ಬಾಗಲಕೊಟೆ: ಬಿವಿವಿ ಸಂಘದ ಬಸವೇಶ್ವರ ಇಂಜಿನಿಯರಿAಗ್ ಕಾಲೇಜಿನ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳಿಗೆ ನೂತನವಾಗಿ ವಸತಿ ನಿಲಯದ ನಿರ್ಮಾಣಕ್ಕೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ. ವೀರಣ್ಣ ಚರಂತಿಮಠ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.
೧.೬೪ ಸಾವಿರ ಚದುರ ಅಡಿಯಲ್ಲಿ ವಸತಿ ನಿಲಯ ನಿರ್ಮಾಣಗೊಳ್ಳಲಿದ್ದು, ೧೨೦೦ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ, ೩೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವ ಕಾರ್ಯದರ್ಶಿ ಮಹೇಶ್ .ಎನ್. ಅಥಣಿ, ವಸತಿ ನಿಲಯಗಳ ಕಾರ್ಯಾಧ್ಯಕ್ಷ ಕುಮಾರಸ್ವಾಮಿ .ಎಂ ಹಿರೇಮಠ (ಚಿತ್ತರಗಿ), ಕಟ್ಟಡ ವಿಭಾಗಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹೇಶ್ ಕಕರಡ್ಡಿ, ಎಸ್ ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ಕಾರ್ಯಧ್ಯಕ್ಷ ಅಶೋಕ ಸಜ್ಜನ್, ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸುಳಿಭಾವಿ, ಶಾಲಾ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಮಹಾಂತೇಶ ಶೆಟ್ಟರ್, ತಾಂತ್ರಿಕ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಆರ್.ಎನ್.ಹೆರಕಲ್ ಇತರರು ಇದ್ದರು.
TAGGED:ಬಾಗಲಕೊಟೆ