18 C
Bangalore
Friday, December 6, 2019

ರೈತರಿಗೆ ತಲುಪುತ್ತಿಲ್ಲ ಮಾಹಿತಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಕೋಲಾರ: ತೋಟಗಾರಿಕೆ, ಕೃಷಿ ಇಲಾಖೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಮಾಹಿತಿ ತಲುಪುತ್ತಿಲ್ಲ. ಸಂಬಳ ಪಡೆದರೂ ರೈತರ ಸೇವೆ ಮಾಡಬೇಕೆಂಬ ಕಾಳಜಿ ಇಲ್ಲದಿದ್ದರೆ ಹೇಗೆ ಎಂದು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಕಾಶ್ ರಾಮಚಂದ್ರ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ವಯ ಜಿಲ್ಲೆಯಲ್ಲಿ ಶೀಥಲಗೃಹ ನಿರ್ವಣ, ವಿದೇಶಕ್ಕೆ ಅಧ್ಯಯನ ಪ್ರವಾಸಕ್ಕೆ ಕಳುಹಿಸಿಕೊಟ್ಟ ರೈತರ ಮಾಹಿತಿ, ಮಾವು ಹೂ ಬಿಡುತ್ತಿರುವುದರಿಂದ ರೈತರು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತ ಪ್ರಶ್ನೆಗೆ ಅಧಿಕಾರಿ ನೀಡಿದ ಉತ್ತರಕ್ಕೆ ಅತೃಪ್ತಿ ವ್ಯಕ್ತಪಡಿಸಿದರು.

ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕೋಲಾರದಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಂಡಳಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್​ನಿಂದ ರೈತರು ಸೌಲಭ್ಯ ಪಡೆದಿರುವುದು ಕಡಿಮೆ. ಸರ್ಕಾರದ ಯೋಜನೆಯನ್ವಯ ಸೌಕರ್ಯ ಕಲ್ಪಿಸಲು ಅರ್ಜಿ ಸ್ವೀಕರಿಸಿದರೆ ಸಾಲದು, ಅನುಷ್ಠಾನಕ್ಕೆ ಬದ್ಧತೆ ತೋರಬೇಕೆಂದು ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣಮೂರ್ತಿಗೆ ತಾಕೀತು ಮಾಡಿದರು.

ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ ರೇಷ್ಮೆ ಇಲಾಖೆಗೆ ಪ್ರತ್ಯೇಕ ಸಚಿವರೇ ಇಲ್ಲ. ನಮ್ಮಲ್ಲಿದ್ದರೂ ರೇಷ್ಮೆ ಇಲಾಖೆ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ. ಬೈರಕೂರು ಹೋಬಳಿಯಲ್ಲಿ ತಾಂತ್ರಿಕ ಸೇವಾ ಕೇಂದ್ರ ಸದಾ ಮುಚ್ಚಿರುತ್ತದೆ. ರೇಷ್ಮೆ ಹೆಚ್ಚು ಬೆಳೆಯುವ ಜಿಲ್ಲೆಯಲ್ಲೇ ರೇಷ್ಮೆ ಸಂಬಂಧಿತ ಸರ್ಕಾರಿ ಸಂಸ್ಥೆಗಳಿಲ್ಲ. ಇದರ ಅವಶ್ಯಕತೆ ಬಗ್ಗೆ ಇಲಾಖೆ ಮೇಲಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಪ್ರಕಾಶ್ ರಾಮಚಂದ್ರ ಹೇಳಿದರು.

ರೇಷ್ಮೆ ಇಲಾಖೆ ಉಪನಿರ್ದೇಶಕ ಎಂ.ಕೆ. ಪ್ರಭಾಕರ್ ಮಾತನಾಡಿ, ಇಲಾಖೆಯಲ್ಲಿ ಅನೇಕ ಹುದ್ದೆ ಖಾಲಿ ಇವೆ. ಇತರ ಜಿಲ್ಲೆಗಳಿಂದ ಸಿಬ್ಬಂದಿಯನ್ನು ಕೋಲಾರಕ್ಕೆ ವರ್ಗಾಯಿಸುವ ತೀರ್ಮಾನ ಕಾರ್ಯರೂಪಕ್ಕೆ ಬಂದಿಲ್ಲ. ಇದರ ನಡುವೆಯೂ ಜಿಲ್ಲೆ ಸಾಧನೆಯಲ್ಲಿ ಮುಂಚೂಣಿಯಲ್ಲಿದೆ ಎಂದರು.

ಜಂಟಿ ಕೃಷಿ ನಿರ್ದೇಶಕ ಡಾ. ಎಚ್.ಕೆ. ಕೃಷ್ಣಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಇಲಾಖೆಯ ಶೇ.50 ಹುದ್ದೆ ಖಾಲಿ ಇದೆ. ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಮಾಹಿತಿ, ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

ಸ್ಥಾಯಿ ಸಮಿತಿ ಸದಸ್ಯರಾದ ನಂಜುಂಡಪ್ಪ, ಭಾಗ್ಯವತಿ, ನಾಗವೇಣಿ, ಜಿಪಂ ಉಪಕಾರ್ಯದರ್ಶಿ ಲಕ್ಷ್ಮೀನಾರಾಯಣ ಹಾಜರಿದ್ದರು.

ರಾಯಚೂರಿನ ಸಿಂಧನೂರಿನಲ್ಲಿ ಜ. 5ರಿಂದ 7ರವರೆಗೆ ರಾಜ್ಯ ಮಟ್ಟದ ಪಶುಮೇಳ ಆಯೋಜಿಸಲಾಗಿದೆ. ಪ್ರತಿ ತಾಲೂಕಿನಿಂದ ತಲಾ 10 ರೈತರನ್ನು ಕಳುಹಿಸಿಕೊಡಲಾಗುವುದು. ಬರದ ಹಿನ್ನೆಲೆಯಲ್ಲಿ ತಾಲೂಕಿಗೊಂದು ಗೋಶಾಲೆ ಹಾಗೂ 54 ಕಡೆ ಮೇವು ಬ್ಯಾಂಕ್ ತೆರೆಯುವ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ.

| ಡಾ.ಮದುಸೂಧನರೆಡ್ಡಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...