ವಖ್ಫ್ ಬೋರ್ಡ್ ನಿಂದ ಮಹಿಳಾ ಪದವಿ ಪೂರ್ವ ಕಾಲೇಜು

ಕಲಬುರಗಿ: ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ ಪದವಿ ಪೂರ್ವ ಕಾಲೇಜು ಸ್ಥಾಪನೆ ಗೆ ಅನುಮೋದನೆ ದೊರೆತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ 47.76 ಕೋಟಿ ರೂ. ವೆಚ್ಚದಲ್ಲಿ 15 ಮಹಿಳಾ. ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಅನುಮೋದನೆ ದೊರೆತಿದೆ. ಪ್ರತಿ ಕಾಲೇಜಿಗೆ 3.18ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.
ಸಂಪುಟ ಸಭೆ ನಂತರ ಪತ್ರಿಕಾ ಹೇಳಿಕೆ ನೀಡಿರುವ ಅವರು,
ವಖ್ಫ್ ಬೋರ್ಡ್ ನಲ್ಲಿ ಜಮೆ ಆಗಿರುವ ಬಡ್ಡಿ ಮೊತ್ತ 47.76 ಕೋಟಿ ರೂ. ನಲ್ಲಿ ಬಾಗಲಕೋಟೆ, ಚಿತ್ರದುರ್ಗ, ಬೀದರ್, ಬಳ್ಳಾರಿ, ಕೊಪ್ಪಳ, ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ವಿಜಯ ನಗರ, ಕಲಬುರಗಿ, ಉಡುಪಿ, ವಿಜಯಪುರ, ಕೋಲಾರ, ದಾವಣಗೆರೆ ಹಾಗೂ ಧಾರವಾಡ ದಲ್ಲಿ ಮಹಿಳಾ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದರು.
ಮಹಿಳಾ ಕಾಲೇಜು ಸ್ಥಾಪನೆಯಿಂದ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಕ್ಕೆ ಅನುಕೂಲ ವಾಗಲಿದೆ ಎಂದು ಹೇಳಿದ್ದಾರೆ.
ಇದರ ಜತೆಗೆ, ಕರ್ನಾಟಕ ಗೃಹ ಮಂಡಳಿ ವತಿಯಿಂದ 50:50 ಅನುಪಾತದಲ್ಲಿ ಕಲಬುರಗಿಯ ತಾವರೆಗೆರೆ ಯಲ್ಲಿ 80ಕೋಟಿ ರೂ. ವೆಚ್ಚದಲ್ಲಿ ಒಟ್ಟು 286.28 ಎಕರೆ ಪೈಕಿ ಮೊದಲ ಹಂತದಲ್ಲಿ
87.34 ಎಕರೆ ಜಮೀನಿನಲ್ಲಿ ಹೊಸ ಬಡಾವಣೆ ನಿರ್ಮಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.

Share This Article

Bathing : ನೀರಿನಲ್ಲಿ ಇವುಗಳನ್ನು ಬೆರೆಸಿ ಸ್ನಾನ ಮಾಡಿದ್ರೆ ಸಾಕು ಅದೃಷ್ಟ ಖುಲಾಯಿಸುತ್ತದೆ…

ಬೆಂಗಳೂರು: ಪ್ರತಿದಿನ ಸ್ನಾನ ( Bathing ) ಮಾಡುವ ಅಭ್ಯಾಸವನ್ನು ಸಾಮಾನ್ಯವಾಗಿ ಎಲ್ಲರೂ ರೂಢಿಸಿಕೊಂಡಿರುತ್ತಾರೆ. ನೀವು…

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…