18 C
Bangalore
Thursday, December 5, 2019

ರೋಟಾ ವೈರಸ್ ತಡೆಗೆ ಮಕ್ಕಳಿಗೆ ಲಸಿಕೆ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಶಿವಮೊಗ್ಗ: ರೋಟಾ ವೈರಸ್ ತಡೆಗಟ್ಟುವ ಸಲುವಾಗಿ ಪೂರ್ವಭಾವಿಯಾಗಿ ಎಲ್ಲ ಮಕ್ಕಳಿಗೂ ಲಸಿಕೆ ನೀಡಬೇಕು. ಇದಕ್ಕಾಗಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಡಿಸಿ ಕೆ.ಬಿ.ಶಿವಕುಮಾರ್ ಸೂಚಿಸಿದರು.

ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಭೆ ನಡೆಸಿದ ಅವರು, ಮಗುವಿಗೆ 6, 10 ಹಾಗೂ 14ನೇ ವಾರದಲ್ಲಿ ರೋಟಾ ವೈರಸ್ ನಿರೋಧಕ ಲಸಿಕೆ ನೀಡಬೇಕು. ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಇದರ ಸಮರ್ಪಕ ಪರಿಶೀಲನೆ ನಡೆಸಬೇಕೆಂದು ಹೇಳಿದರು.

ತಂಬಾಕು ಉತ್ಪನ್ನಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವ ಕೋಟ್ಪಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಶಾಲೆಗಳ ವ್ಯಾಪ್ತಿಯಲ್ಲಿ ಯಾವುದೆ ಕಾರಣಕ್ಕೂ ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶ ನೀಡಬಾರದು. ಜಿಲ್ಲೆಯಲ್ಲಿ ಕಳೆದ ಏಪ್ರಿಲ್​ನಿಂದ ಈವರೆಗೆ 589 ಕೊಟ್ಪಾ ದಾಳಿ ನಡೆಸಲಾಗಿದೆ. ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಈ ಕಾರ್ಯದಲ್ಲಿ ಸಹಕರಿಸಬೇಕು ಎಂದು ತಿಳಿಸಿದರು.

ಕೆಲ ಗ್ರಾಪಂ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸ್ಥಳೀಯ ಪಿಡಿಒ ಸಹಕಾರ ನೀಡದಿರುವ ಬಗ್ಗೆ ದೂರುಗಳು ಬಂದಿವೆ. ಅಂತಹ ಪಿಡಿಒಗಳಿಗೆ ಶೋಕಾಸ್ ನೊಟಿಸ್ ಜಾರಿಗೊಳಿಸಿ ಇಲಾಖಾ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ನೀರಿನ ಪರೀಕ್ಷೆ ನಡೆಸಿ: ಪ್ರವಾಹ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಿವೆ. ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಇದುವರೆಗೆ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಂಡಿಲ್ಲ. ಇನ್ನು ಮುಂದೆಯೂ ಎಚ್ಚರಿಕೆ ವಹಿಸಬೇಕು. ಕುಡಿಯುವ ನೀರಿನ ಗುಣಮಟ್ಟವನ್ನು ನಿರಂತರವಾಗಿ ಪರೀಕ್ಷೆ ನಡೆಸಬೇಕೆಂದರು.

ಡಿಎಚ್​ಒ ಡಾ.ರಾಜೇಶ್ ಸುರಗೀಹಳ್ಳಿ, ಆರ್​ಸಿಎಚ್ ಡಾ.ನಾಗರಾಜ ನಾಯಕ್, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಶಂಕರಪ್ಪ, ವಿಡಿಎಲ್ ಉಪನಿರ್ದೇಶಕ ಡಾ.ಕಿರಣ್​ಕುಮಾರ್, ಎಎಸ್ಪಿ ಡಾ.ಎಚ್.ಟಿ.ಶೇಖರ್ ಇದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...