ಬೆಳಗಾವಿ: ಮಹಾನಗರ ಪಾಲಿಕೆ ವತಿಯಿಂದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಕೊಡಲಾಗುವ ಲ್ಯಾಪ್‌ಟಾಪ್ ಖರೀದಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪಾಲಿಕೆ ಆವರಣದಲ್ಲಿ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಶಕ್ತಿ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಾಲಿಕೆಯ ಎಸ್‌ಸಿಟಿಪಿ, ಟಿಎಸ್‌ಪಿ ಯೋಜನೆ ಅಡಿಯಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ನೀಡಲು 20 ಲಕ್ಷ ರೂ. ವೆಚ್ಚದಲ್ಲಿ ಲ್ಯಾಪ್‌ಟಾಪ್ ಖರೀದಿಸಲಾಗಿದೆ. ಆದರೆ, ಮಾರುಕಟ್ಟೆಯಲ್ಲಿ 30 ಸಾವಿರ ರೂ. ಮೌಲ್ಯದ ಲಾಪ್‌ಟಾಪ್‌ಗಳಿಗೆ 50 ಸಾವಿರ ರೂ. ಎಂದು ನಮೂದಿಸಿ ಬಿಲ್ ತೆಗೆದಿದ್ದಾರೆ.
ಇದರಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದ್ದು, ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಲಕ್ಷ್ಮಣ ಕೋಲಕಾರ, ಅರುಣ ಕೋಲಕಾರ, ಕಸ್ತೂರಿ ನಿಂಗನೂರ, ಶೋಭಾ, ಯಶವಂತ ತಳವಾರ ಇತರರಿದ್ದರು.