More

  ರೋಗ ತಡೆಗೆ ಸಮುದಾಯ ಪಾತ್ರ ಮುಖ್ಯ

  ಬಳ್ಳಾರಿ : ಡೆಂಗ್ಯು ನಿಯಂತ್ರಣ, ತಡೆಗಟ್ಟುವಿಕೆ ಹಾಗೂ ಅದರ ಮುಂಜಾಗ್ರತಾ ಕ್ರಮಗಳ ಅನುಷ್ಠಾನದಲ್ಲಿ ಸಮುದಾಯದ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಹೇಳಿದರು.
  ನಗರದ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ
  ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ
  ಗುರುವಾರ ನಡೆದ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣದಿಂದ ‘ರಾಷ್ಟ್ರೀಯ ಡೆಂಗಿ ದಿನಾಚರಣೆ’ ಅಂಗವಾಗಿ ‘ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ’ ಎಂಬ ಘೋಷವಾಕ್ಯದೊಂದಿಗೆ ಸಮುದಾಯದಲ್ಲಿ ಡೆಂಗಿ ಜ್ವರದ ಬಗ್ಗೆ ಅರಿವು ಬೈಕ್‍ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.
  ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ಡೆಂಗೀ ನಿಯಂತ್ರಣ ಕ್ರಮಗಳನ್ನು ಸಮುದಾಯದ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾರ್ವಜನಿಕರೊಂದಿಗೆ ನಿಕಟ ಸಂಪರ್ಕವಿರುವ ಸರ್ಕಾರ-ಸರ್ಕಾರೇತರ ಸಂಘ ಸಂಸ್ಥೆಗಳು, ಸ್ವಯಂ ಸೇವಾ ಸಂಘಗಳ ಸಹಭಾಗಿತ್ವ ಅನಿವಾರ್ಯವಾಗಿದ್ದು, ಇದರಿಂದ ಡೆಂಗಿ ರೋಗ ಪ್ರಸರಣವನ್ನು ನಿಯಂತ್ರಣ ಮಾಡಬಹುದು ಎಂದು ಅಭಿಪ್ರಾಯ ಪಟ್ಟರು.
  ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಮಾತನಾಡಿ, ಮುಂಬರುವ ಮುಂಗಾರು ಸಮಯದಲ್ಲಿ ಮನೆಯ ಸುತ್ತಮುತ್ತಲಿನ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ಮಳೆನೀರಿನಲ್ಲಿ ಈಡೀಸ್ ಸೊಳ್ಳೆಗಳ ಉತ್ಪತ್ತಿಯನ್ನು ತಡೆಗಟ್ಟುವಲ್ಲಿ ಕ್ರಮ ಕೈಗೊಳ್ಳಬೇಕು ಎಂದರು. ಯಾವುದೇ ಜ್ವರವಿದ್ದರೂ ನಿರ್ಲಕ್ಷ್ಯ ಮಾಡದೇ, ತಕ್ಷಣ ವೈದ್ಯರ ಬಳಿ ಭೇಟಿ ನೀಡಿ, ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಡೆಂಗೀ ಜ್ವರದಿಂದ ಉಂಟಾಗುವ ಸಾವು ನೋವುಗಳನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts