25.7 C
Bangalore
Sunday, December 15, 2019

ವರದಿ ಸಲ್ಲಿಸಿದ ವೈದ್ಯರ ಅಮಾನತಿಗೆ ಯತ್ನ?

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಜೊಯಿಡಾ: ‘ಗುಂದ ಮತ್ತು ರಾಮನಗರ ಪಶು ವೈದ್ಯಾಧಿಕಾರಿಗಳ ಕರ್ತವ್ಯಲೋಪದ ಬಗ್ಗೆ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿತ್ತು. ಇಬ್ಬರ ವಿರುದ್ಧ ಕ್ರಮಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸಿದ್ದೆ. ಆದರೆ, ಈ ವೈದ್ಯರು ನನ್ನನ್ನೇ ಅಮಾನತುಗೊಳಿಸಲು ಪ್ರಯತ್ನಿಸಿದ್ದರು’.

ಇಂತಹದ್ದೊಂದು ಸಂಗತಿಯನ್ನು ಗುರುವಾರ ತಾಪಂ ಸಾಮಾನ್ಯ ಸಭೆಯಲ್ಲಿ ತಾಲೂಕು ಪಶು ವೈದ್ಯಾಧಿಕಾರಿ ದೇವೇಂದ್ರ ಲಮಾಣಿ ಬಿಚ್ಚಿಟ್ಟರು. ಗುಂದ ಮತ್ತು ರಾಮನಗರ ಪಶು ವೈದ್ಯಾಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಜಿಪಂ ಸದಸ್ಯ ಸಂಜಯ ಹಣಬರ ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ದೇವೇಂದ್ರ, ಹಿಂದಿನ ಘಟನೆ ವಿವರಿಸಿದರು. ಅಲ್ಲದೆ, ‘ಇವರ ಮೇಲೆ ನಾನು ಹೇಗೆ ಕ್ರಮ ಕೈಗೊಳ್ಳಲಿ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ತಾಲೂಕು ಆರೋಗ್ಯ ಅಧಿಕಾರಿ ಸುಜಾತಾ ಉಕ್ಕಲಿ ಮಾತನಾಡಿ, ನಾಯಿ ಹಾಗೂ ಹಾವು ಕಡಿತಕ್ಕೆ ರಾಮನಗರ ಆಸ್ಪತ್ರೆಯಲ್ಲಿ ಔಷಧ ದಾಸ್ತಾನಿದೆ. ಆದರೆ, ಅಲ್ಲಿ ಎಂಬಿಬಿಎಸ್ ವೈದ್ಯರು ಇಲ್ಲ. ಆಯುಷ್ಯ ವೈದ್ಯರು ಇರುವುದರಿಂದ ಅವರು ಚುಚ್ಚುಮದ್ದು ನೀಡಲು ಸಾಧ್ಯವಿಲ್ಲ. ರಾಮನಗರ, ಜಗಲಬೇಟ ಮತ್ತು ಗುಂದ ಸೇರಿ ಎಲ್ಲ ಆಸ್ಪತ್ರೆ ಕಟ್ಟಡಗಳು ಸೋರುತ್ತಿವೆ. ಈ ಬಗ್ಗೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ’ ಎಂದು ವಿವರಿಸಿದರು.

ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ತಾಲೂಕಿನಲ್ಲಿ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದರೂ ಕೆಲವರು ಇದುವರೆಗೂ ಪರಿಶೀಲನೆಗೆ ಆಗಮಿಸಿಲ್ಲ. ಮುಖ್ಯವಾಗಿ ರಾಮನಗರ ಮತ್ತು ಅಖೇತಿ ಭಾಗದ ನೋಡಲ್ ಅಧಿಕಾರಿಗಳಾದ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಎಸ್. ಹಿರೇಮಠ ಪರಿಶೀಲನೆಗೆ ಬಂದಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಲು ಠರಾವು ಮಾಡಿ, ಜಿಲ್ಲಾಧಿಕಾರಿ ಗಮನಕ್ಕೆ ತನ್ನಿ’ ಎಂದು ಸಂಜಯ ಹಣಬರ ಹೇಳಿದರು.

ಬೆಳೆ ಹಾನಿ ಪ್ರಸ್ತಾವನೆ : ಇದುವರೆಗೆ ತಾಲೂಕಿನಲ್ಲಿ 1109 ಎಕರೆ ಭತ್ತದ ಕ್ಷೇತ್ರ ಹಾನಿಯಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಪರಿಹಾರ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಐ. ಮಾನೆ ತಿಳಿಸಿದರು.

ತಾಪಂ ಅಧ್ಯಕ್ಷೆ ನರ್ಮದಾ ಪಾಟ್ನೆಕರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಿಜಯ ಪಂಡಿತ, ಸದಸ್ಯರಾದ ಶರಧಚ್ಚಂದ್ರ ಗುರ್ಜರ್, ಬಲವಂತ ದೇಸಾಯಿ, ಸುರೇಶ ಬಂಗಾರಿ, ಲಕ್ಷಿ್ಮೕ ಸುಲೆಮನ್, ಸಂತೋಷಿ ಹಣಬರ, ತಾಪಂ ಇಒ ಪ್ರಕಾಶ ಹಾಲಮ್ಮನವರ, ಜೊಯಿಡಾ ಗ್ರಾಪಂ ಉಪಾಧ್ಯಕ್ಷ ಶಾಮ ಪೋಕಳೆ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

48 ಕಡೆ ಯೋಗ್ಯವಲ್ಲ: ಜೊಯಿಡಾ ತಾಲೂಕಿನಲ್ಲಿ 108ಕಡೆ ಕುಡಿಯುವ ನೀರಿನ ಪರೀಕ್ಷೆ ಮಾಡಿದ್ದು, 48 ಕಡೆ ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿದ್ದಾಗಿ ತಾಲೂಕು ಆರೋಗ್ಯ ಅಧಿಕಾರಿ ಸುಜಾತಾ ಉಕ್ಕಲಿ ತಿಳಿಸಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...