ರೈತಸಂಘದಿಂದ ಛೀ..ಥೂ.. ಚಳವಳಿ

Latest News

ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ವಿರೋಧಿಸಿ ಲೋಕಸಭೆ ಸ್ಪೀಕರ್ ಪೀಠದ ಎದುರು ಕಾಂಗ್ರೆಸ್​ ಪ್ರತಿಭಟನೆ

ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್​ ಲಿಮಿಟೆಡ್​ (ಬಿಪಿಸಿಎಲ್​) ಸೇರಿ ಕೆಲ ಸರ್ಕಾರಿ ಸ್ವಾಮ್ಯದ ಕಂಪನಿಗಳ ಖಾಸಗೀಕರಣ ಮತ್ತು ಚುನಾವಣಾ ಬಾಂಡ್​ ವಿತರಣೆಯನ್ನು ಬಹುದೊಡ್ಡ...

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹಂತಕ ರಾಬರ್ಟ್​ ಪಯಾಸ್​ಗೆ ಒಂದು ತಿಂಗಳ ಪರೋಲ್​

ಚೆನ್ನೈ: ಮಾಜಿ ಪ್ರಧಾನ ಮಂತ್ರಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ರಾಬರ್ಟ್ ಪಯಾಸ್​ಗೆ ಮದ್ರಾಸ್​ ಹೈಕೋರ್ಟ್​ ಗುರುವಾರ 30 ದಿನಗಳ ಪರೋಲ್​...

ಡಿಕೆಶಿ ಗೆ ಹುಬ್ಬಳ್ಳಿಯಲ್ಲಿ ಭರ್ಜರಿ ಸ್ವಾಗತ ನೀಡಿದ ಅಭಿಮಾನಿಗಳು

ವಿಜಯವಾಣಿ ಸುದ್ದಿಜಾಲ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ ಅವರಿಗೆ ನಗರದಲ್ಲಿ ಗುರುವಾರ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಭರ್ಜರಿ ಸ್ವಾಗತಿಸಿದರು.ಗೋಕುಲ ರಸ್ತೆ ವಿಮಾನ...

ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗುತ್ತಿದ್ದಾರೆ ನಟ, ನೇತಾರ ಕಮಲ್ ಹಾಸನ್

ಚೆನ್ನೈ: ಮಕ್ಕಳ್ ನೀದಿ ಮೈಯ್ಯಮ್(ಎಂಎನ್​ಎಂ) ಪಕ್ಷ ಸ್ಥಾಪಕ ನಟ ಕಮಲ್ ಹಾಸನ್ ನಾಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಮುಖ ಸರ್ಜರಿಗೆ ಒಳಗಾಗಲಿದ್ದಾರೆ ಎಂದು...

ರಕ್ಷಣಾ ಸಮಿತಿಗೆ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​ ಆಯ್ಕೆ: ಇದು ದೇಶಕ್ಕೆ ಮಾಡಿದ ಅಪಮಾನವೆಂದ ಕಾಂಗ್ರೆಸ್​

ನವದೆಹಲಿ: ಮಾಲೆಗಾಂವ್​ ಸ್ಪೋಟ(2008) ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೇತೃತ್ವದ 21 ಸದಸ್ಯರ...

ಶಿವಮೊಗ್ಗ: ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುವುದು ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಾಜ್ಯ ರೈತ ಸಂಘದ ಮುಖಂಡರು ಸೋಮವಾರ ನಗರದ ಶಿವಪ್ಪನಾಯಕ ವೃತ್ತದಲ್ಲಿ ಮೂರು ಪಕ್ಷಗಳ ಪ್ರತಿಕೃತಿಗೆ ಎಲೆ-ಅಡಕೆ ಜಗಿದು ಉಗಿಯುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ. ಮಳೆ ಸರಿಯಾಗಿ ಬೀಳುತ್ತಿಲ್ಲ. ಇಂತಹ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಸರ್ಕಾರ ಬೀಳಿಸುವ ಹಾಗೂ ರಚಿಸುವ ಉತ್ಸಾಹದಲ್ಲಿ ತೊಡಗಿವೆ. ಇಂತಹ ರಾಜಕೀಯ ದೊಂಬರಾಟಕ್ಕೆ ಕಾರಣವಾದ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರತಿಕೃತಿಗೆ ಛೀ.. ಥೂ.. ಎಂದು ಉಗಿದರು. ಶಾಸಕರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಬರಗಾಲವಿದ್ದು ಜನರ ಕಷ್ಟಗಳಿಗೆ ಸ್ಪಂದಿಸಬೇಕಾದ ಶಾಸಕರು, ಸಚಿವರು ಹಣ ಗಳಿಕೆಗೆ ಪಣ ತೊಟ್ಟಿದ್ದಾರೆ. ಅಧಿಕಾರದ ಆಸೆಗೆ ರಾಜೀನಾಮೆ ನೀಡಿದ್ದು ಹೇಯ ಕೃತ್ಯವಾಗಿದೆ. ಮತ ನೀಡಿ ಜನಪ್ರತಿನಿಧಿಗಳಾಗಿ ಆಯ್ಕೆ ಮಾಡಿದ ರಾಜ್ಯದ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ನಾಯಕರಿಗೆ ಯಾವುದೆ ಸಿದ್ಧಾಂತವಿಲ್ಲ, ದೊಡ್ಡ ಮಟ್ಟದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಅಧಿಕಾರದ ಬೆನ್ನು ಬಿದ್ದಿದ್ದಾರೆ. ಜನಪ್ರತಿನಿಧಿಗಳನ್ನು ನಿಯಂತ್ರಿಸಲು ಯೋಗ್ಯತೆ ಇಲ್ಲದ ಕಾರಣ ರಾಜಕೀಯ ಅಸ್ಥಿರತೆ ತಲೆದೂರಿದೆ. ಮೂರು ಪಕ್ಷಗಳು ಶಾಸಕರ ಆಪರೇಷನ್​ಗೆ ಮುಂದಾಗಿವೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ ಎಂದು ಕಿಡಿಕಾರಿದರು. ಯೋಗ್ಯತೆ ಕಳೆದುಕೊಂಡಿರುವ ರಾಜಕಾರಣಿಗಳು ರಾಜಕೀಯದಿಂದ ದೂರವಾಗಬೇಕು. ಮತದಾರರು ಸರಿಯಾಗಿ ಬುದ್ಧಿ ಕಲಿಸಬೇಕು ಎಂದು ಒತ್ತಾಯಿಸಿ ಮೂರು ಪಕ್ಷಗಳ ಪ್ರತಿಕೃತಿ ದಹಿಸಿದರು. ಶಾಸಕರು ಜನರ ಸಂಕಷ್ಟಗಳಿಗೆ ಸ್ಪಂದಿಸಲಿ: ಶಾಸಕರ ವರ್ತನೆ ಅಸಹ್ಯ ಮೂಡಿಸುತ್ತಿದೆ. ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟರೆ ತಮ್ಮ ತಮ್ಮ ಮನೆಗಳಿಲ್ಲದೆ, ಮುಂಬೈನ ರೆಸಾರ್ಟ್​ಗೆ ಏಕೆ ಸೇರಿಕೊಂಡಿದ್ದೀರಿ ಎಂದು ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಪ್ರಶ್ನಿಸಿದರು. ಚಳವಳಿ ನೇತೃತ್ವ ವಹಿಸಿದ್ದ ಅವರು ಮಾತನಾಡಿ, ರಾಜೀನಾಮೆ ಕೊಡಲು ಓಡೋಡಿ ಬರುತ್ತಾರೆ. ಆದರೆ ಬರಗಾಲವಿದೆ. ಕ್ಷೇತ್ರದ ಜನತೆ ಸಂಕಷ್ಟದಲ್ಲಿದ್ದರೆ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದರೆ ಯಾರೂ ಸುಳಿಯಲ್ಲ. ಪ್ರಯಾಣಿಸಲು ಒಬ್ಬೊಬ್ಬರಿಗೆ ಒಂದೊಂದು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಯಾರಿಗೂ ಗೊತ್ತಾಗುವುದಿಲ್ಲ ಎಂದು ಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಮುಖಂಡರಾದ ಕೆ.ರಾಘವೇಂದ್ರ, ಟಿ.ಎಂ.ಚಂದ್ರಪ್ಪ, ಇ.ಬಿ.ಜಗದೀಶ್, ಡಿ.ಎಚ್.ರಾಮಚಂದ್ರಪ್ಪ, ಹಿಟ್ಟೂರು ರಾಜು, ಎಸ್.ಶಿವಮೂರ್ತಿ, ಅರಬಿಳಚಿ ಈಶಣ್ಣ, ಕಾಚಿಕೊಪ್ಪದ ಎಂ.ಮಂಜಪ್ಪ, ಹೊಸನಗರದ ರವೀಂದ್ರ, ಮಹೇಶ್ವರಪ್ಪ ಕೂಡ್ಲಿಗೆರೆ, ಪಿ.ಶೇಖರಪ್ಪ ಮತ್ತಿತರರು ಚಳವಳಿಯಲ್ಲಿ ಭಾಗವಹಿಸಿದ್ದರು.

- Advertisement -

Stay connected

278,645FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...