ಚಿತ್ರದುರ್ಗ:ಆರ್ಥಿಕ ಸ್ವಾತಂತ್ರೃ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ರೈತರು ನಗರದಲ್ಲಿ ಬುಧವಾರ ಕರಾಳ ದಿನವನ್ನು ಆಚರಿಸಿದರು.
ರೈತ ಸಂಘದ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಡಿಸಿ ಕಚೇರಿ ಆವರಣಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದರು.
ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಅನುಷ್ಠಾನವಾಗಬೇಕು. ಕೃಷಿ ಐಪಿ ಸೆಟ್‌ಗಳಿಗೆ ಆಧಾರ್ ಸಂಖ್ಯೆ ಜೋಡಣೆ ಕೈ ಬಿಡಬೇಕು. ಬೋರ್‌ವೆಲ್ ಕೊರೆಸಲು ಸರ್ಕಾರವೇ ಬೆಲೆ ನಿಗದಿ ಮಾಡಬೇಕು ಹಾಗೂ ಇದಕ್ಕಾಗಿ ಸಮಿತಿ ರಚಿಸಬೇಕು. ಬ್ಯಾಂಕ್‌ಗಳು ಒತ್ತಾಯ ಪೂರ್ವಕವಾಗಿ ಕೃಷಿ ಸಾಲ ವಸೂಲಿ ಮಾಡಬಾರದು,ಎನ್‌ಒಸಿಗೆ ಶುಲ್ಕ ಸಂಗ್ರಹಿಸಬಾರದು ಎಂದು ಆಗ್ರಹಿಸಿದರು.
ಕೃಷಿ ಸಾಲಕ್ಕೆ ಸಿಬಿಲ್ ಮಾನದಂಡ ಬೇಡ. ಮೈಕ್ರೋ ಪೈನಾನ್ಸ್ ಕಂಪನಿಗಳ ಹಣಕಾಸು ವ್ಯವಹಾರದ ಮೇಲೆ ನಿಯಂತ್ರಣ ವಹಿಸಬೇಕು. ಜಮೀನು ದಾರಿ ಸಮಸ್ಯೆ ಇತ್ಯರ್ಥ ಪಡಿಸಬೇಕು. ಪಹಣಿ ಮತ್ತು ಭೂ ದಾಖಲೆಗಳನ್ನು 5 ರೂ. ಒದಗಿಸಬೇಕು. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸುವುದು ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಡಿಸಿ ಕಚೇರಿ ಆವರಣಕ್ಕೆ ತೆರಳಲು ಮುಂದಾದ ರೈತರನ್ನು ತಡೆಗೆ ಪೊಲೀಸರು ಯತ್ನಿಸುತ್ತಿದ್ದಂತೆ ಮಾತಿನ ಚಕಮಕಿ ನಡೆಯಿತು. ಬ್ಯಾರಿಕೇಡ್ ತಳ್ಳಿ ಡಿಸಿ ಕಚೇರಿ ಆವರಣಕ್ಕೆ ತೆರಳಿದ ರೈತರು ಧರಣಿ ನಡೆಸಿ ಡಿಸಿಗೆ ಮನವಿ ಸಲ್ಲಿಸಿದರು.
ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ, ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜನ್, ಮರ‌್ಲೇಹಳ್ಳಿ ರವಿಕುಮಾರ್, ನಿಜಲಿಂಗಪ್ಪ, ತಿಮ್ಮಣ್ಣ, ಈರಣ್ಣ, ರಾಜಪ್ಪ, ಬಸಪ್ಪ, ಪರದಪ್ಪ, ನಿರಂಜನ, ನಾಗರಾಜಪ್ಪ, ತಿಮ್ಮಾರೆಡ್ಡಿ, ಆಂಜನಪ್ಪ, ಎಂ.ಶಿವಮೂರ್ತಿ ಇತರರು ಇದ್ದರು.
ರೈತರಿಗೆ ಬೇಕು ಆರ್ಥಿಕ ಸ್ವಾತಂತ್ರೃ
ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…
ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach ) ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…
Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..
ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan) ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…
ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes
ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…