25.7 C
Bangalore
Monday, December 16, 2019

ಲೋಕ ಫೈಟ್​ಗೆ ಜಿಲ್ಲಾಡಳಿತ ಸಿದ್ಧತೆ

Latest News

ಸರ್ಕಾರದ ಸಾಧನೆಗಳ ಅನಾವರಣ

ವಿಜಯಪುರ: ನೆರೆ ಹಾವಳಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳ ಕುರಿತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಮ್ಮಿಕೊಂಡ ಛಾಯಾಚಿತ್ರ ಪ್ರದರ್ಶನಕ್ಕೆ...

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ...

ಕ್ರೀಡೆ, ಯೋಗಕ್ಕೆ ಆದ್ಯತೆ ನೀಡಿ

ಹುನಗುಂದ: ಮಾನಸಿಕ ನೆಮ್ಮದಿಯೊಂದಿಗೆ ದೇಹಕ್ಕೆ ಹೊಸ ಉಲ್ಲಾಸ ನೀಡುವ ಕ್ರೀಡೆ ಹಾಗೂ ಯೋಗ ಮಾಡಲು ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ವಿಜಯ ಮಹಾಂತೇಶ...

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ತಮ್ಮ ಪ್ರಜೆಗಳನ್ನು ವಾಪಸ್​ ಕರೆಯಿಸಿಕೊಳ್ಳಲು ಸಿದ್ಧ ಎಂದ ಬಾಂಗ್ಲಾದೇಶ

ಢಾಕಾ: ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ವಾಪಸ್ ಪಡೆಯಲು ಸಿದ್ದವಿರುವುದಾಗಿ ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ್ ಮೆಮೊನ್ ಹೇಳಿದ್ದಾರೆ. ಪೌರತ್ವ ಕಾಯ್ದೆ...

ಪೌರತ್ವ ತಿದ್ದುಪಡಿ ಮಸೂದೆ ತಿರಸ್ಕರಿಸಲು ಒತ್ತಾಯ

ವಿಜಯಪುರ: ಪೌರತ್ವ ತಿದ್ದುಪಡಿ ಮಸೂದೆ-2019 ತಿರಸ್ಕರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ೆಡರೇಷನ್ (ಎಸ್‌ಎ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎ್ಐ) ಕಾರ್ಯಕರ್ತರು...

ತುಮಕೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದು ಅಧಿಕಾರಿ, ಸಿಬ್ಬಂದಿ ಚುನಾವಣೆಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್​ಕುಮಾರ್ ತಾಕೀತು ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ಆಯೋಜಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಎಲ್ಲ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣಾ ಸಿದ್ಧತೆ ಕುರಿತು ನಡೆಯುವ ಎಲ್ಲ ತರಬೇತಿ ಹಾಗೂ ಸಭೆಗೆ ಕಡ್ಡಾಯವಾಗಿ ಹಾಜರಾಗಲೇಬೇಕು ಎಂದು ಸೂಚಿಸಿದರು.

ಸೂಚಿಸಿದ ಚುನಾವಣಾ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಲೋಪದೋಷಗಳಿಲ್ಲದೆಪಾರದರ್ಶಕವಾಗಿ ಮುಗಿಸಬೇಕು. ನೋಡಲ್ ಅಧಿಕಾರಿಗಳು ತಪ್ಪದೇ ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ರ‍್ಯಾಂಪ್ ವ್ಯವಸ್ಥೆ, ಕಿಟಕಿ-ಬಾಗಿಲುಗಳು ಸುಸ್ಥಿತಿ, ಶೌಚಗೃಹ, ಬೆಳಕು, ನೀರಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿ ಅಗತ್ಯವಿರುವ ಕಡೆಗಳಲ್ಲಿ ಮೂಲಸೌಲಭ್ಯ ಒದಗಿಸುವುಂತೆ ಸೂಚಿಸಿದರು.

ಜಿಪಂ ಸಿಇಒ, ಜಿಲ್ಲಾ ಪೊಲೀಸ್ ಅಧೀಕ್ಷಕರು ಚುನಾವಣಾ ಮಾಹಿತಿಯನ್ನು ನನಗೆ ಅಪ್​ಡೇಟ್ ಮಾಡುತ್ತಿರಬೇಕು. ಚುನಾವಣಾ ಮಾದರಿ ನೀತಿ ಸಂಹಿತೆಯಡಿ ಮತದಾನ ದಿನದ 48 ಗಂಟೆಗಳ ಮುನ್ನ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಸಾಮಗ್ರಿಗಳನ್ನು ತೆರವುಗೊಳಿಸಬೇಕು. ನೀತಿ ಸಂಹಿತೆ ಜಾರಿ ಅವಧಿಯಲ್ಲಿ ಪ್ರಚಾರಕ್ಕೆ ಬಳಸಲಾಗುವ ಕರಪತ್ರ, ಪೋಸ್ಟರ್, ಹೋರ್ಡಿಂಗ್ಸ್, ಧ್ವನಿವರ್ಧಕಗಳು, ವಿಡಿಯೋ ಚಿತ್ರೀಕರಣ, ಛಾಯಾಚಿತ್ರಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಿಪಂ ಸಿಇಒ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಚುನಾವಣಾ ತಹಸೀಲ್ದಾರ್ ಮೋಹನ್ ಮತ್ತಿತರರು ಇದ್ದರು.

ಮತಗಟ್ಟೆ ದುರಸ್ತಿಗೆ ಸುತ್ತೋಲೆ : ಮತದಾನ ಸಂದರ್ಭದಲ್ಲಿ ಮತಗಟ್ಟೆಗಳಲ್ಲಿ ಆಯಾ ಗ್ರಾಪಂ ವತಿಯಿಂದ ಅಂಗವಿಕಲರಿಗೆ ವ್ಹೀಲ್ ಚೇರ್, ದೃಷ್ಠಿ ದೋಷವುಳ್ಳವರಿಗೆ ಭೂತಕನ್ನಡಿ ಒದಗಿಸುವ ವ್ಯವಸ್ಥೆ ಮಾಡಬೇಕು. ಮತದಾನ ಕೊಠಡಿ ದುರಸ್ಥಿಯಾಗಿದ್ದಲ್ಲಿ ಕೂಡಲೇ ಸರಿಪಡಿಸಲು ಎಲ್ಲ ಪಿಡಿಒಗಳಿಗೆ ಸುತ್ತೋಲೆ ಹೊರಡಿಸುವಂತೆ ಅಧಿಕಾರಿಗಳಿಗೆ ಡಿಸಿ ರಾಕೇಶ್​ಕುಮಾರ್ ತಿಳಿಸಿದರು.

ಸರ್ಕಾರಿ ಇಲಾಖೆ ಅಧಿಕಾರಿ, ಸಿಬ್ಬಂದಿ ರಾಜಕೀಯ ಪಕ್ಷ, ನಾಯಕರ ಪರವಾಗಿ ಬಹಿರಂಗವಾಗಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು, ವಿಡಿಯೋ ಹಂಚಿಕೊಳ್ಳುವುದು ಕಂಡುಬಂದರೆ, ಸಾರ್ವಜನಿಕರಿಂದ ದೂರು ಬಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು.

| ಡಾ.ಕೆ.ರಾಕೇಶ್​ಕುಮಾರ್, ಜಿಲ್ಲಾಧಿಕಾರಿ

- Advertisement -

Stay connected

278,757FansLike
589FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...