25.7 C
Bangalore
Sunday, December 15, 2019

ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ವಾದಿರಾಜ ವ್ಯಾಸಮುದ್ರ ಕಲಬುರಗಿ
ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎನಿಸಿರುವ ಕಲಬುರಗಿಯಿಂದ ಲೋಹದ ಹಕ್ಕಿಗಳ ಹಾರಾಟಕ್ಕೆ ಕ್ಷಣಗಣನೆ ಆರಂಭವಾಗಿದೆ. ವಿಮಾನ ನಿಲ್ದಾಣ ಶುರುವಾಗಬೇಕೆಂಬ ದಶಕದ ಕನಸು ನನಸಾಗುತ್ತಿರುವ ಈ ಘಳಿಗೆ ಸ್ಥಳೀಯರಲ್ಲಿ ಸಂಭ್ರಮ ಮೂಡಿಸಿದ್ದು, ಹಿಂದುಳಿದ ಭಾಗದ ಅಭಿವೃದ್ಧಿ ಪಥದಲ್ಲಿ ಮತ್ತೊಂದು ಹೆಜ್ಜೆ ಇರಿಸಿದಂತಾಗಿದೆ.
ವೇಗವಾಗಿ ಬೆಳೆಯುತ್ತಿರುವ ಮಹಾನಗರಕ್ಕೆ ನಾಗರಿಕ ವಿಮಾನ ತೀರ ಅಗತ್ಯವಿತ್ತು. ಇಲ್ಲಿಂದ ಬೆಂಗಳೂರು, ಮುಂಬಯಿ, ಅಹ್ಮದಾಬಾದ್, ನವದೆಹಲಿ ಸೇರಿ ಇತರೆಡೆ ವಿಮಾನಯಾನ ಸಂಪರ್ಕ ಬೇಕು ಎಂಬುದು ವ್ಯಾಪಾರೋದ್ಯಮಿಗಳ ಆಗ್ರಹವಾಗಿತ್ತು.
ಶುಕ್ರವಾರ ಮಧ್ಯಾಹ್ನ 1.30ಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲೋಹದ ಹಕ್ಕಿಗಳ ಹಾರಾಟಕ್ಕೆ ಚಾಲನೆ ನೀಡಲಿದ್ದಾರೆ. ಮೊದಲ ಹಂತದಲ್ಲಿ ಕಲಬುರಗಿ-ಬೆಂಗಳೂರು ಮಧ್ಯೆ ವಿಮಾನ ಸೇವೆ ಸಿಗಲಿದ್ದು, ಬರುವ ದಿನಗಳಲ್ಲಿ ದೇಶ, ವಿದೇಶಕ್ಕೆ ಹಾರಬೇಕೆಂಬ ಸ್ಥಳೀಯರ ಬಯಕೆ ಈಡೇರಲಿದೆ.
ಕಲ್ಯಾಣ ಕರ್ನಾಟಕ ಕೇಂದ್ರ ಸ್ಥಾನ ಕಲಬುರಗಿ ಅಭಿವೃದ್ಧಿಗೆ ನಾನಾ ಪ್ರಯತ್ನ ನಡೆದಿವೆ. ವಿವಿಧೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಸಂಪರ್ಕ ಇವೆ. ದೇಶದ ಪ್ರಮುಖ ನಗರಗಳಿಗೆ ರೈಲ್ವೆ ಸಂಪರ್ಕಕ್ಕೆ ಕಲಬುರಗಿ ಕೊಂಡಿಯಾಗಿದೆ. ಇದೀಗ ವಿಮಾನ ಸೇವೆ ಆರಂಭವಾಗುತ್ತಿರುವುದು ಈ ಭಾಗದ ವ್ಯಾಪಾರೋದ್ಯಮ ಸೇರಿ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರವಾಸೋದ್ಯಮಕ್ಕೂ ಉತ್ತೇಜನ ನೀಡಲಿದೆ.
ಉದ್ಘಾಟನೆ ಹಿನ್ನ್ನೆಲೆಯಲ್ಲಿ ನಿಲ್ದಾಣ ಮದುವೆ ಮನೆಯಂತೆ ಸಿಂಗಾರವಾಗಿದೆ. ಇಲ್ಲಿಂದ ಬೆಂಗಳೂರಿಗೆ ತೆರಳುವ ಮೊದಲ ವಿಮಾನದ ಎಲ್ಲ ಟಿಕೆಟ್ ಮುಂಚಿತವೇ ಬುಕ್ ಆಗಿವೆ. ಸ್ಥಳೀಯ ಸಂಸದ ಡಾ.ಉಮೇಶ ಜಾಧವ್ ಅವರೇ ಮೊದಲ ಟಿಕೆಟ್ ಪಡೆದಿದ್ದು ವಿಶೇಷ. ನಮ್ಮೂರಿನಿಂದ ಲೋಹದ ಹಕ್ಕಿಗಳ ಮೊದಲ ಹಾರಾಟ ನೋಡಲು ಕಾತರರಾಗಿದ್ದೇವೆ ಎಂದು ಜನ ಖುಷಿಯಿಂದ ಹೇಳುತ್ತಿದ್ದಾರೆ. ಸ್ಟಾರ್ ಏರ್ನವರು ಮೊದಲ ಸೇವೆ ಆರಂಭಿಸಿ ಹೊಸ ಮುನ್ನುಡಿ ಬರೆದಿದ್ದಾರೆ
2008ರಲ್ಲಿ ಯಡಿಯೂರಪ್ಪ ಸಿಎಂ ಇದ್ದಾಗ ಶ್ರೀನಿವಾಸ ಸರಡಗಿ ಬಳಿ ವಿಮಾನ ನಿಲ್ದಾಣಕ್ಕೆ ಅಡಿಗಲ್ಲು ಹಾಕಿದ್ದರು. 11 ವರ್ಷ ಬಳಿಕ ಅವರಿಂದಲೇ ಚಾಲನೆ ಸಿಗುತ್ತಿರುವುದು ವಿಶೇಷ. ಕಾಮಗಾರಿ ನಿರೀಕ್ಷಿತ ವೇಗವಾಗಿ ನಡೆದಿಲ್ಲ. ಆದರೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾಜರ್ುನ ಖಗರ್ೆ ಸಂಸದರಾದ ನಂತರ ಚುರುಕು ಕೊಟ್ಟಿದ್ದನ್ನು ಮರೆಯಲಾಗದು. ಈಗ ಡಾ.ಉಮೇಶ ಜಾಧವ್ ಸ್ಥಳೀಯ ಬಿಜೆಪಿ ಸಂಸದರು. ರಾಜ್ಯ, ಕೇಂದ್ರದಲ್ಲೂ ಬಿಜೆಪಿ ಸಕರ್ಾರವಿದೆ. ಹೀಗಾಗಿ ವಿಮಾನಯಾನ ಆರಂಭಿಸಿದ ಶ್ರೇಯ ತಮ್ಮದಾಗಲಿದೆ ಎಂಬುದು ಡಾ.ಜಾಧವ್ ಬಯಕೆ.

756 ಎಕರೆ ಜಾಗ
178 ಕೋಟಿ ವೆಚ್ಚ
ವಿಮಾನ ನಿಲ್ದಾಣ 756 ಎಕರೆ ವಿಸ್ತಾರದಲ್ಲಿ 178 ಕೋಟಿ ರೂ. ವೆಚ್ಚದಲ್ಲಿ ನಿಮರ್ಾಣಗೊಂಡಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಕ ಅತಿ ಉದ್ದನೆಯ ರನ್ವೇ ಹೊಂದಿದ ರಾಜ್ಯದ 2ನೇ ಮತ್ತು ದೇಶದ 8ನೇ ವಿಮಾನ ನಿಲ್ದಾಣ ಎಂಬ ಖ್ಯಾತಿ ಇದಕ್ಕಿದೆ.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...