20.4 C
Bengaluru
Sunday, January 19, 2020

ರೈತರ ಪರಿಹಾರದ ಮೊತ್ತ ಸಾಲಕ್ಕೆ ಜಮೆ ಸಲ್ಲದು

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ಧಾರವಾಡ: ರೈತರ ಖಾತೆಗಳಿಗೆ ಜಮೆಯಾಗುವ ಬೆಳೆಹಾನಿ ಪರಿಹಾರ, ವಿಮೆ, ಮನೆ ಹಾನಿ ಪರಿಹಾರದ ಮೊತ್ತವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು. ಅಂಥ ಪ್ರಕರಣಗಳು ಕಂಡುಬಂದರೆ ಬ್ಯಾಂಕ್​ಗಳ ವಿರುದ್ಧ ಕ್ರಮ ಜರುಗಿಸಿ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಆಲೂರು ವೆಂಕಟರಾವ್ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೖೆಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಶಾಸಕ ಅಮೃತ ದೇಸಾಯಿ ವಿಷಯ ಪ್ರಸ್ತಾಪಿಸಿ, ರೈತರ ಖಾತೆಗಳಿಗೆ ಜಮೆಯಾದ ಮನೆ ಹಾನಿ ಪರಿಹಾರವನ್ನೂ ಬ್ಯಾಂಕ್​ನವರು ಸಾಲಕ್ಕೆ ಜಮೆ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು.

ಬ್ಯಾಹಟ್ಟಿಯಲ್ಲಿ ರೈತನೊಬ್ಬನ ಅರಿವಿಗೆ ಬಾರದಂತೆ ಖಾತೆಯ ಹಣ ವಿತ್​ಡ್ರಾ ಮಾಡಲಾಗಿದೆ. ಈ ಸಂಬಂಧ ಬ್ಯಾಂಕ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಜಿ.ಪಂ. ಉಪಾಧ್ಯಕ್ಷ ಶಿವಾನಂದ ಕರಿಗಾರ ತಿಳಿಸಿದರು.

ಪ್ರತಿಕ್ರಿಯಿಸಿದ ಶೆಟ್ಟರ್, ಸರ್ಕಾರದ ಪರಿಹಾರವನ್ನು ಸಾಲಕ್ಕೆ ಹೊಂದಾಣಿಕೆ ಮಾಡುವ ಬ್ಯಾಂಕ್ ವಿರುದ್ಧ ಕ್ರಮ ಜರುಗಿಸಬೇಕು. ಬ್ಯಾಹಟ್ಟಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸಿಬ್ಬಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್​ಗೆ ಸೂಚಿಸಿದರು.

ಇದುವರೆಗೂ ಮಾವು ಬೆಳೆ ಹೂ ಬಿಡದಿರುವುದರಿಂದ ರೈತರು ಆತಂಕದಲ್ಲಿದ್ದಾರೆ. ಮಾವು ಬೆಳೆಗಾರರಿಗೆ ವಿಮಾ ಸೌಲಭ್ಯ ಪಡೆಯಲು ಅರಿವು ಮೂಡಿಸಬೇಕು. ಹದಗೆಟ್ಟ ಗ್ರಾಮೀಣ ರಸ್ತೆಗಳ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಮೃತ ದೇಸಾಯಿ ಹೇಳಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಹಾನಿಯಾದ ಮನೆಗಳ ಸಮೀಕ್ಷೆ ಮಾಡಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸಮೀಕ್ಷೆ ಮುಗಿದ ನಂತರವೂ ಜಿಲ್ಲೆಯಲ್ಲಿ ಮನೆಗಳಿಗೆ ಹಾನಿಯಾಗಿದೆ. ಪರಿಶೀಲನೆ ನಡೆಸಲಾಗಿದ್ದು, ಸರ್ಕಾರದ ಆದೇಶ ಬಂದ ಕೂಡಲೇ ಅವುಗಳನ್ನೂ ದಾಖಲಿಸಿ ಪರಿಹಾರ ನೀಡಲಾಗುವುದು ಎಂದರು.

ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿ.ಪಂ. ಸಿಇಒ ಡಾ. ಬಿ.ಸಿ. ಸತೀಶ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶಕುಮಾರ, ಡಿಸಿಪಿ ಡಿ.ಎಲ್. ನಾಗೇಶ, ಪ್ರೊಬೇಷನರಿ ಐಎಎಸ್ ಅಧಿಕಾರಿ ಆಕೃತಿ ಬನ್ಸಾಲ್, ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಚನ್ನಮ್ಮ ಶಿವನಗೌಡರ, ನಿಂಗಪ್ಪ ಘಾಟೀನ, ಕಲ್ಲಪ್ಪ ಪುಡಕಲಕಟ್ಟಿ, ಇತರರಿದ್ದರು.

ಜಿಲ್ಲೆಯ ಪ್ರತಿ ಹಳ್ಳಿಗೂ ಮಲಪ್ರಭಾ ನೀರು

ಧಾರವಾಡ: ಜಿಲ್ಲೆಯ ಪ್ರತಿ ಹಳ್ಳಿಗೂ ಮಲಪ್ರಭಾ ಕುಡಿಯುವ ನೀರು ಪೂರೈಸುವ ಯೋಜನೆ ರೂಪಿಸಲಾಗಿದೆ. ಜಿಲ್ಲೆಯ ಎಲ್ಲ ಶಾಸಕರ ಕೋರಿಕೆಯಂತೆ ಡಿಪಿಎಆರ್ ಸಿದ್ಧಪಡಿಸಲಾಗಿದೆ. 1,500 ಕೋಟಿ ರೂ. ವೆಚ್ಚದ ಯೋಜನೆಗೆ ಶೀಘ್ರವೇ ಸಂಪುಟದ ಅನುಮೋದನೆ ಪಡೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹು ನಿರೀಕ್ಷಿತ ಯೋಜನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಹುಬ್ಬಳ್ಳಿ- ಧಾರವಾಡ ಅವಳಿನಗರದ ವಾರ್ಡ್​ಗಳಿಗೆ ಈ ಮೊದಲು ಮಲಪ್ರಭಾ ಕುಡಿಯುವ ನೀರು 10- 12 ದಿನಕ್ಕೊಮ್ಮೆ ಪೂರೈಕೆಯಾಗುತ್ತಿತ್ತು. ನೀರಸಾಗರ ಕೆರೆಗೆ ನೀರು ಬಂದ ಮೇಲೆ 5 ದಿನಕ್ಕೊಮ್ಮೆ ಪೂರೈಕೆಯಾಗುತ್ತಿದೆ. ಅವಳಿನಗರದ ಶೇ. 35- 40 ಪ್ರದೇಶಕ್ಕೆ 24*7 ನೀರು ಪೂರೈಕೆಯಾಗುತ್ತಿದೆ. ಉಳಿದ ವಾರ್ಡ್​ಗಳಿಗೂ ವಿಶ್ವ ಬ್ಯಾಂಕ್ ನೆರವು ಪಡೆದು ವಿಸ್ತರಿಸಲಾಗುವುದು. ಇನ್ನು 2 ವರ್ಷದಲ್ಲಿ ಎಲ್ಲ ವಾರ್ಡ್​ಗಳಿಗೆ 24*4 ನೀರು ಪೂರೈಕೆಯಾಗುವ ಮೂಲಕ ಮಾದರಿ ಯೋಜನೆ ಆಗಲಿದೆ ಎಂದರು.

ಇನಾಮಹೊಂಗಲ- ಹಾರೋಬೆಳವಡಿ ಸೇತುವೆ ಬೆಳಗಾವಿ ಜಿಲ್ಲೆ ಸವದತ್ತಿ ವ್ಯಾಪ್ತಿಗೆ ಬರುತ್ತದೆ. ಶಾಸಕ ವಿಶ್ವನಾಥ ಮಾಮನಿ ಅವರೊಂದಿಗೆ ಮಾತನಾಡಿದ್ದೇನೆ. ಟೆಂಡರ್ ಆದ ನಂತರ ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದಿದ್ದಾರೆ. ಸೇತುವೆ ಪಕ್ಕ ತಾತ್ಕಾಲಿಕ ರಸ್ತೆ ಮಾಡಲಾಗಿತ್ತು. ಅಕ್ಟೋಬರ್​ನಲ್ಲಾದ ಮಳೆಗೆ ಅದೂ ಕೆಟ್ಟಿದ್ದರಿಂದ ವಾಹನಗಳ ಓಡಾಟಕ್ಕೆ ಕೆಲ ದಿನ ಬದಲಿ ಸಂಚಾರ ಮಾಡಲಾಗಿತ್ತು ಎಂದು ಸಚಿವ ಶೆಟ್ಟರ್ ಪ್ರತಿಕ್ರಿಯಿಸಿದರು.

ವರದಿ ಕೇಳಿದ್ದೇನೆ: ಜಿಲ್ಲೆಯಲ್ಲಿ 117 ಆರ್​ಒ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ಕೆಡಿಪಿ ಸಭೆಯಲ್ಲಿ ಚರ್ಚೆಯಾಗಿದೆ. ಲಕ್ಷಾಂತರ ರೂ. ವ್ಯಯಿಸಿ ನಿರ್ವಿುಸಿದ ಘಟಕಗಳು ಬಂದ್ ಆಗಲು ಕಾರಣ ಹೊರಬರಬೇಕು. ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಯಿಂದ ಶೀಘ್ರವೇ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದು ಸಚಿವ ಶೆಟ್ಟರ್ ತಿಳಿಸಿದರು.

ಎನ್​ಕೌಂಟರ್ ಯೋಜಿಸಿ ಮಾಡುವುದಲ್ಲ: ಎನ್​ಕೌಂಟರ್​ಗಳನ್ನು ಯೋಜಿಸಿ ಮಾಡುವುದಿಲ್ಲ. ಹೈದ್ರಾಬಾದ್​ನಲ್ಲಿ ನಾಲ್ವರನ್ನು ಎನ್​ಕೌಂಟರ್ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು. ದೆಹಲಿಯಲ್ಲಿ ನಿರ್ಭಯಾ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಪ್ರಕಟವಾಗಿದ್ದರೂ ಅನುಷ್ಠಾನವಾಗಿಲ್ಲ. ಹೀಗಾಗಿ ಜನತೆಯಲ್ಲಿ ಆಕ್ರೋಶ ಇದೆ. ಹೈದ್ರಾಬಾದ್​ನ ಪಶುವೈದ್ಯೆಯನ್ನು ಅತ್ಯಾಚಾರ ಮಾಡಿ ಕೊಲೆಗೈದವರು ಪೊಲೀಸರ ಮೇಲೆಯೇ ದಾಳಿ ನಡೆಸಲು ಯತ್ನಿಸಿದ್ದರು. ಅವರನ್ನು ಹುಬ್ಬಳ್ಳಿ ಮೂಲದ ಐಪಿಎಸ್ ಅಧಿಕಾರಿ ವಿಶ್ವನಾಥ ಸಜ್ಜನರ್ ನೇತೃತ್ವದ ತಂಡ ಎನ್​ಕೌಂಟರ್ ಮಾಡಿರುವುದನ್ನು ಇಡೀ ದೇಶದ ಜನ ಸ್ವಾಗತಿಸಿದ್ದಾರೆ. ಮಾನವ ಹಕ್ಕುಗಳ ಆಯೋಗಕ್ಕೆ ತನಿಖೆ ಮಾಡುವ ಹಕ್ಕು ಇದೆ. ಇಂಥ ಪ್ರಕರಣಗಳಲ್ಲಿ ತಪ್ಪು ಹುಡುಕುವಂತಾಗಬಾರದು ಎಂದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...