More

  ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

  ಹಾಸನ : ಎಸ್ಪಿ ನಿರ್ದೇಶನದಂತೆ ಪೆನ್ಷನ್ ಮೊಹಲ್ಲಾ ಇನ್ಸ್ ಪೆಕ್ಟರ್ ಟಿ.ಎಸ್. ಮಧು ಅವರ ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ರೌಡಿ ಶೀಟರ್‌ಗಳು, ಮಟ್ಕಾ ದಂಧೆ, ಕಳ್ಳತನ, ಗಾಂಜಾ, ಜೂಜು ಸೇರಿದಂತೆ ವಿವಿಧ ಪ್ರಕರಣದಲ್ಲಿ ಭಾಗಿಯಾಗಿರುವ 70 ಜನ ಸಕ್ರಿಯ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇವರಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಒಂದು ಪ್ರಕರಣ ದಾಖಲು ಮಾಡಲಾಗಿದೆ.
  ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರ ನಿರ್ದೇಶನದಂತೆ ಹಾಸನ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಟಿ.ಎಸ್. ಮಧು ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಕಳೆದ ಮೂರು ದಿನಗಳಿಂದ ಪೆನ್ಷನ್ ಮೊಹಲ್ಲಾ, ಶ್ರೀನಗರ, ಅಮಿರ್ ಮೊಹಲ್ಲಾ, ತಣ್ಣೀರುಹಳ್ಳ, ವಲ್ಲಬಾಯಿ ರಸ್ತೆ ಸೇರಿದಂತೆ ಇತರೆ ಭಾಗಗಳಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಅಪರಾಧ ಕೃತ್ಯ ಎಸಗುವವರಿಗೆ ಚುರುಕು ಮುಟ್ಟಿಸಿದ್ದಾರೆ.
  ಸುಮಾರು 70 ಜನರ ಮನೆಗಳನ್ನು ಕಳೆದ ಮೂರು ದಿನಗಳಿಂದ ಪರಿಶೀಲನೆ ಮಾಡಲಾಗಿದ್ದು, ಮನೆಗಳಲ್ಲಿ ಮಾರಕಾಸ್ತ್ರಗಳ ಸಂಗ್ರಹ ಪರಿಶೀಲನೆ, ಇತರೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲಾಗಿದೆ. ಜತೆಗೆ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡದಂತೆ ಎಚ್ಚರಿಕೆ ಕೊಡಲಾಗಿದೆ. ಆರೋಪಿಗಳ ಪಟ್ಟಿಯಲ್ಲಿ ನೂರಕ್ಕೆ ಹೆಚ್ಚು ಜನರು ಇದ್ದು, ಇವರಲ್ಲಿ ಯಾರೂ ಮತ್ತೆ ಅಪರಾಧ ಕೃತ್ಯ ಎಸಗದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts