ಚಿತ್ರದುರ್ಗ: ಲೋಕಾಯುಕ್ತ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಸಮನ್ವಯದಿಂದ ಕಾರ‌್ಯನಿರ್ವಹಿಸಿದರೆ ಸಾರ್ವಜನಿಕರ ಸಮಸ್ಯೆಗಳನ್ನು ಪರಿ ಹರಿಸುವುದೊರೊಂದಿಗೆ ದುರಾಡಳಿತಕ್ಕೂ ಕಡಿವಾಣ ಹಾಕಬಹುದಾಗಿದೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಹೇಳಿದರು.
ಕರ್ನಾಟಕ ಲೋಕಾಯುಕ್ತ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯಾಂಗ ಘಟಕದ ಸಹಯೋಗದಲ್ಲಿ ಶುಕ್ರ ವಾರ ಜಿಲ್ಲಾ ನ್ಯಾಯಾಲಯದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಪಾತ್ರ ಕು ರಿತು, ಜಿಲ್ಲಾ ನ್ಯಾಯಾಧೀಶರೊಂದಿಗೆ ಏರ್ಪಡಿಸಿದ್ದ ಸಂವಾದದಲ್ಲಿ ಅವರು ಮಾತನಾಡಿದರು.
ಪ್ರಾಧಿಕಾರ ಅಸ್ತಿತ್ವಕ್ಕೆ ಬರುವ ಮುನ್ನ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾನೂನು ಸೇವಾ ಸಹಾಯ ಘಟಕ ಕಾರ‌್ಯ ನಿರ್ವಹಿಸುತ್ತಿತ್ತು. 1987ರ ಕಾನೂನು ಸೇವೆಗಳ ಪ್ರಾಧಿಕಾರ ಕಾಯ್ದೆ ಮೂಲಕ ರಾಷ್ಟ್ರ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಪ್ರಾಧಿಕಾರಗಳ ರಚನೆಯಾಗಿದ್ದು, ಇವುಗಳಿಂದ ಸಾರ್ವಜನಿಕರಿಗೆ ಒಳಿತಾಗುತ್ತಿದೆ. ನ್ಯಾಯಾಂಗ ವ್ಯವಸ್ಥೆ ಬಗ್ಗೆ ಜನರಲ್ಲಿ, ಸರ್ಕಾರಕ್ಕೆ ನಂಬಿಕೆ ಇದೆ. ನ್ಯಾಯಾಧೀಶರು ದೇವರ ಪ್ರತಿನಿಧಿಗಳಾಗಿ ನ್ಯಾಯದಾನ ಮಾಡುತ್ತಾರೆ. ಜನರು ನ್ಯಾಯಾಧೀಶರನ್ನು ಉನ್ನತ ಸ್ಥಾನದಲ್ಲಿ ನೋಡುತ್ತಾರೆ ಎಂದರು.
ದುರಾಡಳಿತ ನಿಯಂತ್ರಣಕ್ಕೆ ಸ್ವಾಯತ್ತ ಸಂಸ್ಥೆ ಲೋಕಾಯುಕ್ತ ಸ್ಥಾಪಿಸಲಾಗಿದೆ. ಸಾಕಷ್ಟು ಜನರಿಗೆ ಲೋಕಾಯುಕ್ತ ಕಾಯ್ದೆ, ಸಂಸ್ಥೆ ಕಾರ‌್ಯ ವೈಖರಿಯ ಪರಿಚಯವಿಲ್ಲ. ಜನರು ಸಾಕಷ್ಟು ಸಮಸ್ಯೆಗಳನ್ನು ಹೊತ್ತು ತರುತ್ತಾರೆ. ಆದರೆ ಈ ಕಾಯ್ದೆ ಸೆಕ್ಷನ್ 8 ಹಾಗೂ 9 ರಡಿ ಸರ್ಕಾರಿ ನೌಕರರ ಭಾಗಿಯಾಗಿರದ ಪ್ರಕರಣಗಳನ್ನು ದಾಖಲಿಸಲಾಗದು. ಪ್ರಾಧಿಕಾರದ ಮುಂದೆಯೂ ಸಾರ್ವಜನಿಕರು ಅಳಲು ತೋಡಿಕೊಳ್ಳುತ್ತಾ ರೆ. ಇಂತಹ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸಿ ಎರಡು ಸಂಸ್ಥೆಗಳು ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು. ಈ ಹಿನ್ನೆಲೆಯಲ್ಲಿ ಚಿತ್ರ ದುರ್ಗ ಸೇರಿ 19 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಗಳೊಂದಿಗೆ ಸಂವಾದ ನಡೆಸಲಾಗಿದೆ ಎಂದರು.
ಸಾಕಷ್ಟು ಸಂದರ್ಭದಲ್ಲಿ ಪ್ರಕರಣ ದಾಖಲು ಮುನ್ನವೇ ಸಾರ್ವಜನಿಕರ ತೊಂದರೆ ಪರಿಹರಿಸಬಹುದು. ನ್ಯಾಯಾಧೀಶರು ಗಮನಿ ಸುತ್ತಾರೆ ಎಂದರೆ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ. ಕಾನೂನು ಸೇವಾ ಪ್ರಾಧಿಕಾರದ ಮುಂದೆ, ಲೋಕಾಯುಕ್ತಕ್ಕೆ ಸಲ್ಲಿಕೆಯಾಗಬಹುದಾದ ಪ್ರಕರಣಗಳಿದ್ದರೆ ಶಿಫಾರಸು ಮಾಡಬಹುದು ಎಂದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ್, ಲೋಕಾಯುಕ್ತದ ಅಪರ ನಿಬಂಧಕರಾದ ಪೃಥ್ವಿರಾಜ್ ವರ್ಣೇಕರ್ ಹಾಗೂ ಜಿ.ವಿ.ವಿಜಯಾನಂದ, ಉಪಲೋಕಾಯುಕ್ತರ ಆಪ್ತ ಕಾರ‌್ಯದರ್ಶಿ ಕಿರಣ್ ಪಿ.ಎಂ.ಪಾಟೀಲ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್ ಹಾಗೂ ನ್ಯಾಯಾಧೀಶರು ಇದ್ದರು.
ಲೋಕಾಯುಕ್ತ, ಕಾನೂನು ಸೇವಾ ಪ್ರಾಧಿಕಾರದ ಸಮನ್ವಯ ಅಗತ್ಯ

ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips
Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…
ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd
bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…
ಸುರಕ್ಷಿತ ಪ್ರಯಾಣಕ್ಕಾಗಿ ನಿಮ್ಮ ಕಾರಿನಲ್ಲಿ ಇರಲೇಬೇಕಾದ 6 ವಸ್ತುಗಳು ಯಾವವು ಗೊತ್ತಾ? Vastu Tips
Vastu Tips: ನಮ್ಮ ಮನೆಗಳು ಮತ್ತು ಕಚೇರಿಗಳಿಗೆ ಮಾತ್ರವಲ್ಲದೆ, ನಮ್ಮ ವಾಹನಗಳಿಗೂ ಕೆಲವು ವಾಸ್ತು ನಂಬಿಕೆಗಳಿವೆ.…