20.3 C
Bangalore
Sunday, December 15, 2019

ರೈತರ ಬಂದೂಕು ಪೊಲೀಸರ ವಶಕ್ಕೆ; ಬೆಳೆ ಉಳಿಸಿಕೊಳ್ಳಲು ಪರದಾಟ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ರಾಜೇಂದ್ರ ಶಿಂಗನಮನೆ ಶಿರಸಿ: ವಿಧಾನಸಭೆ ಉಪಚುನಾವಣೆ ಹಿನ್ನೆಲೆ ಯಲ್ಲಿ ಬಂದೂಕುಗಳನ್ನು ಪೊಲೀಸ್ ಠಾಣೆಯವರು ವಶಕ್ಕೆ ಪಡೆದಿರುವುದರಿಂದ ರೈತರಿಗೆ ತೊಂದರೆ ಆಗುತ್ತಿದೆ. ಇದರಿಂದ ವಿನಾಯಿತಿ ನೀಡಬೇಕು ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಜಿಲ್ಲೆಯ ಉಳಿದೆಡೆ ರೈತರು ಆಗ್ರಹಿಸಿದ್ದಾರೆ.

ಸಾಮಾನ್ಯವಾಗಿ ಚುನಾವಣೆ ಗಳು ಬಂದಾಗ ರೈತರು ಹೊಂದಿದ ಬಂದೂಕುಗಳನ್ನು ಠಾಣೆಗೆ ಜಮೆ ಮಾಡುವ ಪದ್ಧತಿಯಿದೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗೆ ಕಾರಣವಾಗಬಾರದು ಎಂಬ ಉದ್ದೇಶದಿಂದ ಮುಂಜಾಗ್ರತೆ ಯಾಗಿ ಪೊಲೀಸ್ ಇಲಾಖೆ ಈ ಕ್ರಮ ಕೈಗೊಳ್ಳುತ್ತದೆ. ಆದರೆ, ಜಿಲ್ಲೆಯ ರೈತರು ಕಾಡು ಪ್ರಾಣಿ ಹಾವಳಿ, ಮಂಗಗಳ ಕಾಟ, ಕೆಂಜಳಿಲು ಹಾವಳಿ, ಆನೆ ದಾಳಿ ಸೇರಿ ಹಲವು ಸಮಸ್ಯೆಯ ನಡುವೆ ಕೃಷಿ ಮಾಡುತ್ತಿದ್ದಾರೆ. ಯಲ್ಲಾಪುರ ವಿಧಾನಸಭೆ ಕ್ಷೇತ್ರಕ್ಕೆ ಡಿ. 5ರಂದು ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಇಡೀ ಜಿಲ್ಲಾದ್ಯಂತ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಈ ಪ್ರಕಾರ ಅಧಿಕೃತ ಬಂದೂಕು ಪರವಾನಗಿ ಹೊಂದಿದ ರೈತರು ತಮ್ಮಲ್ಲಿನ ಬಂದೂಕುಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿ ಜಮೆ ಮಾಡುವುದು ಕಡ್ಡಾಯ. ರೈತರ ಜಮೀನಿನಲ್ಲಿ ಫಸಲು ಕೊಯ್ಯುವ ಹಂತಕ್ಕೆ ಬಂದಿದ್ದು, ಕಾಡುಪ್ರಾಣಿಗಳ ಹಾವಳಿ ಮಿತಿ ಮೀರಿದೆ. ಇಂಥ ಸಂದರ್ಭದಲ್ಲಿಯೇ ಜಿಲ್ಲಾಡಳಿತದ ಬಂದೂಕು ಜಮೆ ಕಡ್ಡಾಯ ನೀತಿಯಿಂದ ರೈತ ವರ್ಗ ಕಂಗಾಲಾಗಿದೆ. ಪ್ರಸ್ತುತ ಅಡಕೆ ಕೊಯ್ಲು ಆರಂಭ ಆಗುತ್ತದೆ. ಭತ್ತ ಕಟಾವು ಮಾಡಲಾಗುತ್ತಿದೆ. ಉಳಿ ದಂತೆ ವಿವಿಧ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ಕೊಯ್ಲಿನ ಹಂತದಲ್ಲಿದೆ. ಅವುಗಳ ರಕ್ಷಣೆಗೆ ಬಂದೂಕು ಅನಿವಾರ್ಯ. ಆದರೆ, ಜಿಲ್ಲೆಯ ಒಂದು ವಿಧಾನಸಭೆ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ಇಡೀ ಜಿಲ್ಲಾದ್ಯಂತದ ಬಂದೂಕುಗಳ ಜಮಾವಣೆ ಅವೈಜ್ಞಾನಿಕವಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ನಿರ್ಣಯ ಕೈಗೊಳ್ಳಬೇಕು. ಕಷ್ಟದಲ್ಲಿರುವ ರೈತರಿಗೆ ಮತ್ತಷ್ಟು ಕಷ್ಟ ನೀಡದೆ ಬಂದೂಕು ಕಡ್ಡಾಯ ಜಮೆಯಿಂದ ವಿನಾಯಿತಿ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಶಿರಸಿ ಉಪವಿಭಾಗದಲ್ಲಿನ ಬಂದೂಕುಗಳ ಸಂಖ್ಯೆ: ಶಿರಸಿ ನಗರ – 32, ಶಿರಸಿ ಗ್ರಾಮೀಣ- 1356, ಶಿರಸಿ ಮಾರುಕಟ್ಟೆ- 30, ಬನವಾಸಿ- 442, ಸಿದ್ದಾಪುರ – 946, ಯಲ್ಲಾಪುರ- 1591, ಮುಂಡಗೋಡ- 489

ಉಪಚುನಾವಣೆ ಘೊಷಣೆಯಾಗಿ ನೀತಿ ಸಂಹಿತೆ ಜಾರಿಯಾದ ಕೂಡಲೇ ರೈತರ ಬಂದೂಕುಗಳನ್ನು ಠಾಣೆಗೆ ತಂದಿಡಲು ಇಲಾಖೆ ಬಂದೂಕು ಹೊಂದಿದವರಿಗೆ ಮಾಹಿತಿ ನೀಡಿದೆ. ಅದರನ್ವಯ ರೈತರು ತಮ್ಮ ವ್ಯಾಪ್ತಿಗೆ ಸೇರಿದ ಠಾಣೆಗೆ ಈಗಾಗಲೇ ತಂದಿಡುತ್ತಿದ್ದಾರೆ. ಚುನಾವಣಾ ಆಯೋಗದ ಸೂಚನೆಯಂತೆ ಅಧಿಕೃತ ಬಂದೂಕುದಾರರಿಂದ ಬಂದೂಕು ಜಮೆ ಮಾಡಲು ಸೂಚಿಸಿದ್ದು, ಚುನಾವಣಾ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಆ ಪ್ರಕಾರ ರೈತರು ಕಡ್ಡಾಯ ಜಮೆ ಮಾಡಲೇ ಬೇಕು. | ಡಾ.ಕೆ.ಹರೀಶಕುಮಾರ ಜಿಲ್ಲಾಧಿಕಾರಿ

ಜಿಲ್ಲೆಯ ಒಂದು ವಿಧಾನಸಭೆಗೆ ನಡೆಯುವ ಚುನಾವಣೆಗೆ ಆ ವಿಧಾನಸಭಾ ಕ್ಷೇತ್ರದ ಬಂದೂಕುದಾರರಿಗೆ ಕಡ್ಡಾಯ ಜಮೆ ನಿರ್ದೇಶನ ನೀಡಬೇಕೇ ವಿನಃ ಜಿಲ್ಲೆಯ ಎಲ್ಲ ಬಂದೂಕುದಾರರಿಗೆ ಜಮೆ ಮಾಡಬೇಕು ಎಂದು ಹೇಳುವ ಕ್ರಮ ಖಂಡನೀಯ. ಬಂದೂಕು ಜಮೆಯನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರು ಕೂಡ ಈ ವೇಳೆ ತಮ್ಮ ಕೃತ್ಯವನ್ನು ಮಾಡುವ ಸಾಧ್ಯತೆಯಿದೆ. ಪರಿಸ್ಥಿತಿಯ ವಾಸ್ತವಾಂಶ ಗಮನದಲ್ಲಿಟ್ಟುಕೊಂಡು ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರ ಹೊರತುಪಡಿಸಿ ಉಳಿದ ತಾಲೂಕುಗಳ ರೈತರಿಗೆ ಈ ಕಡ್ಡಾಯ ಜಮೆಯಿಂದ ವಿನಾಯಿತಿ ನೀಡಬೇಕು. ಇಲ್ಲವೆ ಬಂದೂಕು ಜಮೆಯ ಸಮಯದಲ್ಲಾದ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. | ಗೋಪಾಲ ಹೆಗಡೆ ಹಾವಿನಕೊಡ್ಲು ರೈತ

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...