ರೈತರ ಮೇಲೆ ಕ್ರಿಮಿನಲ್ ಕೇಸ್‌ಗೆ ತಡೆ; ಸರ್ಕಾರಕ್ಕೆ ಮನವರಿಕೆ ಮಾಡುವಲ್ಲಿ ಯಶಸ್ವಿ: ಶಾಸಕ ಹರತಾಳು ಹಾಲಪ್ಪ

ಸಾಗರ: ಬದುಕಿಗಾಗಿ ಸರ್ಕಾರಿ ಭೂಮಿಯಲ್ಲಿ ಅಕ್ರಮ ಸಾಗುವಳಿ ಮಾಡುತ್ತಿದ್ದ ರೈತರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸದಂತೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.
ಸಕ್ರಮಕ್ಕಾಗಿ ರೈತರು ಬಗರ್‌ಹುಕುಂ ಸಮಿತಿಗಳ ಮುಂದೆ ಅರ್ಜಿ ಸಲ್ಲಿಸಿದ್ದರೂ ಭೂ ಕಬಳಿಕೆಗೆ ಸಂಬಂದಿಸಿದಂತೆ ಕ್ರಿಮಿನಲ್ ಕೇಸನ್ನು ದಾಖಲಿಸಲಾಗುತ್ತಿತ್ತು. ಈ ವಿಚಾರವನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಲೆನಾಡಿನಲ್ಲಿ ಇಂದಿಗೂ ಭೂಮಿಗೆ ಸಂಬಂಧಿಸಿ ಸಾಕಷ್ಟು ಸಮಸ್ಯೆಗಳಿವೆ. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಗಳ ಕುರಿತಂತೆ ಅಧ್ಯಯನ ನಡೆಸಲು ರಾಜ್ಯಮಟ್ಟದ ಸಮಿತಿಯೊಂದು ರಚಿತವಾಗಿದ್ದು ಶಾಶ್ವತ ಪರಿಹಾರ ಕಂಡುಹಿಡಿಯಲು ಚಿಂತನೆ ನಡೆಸಲಾಗುತ್ತಿದೆ, ತಂಡಕ್ಕೆ ಎಂಎಸ್‌ಐಎಲ್‌ನಿಂದ ವಾಹನದ ವ್ಯವಸ್ಥೆಯನ್ನು ಸಹ ಮಾಡಲಾಗುತ್ತದೆ. ಕಸ್ತೂರಿ ರಂಗನ್ ವರದಿ ಮಲೆನಾಡಿನ ಜನರಿಗೆ ಮಾರಕವಾಗಿದ್ದು, ಈ ಕುರಿತಂತೆ ಕೇಂದ್ರ ಮಂತ್ರಿಗಳು ಮತ್ತು ಅಧಿಕಾರಿಗಳಿಗೆ ರಾಜ್ಯಮಟ್ಟದ ನಮ್ಮ ನಿಯೋಗ ಮನವರಿಕೆ ಮಾಡಿಕೊಟ್ಟಿದೆ. ಇನ್ನೊಂದು ತಿಂಗಳಲ್ಲಿ ಕೇಂದ್ರ ತಂಡ ಅಧ್ಯಯನಕ್ಕಾಗಿ ಆಗಮಿಸಲಿದ್ದು ಈ ಪ್ರದೇಶದ ಜನರ ಜತೆ ಚರ್ಚೆ ನಡೆಸಲಿದ್ದಾರೆ ಎಂದರು.
ಇತ್ತಿಚಿನ ದಿನಗಳಲ್ಲಿ ಅರಣ್ಯ ಭೂಮಿಯ ಸಮಸ್ಯೆ, ಮರಳು ಸಮಸ್ಯೆ, ಉರುಳುಗಲ್ಲಿನ ಸಮಸ್ಯೆಗಳನ್ನು ಒಳಗೊಂಡಂತೆ ಎಲ್ಲದರ ಪರಿಹಾರಕ್ಕಾಗಿ ನಾನು ನಿರಂತರವಾಗಿ ಶ್ರಮಿಸುತ್ತಿದ್ದರೆ, ನಾನೇ ಈ ಸಮಸ್ಯೆಗೆಲ್ಲ ಕಾರಣ ಎಂದು ಕೆಲವರು ಹಣೆ ಪಟ್ಟಿ ಕಟ್ಟುತ್ತಿದ್ದಾರೆ. ನಾನು ಶಾಸಕನಾಗುವುದಕ್ಕಿಂತ ಮುಂಚ್ಚಿನಿಂದಲೂ ಈ ಸಮಸ್ಯೆಗಳಿವೆ. ಇತ್ತಿಚಿನ ದಿನಗಳಲ್ಲಿ ಅರಣ್ಯ ಇಲಾಖೆಯವರ ದೌರ್ಜನ್ಯ ಪ್ರಕರಣ ಸಹ ನನ್ನ ಗಮನಕ್ಕೆ ಬಂದಿದೆ. ರೈತರ ಫಸಲುಗಳನ್ನು ಕಡಿದು ಹಾಕುವ ಕೆಲಸ ಮಾಡುತ್ತಿದ್ದಾರೆ. ಅವರು ಇನ್ನು ಬ್ರಿಟಿಷ್ ಆಳ್ವಿಕೆಯಂತೆ ವರ್ತಿಸುತ್ತಿದ್ದು ಸಂಬಂಧಪಟ್ಟ ಉನ್ನತ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಸ್ಥಳೀಯ ಆಡಳಿತದಲ್ಲಿ ಸಾರ್ವಜನಿಕರಿಗೆ ನೌಕರರು, ಅಧಿಕಾರಿಗಳಿಂದ ತೊಂದರೆಯಾದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ ಎಂದರು.

Share This Article

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..

ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…