗಳ ಜತೆಗೆ ಆನೆ, ಹಂದಿ ಸೇರಿದಂತೆ ಇತರ ಕಾಡುಪ್ರಾಣಿಗಳ ಹಾವಳಿಯಿಂದ ರೈತರು ಕಂಗಾಲಾಗಿದ್ದಾರೆ. ಕಾಡಂಚಿನ ಪ್ರದೇಶಗಳಲ್ಲಿ ಆನೆ, ಸಾರಂಗ, ಹಂದಿಗಳು ಕಬ್ಬು, ರಾಗಿ, ಭತ್ತ, ಬಾಳೆ, ತೆಂಗು ಬೆಳೆಗಳನ್ನು ತುಳಿದು, ತಿಂದು, ಹಾಳು ಮಾಡುತ್ತಿವೆ. ಕಾಡುಪ್ರಾಣಿಗಳ ಹಾವಳಿ ತಡೆಗಟ್ಟಲು ಸೋಲಾರ್ ಬೇಲಿ, ರೈಲು ಕಂಬಿ ಗೇಟ್‌ಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷೃ ವಹಿಸಿದ್ದಾರೆ ಎಂದು ದೂರಿದರು.

ಮನವಿ ಸ್ವೀಕರಿಸಿ ಮಾತನಾಡಿದ ಎಸಿಎಫ್ ಜಿ.ವೈ.ರಾಜು, ಮುಂದಿನ ದಿನಗಳಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಶೀಘ್ರದಲ್ಲೇ ಆನೆ ಕಂದಕ ಮತ್ತು ರೈಲು ಕಂಬಿಗಳನ್ನು ಅಳವಡಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು. ಕ್ರಿಯಾ ಯೋಜನೆ ಎರಡು ತಿಂಗಳಲ್ಲಿ ಮುಗಿಯಲಿದೆ. ಆ ಕೆಲಸ ಮುಗಿದ ನಂತರ ಕಾಡಂಚಿನ ಗ್ರಾಮಗಳಲ್ಲಿ ಜನಸಂಪರ್ಕ ಸಭೆ ಆಯೋಜಿಸಲಾಗುವುದು ಎಂದರು.
ಕಾಡುಪ್ರಾಣಿಗಳಿಂದ ಬೆಳೆ ನಷ್ಟವಾದ ರೈತರಿಗೆ ಪರಿಹಾರ ನೀಡುವುದಾಗಿ ತಿಳಿಸಿದರು.

ಕರ್ನಾಟಕ ರಾಜ್ಯ ರೈತಸಂಘದ ಕಾರ್ಯದರ್ಶಿ ಲಿಂಗರಾಜ ಮೂರ್ತಿ, ಮುಖಂಡರಾದ ಶಂಕರ್ ಮಳವಳ್ಳಿ, ಜಯಶಂಕರ್ ಕೊನ್ನಾಪುರ, ಪ್ರದೀಪ್, ಕುಮಾರ್, ಸಾದಿಕ್ ಪಾಷಾ, ಬಬ್ರುವಾಹನ ಮತ್ತಿತರರು ಹಾಜರಿದ್ದರು.

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...